Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:7 - ಕನ್ನಡ ಸತ್ಯವೇದವು J.V. (BSI)

7 ಸೊಲೊಮೋನನು ಮಾಡಿಸಿದ ತಾಮ್ರದ ಯಜ್ಞವೇದಿಯು ಸಮರ್ಪಣೆಯಾಗುವ ಸರ್ವಾಂಗ ಹೋಮದ್ರವ್ಯಗಳನ್ನೂ ಧಾನ್ಯನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಹಿಡಿಯಲಾರದ್ದರಿಂದ ಅವನು ಯೆಹೋವನ ಆಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ ಅಲ್ಲಿ ಇವುಗಳನ್ನೆಲ್ಲಾ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸೊಲೊಮೋನನು ಯೆಹೋವನ ಆಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠೆ ಮಾಡಿದನು. ಸೊಲೊಮೋನನು ಮಾಡಿಸಿದ ತಾಮ್ರದ ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನೂ, ಸಮಾಧಾನ ಯಜ್ಞದ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಅಲ್ಲಿ ಅವನು ಸರ್ವಾಂಗಹೋಮವನ್ನೂ, ಧಾನ್ಯನೈವೇದ್ಯಗಳನ್ನೂ, ಸಮಾಧಾನ ಯಜ್ಞದ ಕೊಬ್ಬಿನ ಕಾಣಿಕೆಯನ್ನು ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸೊಲೊಮೋನನು ಮಾಡಿಸಿದ್ದ ಕಂಚಿನ ಬಲಿಪೀಠವು, ಸಮರ್ಪಣೆಯಾದ ದಹನಬಲಿದ್ರವ್ಯಗಳನ್ನೂ ಧಾನ್ಯನೈವೇದ್ಯಗಳನ್ನೂ ಶಾಂತಿಸಮಾಧಾನಬಲಿಯ ಕೊಬ್ಬನ್ನೂ ಹಿಡಿಯಲಾಗಲಿಲ್ಲ. ಆದ್ದರಿಂದ ಅವನು ಸರ್ವೇಶ್ವರನ ಆಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ, ಅಲ್ಲಿ ಇವುಗಳನ್ನೆಲ್ಲಾ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಲಯದ ಮುಂದೆ ಇದ್ದ ಅಂಗಳವನ್ನು ಸೊಲೊಮೋನನು ಶುದ್ಧೀಕರಿಸಿದನು. ಆ ಸ್ಥಳದಲ್ಲಿ ಸೊಲೊಮೋನನು ಸರ್ವಾಂಗಹೋಮಗಳನ್ನೂ ಧಾನ್ಯನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಸಮರ್ಪಿಸಿದ್ದನು. ಯಾಕೆಂದರೆ ಸೊಲೊಮೋನನು ಮಾಡಿಸಿದ ತಾಮ್ರದ ಯಜ್ಞವೇದಿಕೆಯ ಮೇಲೆ ಇಷ್ಟೆಲ್ಲಾ ಸರ್ವಾಂಗಹೋಮಗಳನ್ನೂ ಧಾನ್ಯನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಸಮರ್ಪಿಸಲು ಆಗದೆಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸೊಲೊಮೋನನು ಮಾಡಿಸಿದ ಕಂಚಿನ ಬಲಿಪೀಠದ ಮೇಲೆ ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಯ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಸೊಲೊಮೋನನು ಯೆಹೋವ ದೇವರ ಆಲಯದ ಮುಂದಿರುವ ಮಧ್ಯದ ಅಂಗಳವನ್ನು ಪ್ರತಿಷ್ಠೆಮಾಡಿ, ಅಲ್ಲಿ ಅವನು ದಹನಬಲಿಗಳನ್ನೂ, ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:7
6 ತಿಳಿವುಗಳ ಹೋಲಿಕೆ  

ಪ್ರಧಾನಯಾಜಕರೂ ಪ್ರಜೆಗಳೂ ಕೂಡಾ ಮಹಾದ್ರೋಹಿಗಳಾಗಿ ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಅನುಸರಿಸಿ ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇವಿುನ ದೇವಾಲಯವನ್ನು ಹೊಲೆಮಾಡಿದರು.


ಇದಲ್ಲದೆ ಅವನು ತಾಮ್ರದ ಯಜ್ಞವೇದಿಯನ್ನು ಮಾಡಿಸಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳ.


ನೀವು ಕಾಣಿಕೆಯಾಗಿಯಾಗಲಿ ಹರಕೆಯನ್ನು ತೀರಿಸುವದಕ್ಕಾಗಿಯಾಗಲಿ ಮಾಡುವ ಸರ್ವಾಂಗಹೋಮ, ಧಾನ್ಯದ್ರವ್ಯ ನೈವೇದ್ಯ, ಪಾನದ್ರವ್ಯಾರ್ಪಣೆ, ಸಮಾಧಾನಯಜ್ಞ ಇವುಗಳನ್ನಲ್ಲದೆ ಹಬ್ಬಗಳ ದಿನಗಳಲ್ಲಿ ಮೇಲೆ ಸೂಚಿಸಿರುವ ಯಜ್ಞಗಳನ್ನೂ ಹೆಚ್ಚಾಗಿ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು