2 ಪೂರ್ವಕಾಲ ವೃತ್ತಾಂತ 7:3 - ಕನ್ನಡ ಸತ್ಯವೇದವು J.V. (BSI)
3 ಇಸ್ರಾಯೇಲ್ಯರೆಲ್ಲರೂ ಬೆಂಕಿ ಇಳಿದುಬರುವದನ್ನೂ ಯೆಹೋವನ ತೇಜಸ್ಸು ಆಲಯದಲ್ಲಿರುವದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿ - ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿದೆ ಎಂದು ಕೃತಜ್ಞತಾಸ್ತುತಿಮಾಡಿದರು.
3 ಇಸ್ರಾಯೇಲರೆಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಗಿ ಯೆಹೋವನನ್ನು ಆರಾಧಿಸಿ, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು” ಎಂದು ಕೃತಜ್ಞತಾಸ್ತುತಿ ನಮನ ಮಾಡಿದರು.
3 ಇಸ್ರಯೇಲರೆಲ್ಲರು ಬೆಂಕಿ ಇಳಿದು ಬರುವುದನ್ನೂ ಸರ್ವೇಶ್ವರನ ತೇಜಸ್ಸು ಆಲಯದಲ್ಲಿರುವುದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿದರು; “ಸರ್ವೇಶ್ವರ ಒಳ್ಳೆಯವರು; ಅವರ ಅಚಲ ಪ್ರೀತಿ ಶಾಶ್ವತ” ಎಂದು ಕೃತಜ್ಞತಾಸ್ತುತಿ ಮಾಡಿದರು.
3 ಸೇರಿಬಂದ ಇಸ್ರೇಲ್ ಜನರೆಲ್ಲಾ ಆಕಾಶದಿಂದ ಬೆಂಕಿ ಬೀಳುವದನ್ನೂ ದೇವಾಲಯದಲ್ಲಿ ಯೆಹೋವನ ಮಹಿಮೆ ತುಂಬಿದ್ದನ್ನೂ ನೋಡಿ ನೆಲದ ಮೇಲೆ ಬೋರಲಬಿದ್ದು “ಯೆಹೋವನು ಒಳ್ಳೆಯವನು, ಅವನ ಕರುಣೆಯು ನಿರಂತರಕ್ಕೂ ಇರುವಂಥದ್ದು” ಎಂದು ಹೇಳುತ್ತಾ ದೇವರನ್ನು ಸುತ್ತಿಸಿ ಕೊಂಡಾಡಿದರು.
3 ಇಸ್ರಾಯೇಲರೆಲ್ಲರೂ ಬೆಂಕಿಯು ಇಳಿದದ್ದನ್ನೂ, ಆಲಯದ ಮೇಲೆ ಇರುವ ಯೆಹೋವ ದೇವರ ಮಹಿಮೆಯನ್ನೂ ಕಂಡಾಗ, ಅವರು ನೆಲಕ್ಕೆ ತಮ್ಮ ಮುಖಗಳನ್ನು ಬಾಗಿ, ನೆಲಗಟ್ಟಿನ ಮೇಲೆ ಮೊಣಕಾಲೂರಿ ಆರಾಧಿಸುತ್ತಾ, ಯೆಹೋವ ದೇವರನ್ನು ಕೊಂಡಾಡಿ ಹೇಳಿದ್ದೇನೆಂದರೆ, “ಯೆಹೋವ ದೇವರು ಒಳ್ಳೆಯವರು, ಅವರ ಪ್ರೀತಿಯು ಯುಗಯುಗಕ್ಕೂ ಇರುವುದು.”
ಆಮೇಲೆ ಅವನು ಜನರ ಸಮ್ಮತಿಯಿಂದ ಯೆಹೋವನಿಗೋಸ್ಕರ ಗಾಯನಮಾಡುವದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ - ಪರಿಶುದ್ಧತ್ವವೆಂಬ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ - ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಕೃಪೆಯು ಶಾಶ್ವತವಾಗಿದೆ ಎಂದು ಭಜಿಸಿರಿ ಎಂಬದಾಗಿ ಆಜ್ಞಾಪಿಸಿದನು.
ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನೂ ಸ್ತುತ್ಯಕೃತ್ಯಗಳನ್ನೂ ಆತನು ಕನಿಕರದಿಂದಲೂ ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.