2 ಪೂರ್ವಕಾಲ ವೃತ್ತಾಂತ 8:6 - ಕನ್ನಡ ಸತ್ಯವೇದವು J.V. (BSI)6 ಬಾಲಾತೂರು, ತನ್ನ ಎಲ್ಲಾ ಉಗ್ರಾಣದ ಪಟ್ಟಣ, ಯುದ್ಧರಥಗಳನ್ನಿರಿಸುವ ಪಟ್ಟಣ, ರಾಹುತರ ಪಟ್ಟಣ ಇವುಗಳನ್ನೂ ಕಟ್ಟಿಸಿದನು. ಮತ್ತು ಯೆರೂಸಲೇವಿುನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲಿಯೂ ತನ್ನ ಮನಸ್ಸಿಗೆ ಬಂದವುಗಳನ್ನೆಲ್ಲಾ ಕಟ್ಟಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಬಾಲಾತೊರು ಮತ್ತು ಎಲ್ಲಾ ಉಗ್ರಾಣದ ಪಟ್ಟಣ, ಯುದ್ಧರಥಗಳನ್ನಿರಿಸುವ ಪಟ್ಟಣಗಳನ್ನೂ, ರಾಹುತರ ಪಟ್ಟಣಗಳನ್ನೂ ಸೊಲೊಮೋನನು ಕಟ್ಟಿಸಿದನು. ಅಲ್ಲದೆ ಯೆರೂಸಲೇಮಿನಲ್ಲಿಯೂ, ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲಿಯೂ ತನಗೆ ಇಷ್ಟವಾದವುಗಳನ್ನೆಲ್ಲಾ ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಬಾಲಾ ತೂರು, ತನ್ನ ಎಲ್ಲ ಉಗ್ರಾಣದ ಪಟ್ಟಣಗಳು, ಯುದ್ಧರಥಗಳನ್ನಿರಿಸುವ ಪಟ್ಟಣ, ರಾಹುತರ ಪಟ್ಟಣ ಇವುಗಳನ್ನೂ ಕಟ್ಟಿಸಿದನು. ಜೆರುಸಲೇಮಿನಲ್ಲೂ ಲೆಬನೋನಿನಲ್ಲೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲೂ ತನಗೆ ಇಷ್ಟವಾದುವುಗಳನ್ನೆಲ್ಲಾ ಕಟ್ಟಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅಲ್ಲದೆ, ಬಾಲಾತ್ ಪಟ್ಟಣ ಮತ್ತು ಇನ್ನಿತರ ಪಟ್ಟಣಗಳನ್ನು ಉಗ್ರಾಣ ನಗರಗಳನ್ನಾಗಿ ಮಾಡಿದನು. ಅವನು ರಥಗಳನ್ನು ಇಡುವದಕ್ಕಾಗಿಯೂ ಮತ್ತು ರಾಹುತರ ವಾಸಕ್ಕಾಗಿಯೂ ಪಟ್ಟಣಗಳನ್ನು ಕಟ್ಟಿಸಿದನು. ಜೆರುಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ಮತ್ತು ತನ್ನ ಆಡಳಿತದಲ್ಲಿದ್ದ ದೇಶಗಳಲ್ಲಿಯೂ ಸೊಲೊಮೋನನು ತನ್ನ ಇಷ್ಟದ ಪ್ರಕಾರ ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅಲ್ಲದೆ, ಬಾಲಾತ್ ಪಟ್ಟಣವನ್ನೂ, ಉಗ್ರಾಣದ ಪಟ್ಟಣಗಳನ್ನೂ, ತನ್ನ ರಾಹುತರಿಗೋಸ್ಕರ ಮತ್ತು ರಥಗಳಿಗೋಸ್ಕರ ಪಟ್ಟಣಗಳನ್ನೂ ಕಟ್ಟಿಸಿದನು. ಯೆರೂಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲಿಯೂ ತನಗೆ ಇಷ್ಟವಾದವುಗಳನ್ನೆಲ್ಲಾ ಕಟ್ಟಿಸಿದನು. ಅಧ್ಯಾಯವನ್ನು ನೋಡಿ |