Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:8 - ಕನ್ನಡ ಸತ್ಯವೇದವು J.V. (BSI)

8 ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದವರೆಗಿರುವ ಪ್ರಾಂತಗಳಿಂದ ಮಹಾಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಅದೇ ಕಾಲದಲ್ಲಿ ಏಳು ದಿನಗಳವರೆಗೂ [ಪರ್ಣಶಾಲೆಗಳ] ಜಾತ್ರೆ ನಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ, ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಅಲ್ಲಿ ಏಳು ದಿನಗಳವರೆಗೂ ಪರ್ಣಶಾಲೆಗಳ ಜಾತ್ರೆ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈ ಪ್ರಕಾರ ಸೊಲೊಮೋನನು ಮತ್ತು ಹಮಾತಿನ ದಾರಿಯಿಂದ ಈಜಿಪ್ಟಿನ ಹಳ್ಳದವರೆಗಿರುವ ಪ್ರಾಂತ್ಯಗಳಿಂದ ಮಹಾಸಮೂಹವಾಗಿ ಕೂಡಿಬಂದಿದ್ದ ಇಸ್ರಯೇಲರೆಲ್ಲರು ಅದೇ ಸಮಯದಲ್ಲಿ ಏಳು ದಿನಗಳವರೆಗೂ ಜಾತ್ರೆ ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸೊಲೊಮೋನನೂ ಎಲ್ಲಾ ಇಸ್ರೇಲರೂ ಏಳು ದಿನಗಳ ತನಕ ಪರ್ಣಶಾಲೆಗಳ ಹಬ್ಬವನ್ನು ಆಚರಿಸಿದರು. ಸೊಲೊಮೋನನೊಂದಿಗೆ ಬಹುದೊಡ್ಡ ಇಸ್ರೇಲರ ಸಮೂಹವು ನೆರೆದು ಬಂದಿತ್ತು. ಹಮಾತಿನಿಂದ ಹಿಡಿದು ಈಜಿಪ್ಟಿನ ನದಿಯ ತನಕ ವಾಸಿಸುವವರೆಲ್ಲರೂ ಜೆರುಸಲೇಮಿಗೆ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅದೇ ಕಾಲದಲ್ಲಿ ಸೊಲೊಮೋನನೂ, ಅವನ ಸಂಗಡ ಲೆಬೊ ಹಮಾತಿನ ಪ್ರದೇಶ ಮೊದಲುಗೊಂಡು ಈಜಿಪ್ಟಿನ ನದಿಯವರೆಗೆ ಇರುವ ಮಹಾ ಜನಾಂಗವಾಗಿ ಕೂಡಿಬಂದಿದ್ದ ಸಮಸ್ತ ಇಸ್ರಾಯೇಲರೂ ಅವನ ಸಂಗಡ ಏಳು ದಿವಸ ಹಬ್ಬವನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:8
19 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು - ಐಗುಪ್ತದೇಶದ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ ಅಂದನು;


ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದವರೆಗಿರುವ ಪ್ರಾಂತಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಎರಡು ವಾರ ಅಂದರೆ ಹದಿನಾಲ್ಕು ದಿವಸಗಳವರೆಗೆ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.


ಪರ್ಣಶಾಲೆಗಳ ಹಬ್ಬವೆಂಬ ಯೆಹೂದ್ಯರದೊಂದು ಜಾತ್ರೆಯು ಸಮೀಪವಾದಾಗ


ಸೇನಾಧೀಶ್ವರದೇವರಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ಇಗೋ, ನಾನು ನಿಮಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು; ಅದು ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ತೊರೆಯ ತನಕ ನಿಮ್ಮನ್ನು ಜಜ್ಜಿಬಿಡುವದು.


ಹೀಗೆ ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನಾಚರಿಸುವದಕ್ಕಾಗಿ ಯೆರೂಸಲೇವಿುನಲ್ಲಿ ಕೂಡಿದರು; ಆ ಕೂಟವು ಮಹಾಸಮೂಹವಾಗಿತ್ತು.


ಇಸ್ರಾಯೇಲ್ಯರೆಲ್ಲರೂ ಏಳನೆಯ ತಿಂಗಳಾದ ಆಶ್ವೀಜಮಾಸದಲ್ಲಿ ಜಾತ್ರೆಗೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಕೂಡಿಬಂದರು.


ಇಸ್ರಾಯೇಲ್ಯರೆಲ್ಲರೂ ಏಳನೆಯ ತಿಂಗಳಿನ ಜಾತ್ರೆಗೋಸ್ಕರ ಅರಸನ ಬಳಿಗೆ ಕೂಡಿಬಂದರು.


ದಾವೀದನ ಮಗನೂ ಇಸ್ರಾಯೇಲ್ಯರ ಅರಸನೂ ಆದ ಸೊಲೊಮೋನನ ಕಾಲದಿಂದ ಯೆರೂಸಲೇವಿುನಲ್ಲಿ ಅಂಥ ಉತ್ಸವವು ನಡೆದಿರಲಿಲ್ಲವಾದದರಿಂದ ಯೆರೂಸಲೇವಿುನಲ್ಲಿ ಬಹುಸಂತೋಷವುಂಟಾಯಿತು.


ಏಳನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿವಸಗಳಲ್ಲಿಯೂ ಅವನು ದೋಷಪರಿಹಾರಕಯಜ್ಞಪಶು, ಸರ್ವಾಂಗಹೋಮಪಶು, ಧಾನ್ಯನೈವೇದ್ಯ, ಎಣ್ಣೆ, ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು.


ಪಡುವಲಲ್ಲಿ [ತೆಂಕಣ] ಮೇರೆಯಿಂದ ಹಮಾತಿನ ದಾರಿಗೆ ಎದುರಿನ [ಕರಾವಳಿಯ] ತನಕ ದೊಡ್ಡ ಸಮುದ್ರವು ಎಲ್ಲೆಯಾಗಿರುವದು. ಇದು ಪಡುವಣ ಮೇರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು