2 ಪೂರ್ವಕಾಲ ವೃತ್ತಾಂತ 7:5 - ಕನ್ನಡ ಸತ್ಯವೇದವು J.V. (BSI)5 ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ, ಕುರಿಗಳು ಲಕ್ಷದ ಇಪ್ಪತ್ತು ಸಾವಿರ. ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲ್ಯರೂ ದೇವಾಲಯವನ್ನು ಪ್ರತಿಷ್ಠಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸಿದನು. ಈ ಪ್ರಕಾರ ಅರಸನು ಮತ್ತು ಎಲ್ಲಾ ಇಸ್ರಾಯೇಲರು ಯೆಹೋವನ ದೇವಾಲಯವನ್ನು ಪ್ರತಿಷ್ಠೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅರಸ ಸೊಲೊಮೋನನು ಬಲಿಯಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ, ಕುರಿಗಳು ಲಕ್ಷದ ಇಪ್ಪತ್ತು ಸಾವಿರ. ಈ ಪ್ರಕಾರ ಅರಸನೂ ಇಸ್ರಯೇಲರೆಲ್ಲರೂ ದೇವಾಲಯವನ್ನು ಪ್ರತಿಷ್ಠಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಸೊಲೊಮೋನ ಅರಸನು ಇಪ್ಪತ್ತೆರಡು ಸಾವಿರ ಹೋರಿಗಳನ್ನೂ ಒಂದು ಲಕ್ಷ ಇಪ್ಪತ್ತು ಸಾವಿರ ಕುರಿಗಳನ್ನೂ ಯಜ್ಞವಾಗಿ ಸಮರ್ಪಿಸಿದನು. ಅರಸನೂ ಎಲ್ಲಾ ಜನರೂ ದೇವಾಲಯವನ್ನು ಆರಾಧನೆಗಾಗಿ ಪ್ರತಿಷ್ಠಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅರಸನಾದ ಸೊಲೊಮೋನನು 22,000 ಹೋರಿಗಳನ್ನೂ, 1,20,000 ಕುರಿಗಳನ್ನೂ ಬಲಿಯಾಗಿ ಅರ್ಪಿಸಿದನು. ಹೀಗೆಯೇ ಅರಸನೂ, ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆ ಮಾಡಿದರು. ಅಧ್ಯಾಯವನ್ನು ನೋಡಿ |
ಉತ್ಸವಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮಪಶು, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವದು ಪ್ರಭುವಿನ ಕರ್ತವ್ಯ; ಇಸ್ರಾಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮಪಶು, ಸಮಾಧಾನಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.
ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ ಇಸ್ರಾಯೇಲ್ಯರಿಗಿರುವ ಶಾಶ್ವತನಿಯಮದ ಪ್ರಕಾರ ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವದಕ್ಕೂ ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವದಕ್ಕೂ ಪ್ರಾತಃಕಾಲ, ಸಾಯಂಕಾಲ, ಸಬ್ಬತ್‍ದಿನ, ಅಮಾವಾಸ್ಯೆ, ನಮ್ಮ ದೇವರಾದ ಯೆಹೋವನ ಜಾತ್ರೆ ಇವುಗಳಲ್ಲಿ ಸರ್ವಾಂಗ ಹೋಮವನ್ನರ್ಪಿಸುವದಕ್ಕೂ ಆ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.
ಯಾಜಕರೂ ಲೇವಿಯರೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ದಾವೀದನು ಯೆಹೋವನ ಗಾಯನಸೇವೆಗೋಸ್ಕರ ಮಾಡಿಸಿದ ವಾದ್ಯಗಳು ಈ ಲೇವಿಯರ ಕೈಯಲ್ಲಿದ್ದವು. ಇವರು ರಾಜ ಸೇವೆಯಲ್ಲಿದ್ದುಕೊಂಡು ದೇವಾರಾಧನೆ ನಡಿಸುತ್ತಾ - ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಮರ್ಪಿಸಿರಿ, ಆತನ ಕೃಪೆಯು ಶಾಶ್ವತವಾಗಿದೆ ಎಂಬದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಇವರ ಎದುರಾಗಿ ನಿಂತು ತುತೂರಿಯೂದುತ್ತಿದ್ದರು. ಇಸ್ರಾಯೇಲ್ಯರೆಲ್ಲರೂ ನಿಂತಿದ್ದರು.