Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:4 - ಕನ್ನಡ ಸತ್ಯವೇದವು J.V. (BSI)

4 ಅವನ ಭೋಜನ ಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ ಮತ್ತು ಅವರ ಉಡುಪುಗಳು, ಅವನ ಪಾನಸೇವಕರು, ಅವರ ಉಡುಪುಗಳು ಇವುಗಳನ್ನೂ ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಭೋಜನ ಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ ಮತ್ತು ಅವರ ಉಡುಪುಗಳು, ಅವನ ಪಾನಸೇವಕರು, ಅವರ ಉಡುಪುಗಳು ಇವುಗಳನ್ನೂ, ಅರಸನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗ ಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿದ್ದ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ ಮತ್ತು ಅವರ ಉಡುಪುಗಳು, ಅವನ ಪಾನಸೇವಕರು, ಅವರ ಉಡುಪುಗಳು ಇವುಗಳನ್ನೆಲ್ಲಾ ನೋಡಿದಳು. ಅಂತೆಯೇ ಅವನು ಸರ್ವೇಶ್ವರನ ಆಲಯದಲ್ಲಿ ಸಮರ್ಪಿಸುತ್ತಿದ್ದ ದಹನ ಬಲಿಗಳನ್ನೂ ಗಮನಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸೊಲೊಮೋನನ ಮೇಜಿನ ಮೇಲೆ ಇಟ್ಟಿರುವ ಆಹಾರವನ್ನು ನೋಡಿದಳು. ಅವನ ಸೇವಕರು ಮಾಡುವ ಸೇವೆಯ ರೀತಿಯನ್ನು ಪರಿಶೀಲಿಸಿದಳು. ಅವರು ಧರಿಸುವ ಉಡುಪು, ಸಮವಸ್ತ್ರಗಳು, ದೇವಾಲಯಕ್ಕೆ ಹೋಗುವಾಗ ಮಾಡುವ ಮೆರವಣಿಗೆಗಳನ್ನು ಮತ್ತು ಯಜ್ಞಗಳನ್ನು ನೋಡಿದಳು. ಪ್ರತಿಯೊಂದು ವಿಷಯವನ್ನು ಆಕೆ ಗಮನಿಸಿದಾಗ ಅಚ್ಚರಿಗೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನ ಮೇಜಿನ ಭೋಜನವನ್ನೂ, ಅವನ ಅಧಿಪತಿಗಳು ಕುಳಿತಿರುವ ರೀತಿಯನ್ನೂ, ಅವನ ಸೇವಕರು ನಿಂತಿರುವುದನ್ನೂ, ಅವರ ವಸ್ತ್ರಗಳನ್ನೂ, ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ, ಅವನು ಯೆಹೋವ ದೇವರ ಆಲಯದಲ್ಲಿ ಅರ್ಪಿಸಿದ ದಹನಬಲಿಗಳನ್ನೂ ಕಂಡಾಗ ಅವಳು ವಿಸ್ಮಯಗೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:4
22 ತಿಳಿವುಗಳ ಹೋಲಿಕೆ  

ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಶಬ್ದವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟಮಾಡುವೆನು, ಅವನು ನನ್ನ ಸಂಗಡ ಊಟಮಾಡುವನು.


ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು - ಹೆದರಬೇಡ, ನಾನು ಮೊದಲನೆಯವನೂ ಕಡೆಯವನೂ ಸದಾ ಜೀವಿಸುವವನೂ ಆಗಿದ್ದೇನೆ.


ಯಜಮಾನನು ಬಂದು ಯಾವ ಯಾವ ಆಳುಗಳು ಎಚ್ಚರವಾಗಿರುವದನ್ನು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಆತನೇ ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಹತ್ತಿರಕ್ಕೆ ಬಂದು ಅವರಿಗೆ ಸೇವೆಮಾಡುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಎನ್ನೊಡೆಯನ ಸೇವಕನಾದ ನನ್ನಂಥವನು ಎನ್ನೊಡೆಯನಾದ ನಿನ್ನಂಥವನ ಸಂಗಡ ಹೇಗೆ ಮಾತಾಡಬಹುದು? ಈಗಿನಿಂದ ಶಕ್ತಿಯನ್ನೆಲ್ಲಾ ಕಳಕೊಂಡವನಾಗಿದ್ದೇನೆ, ನನ್ನಲ್ಲಿ ಉಸುರೇ ಇಲ್ಲ ಎಂದು ಹೇಳಿದೆನು.


ಪ್ರಭುವು ಹೊರಗಣ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ ಬಾಗಿಲ ನಿಲವುಕಂಬದ ಪಕ್ಕದಲ್ಲಿ ನಿಂತುಕೊಂಡು ತಾನು ಒಪ್ಪಿಸಿದ ಸರ್ವಾಂಗಹೋಮಪಶುವನ್ನೂ ಸಮಾಧಾನಯಜ್ಞಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲ ಹೊಸ್ತಲಿನಲ್ಲಿ ಅಡ್ಡಬೀಳಲಿ; ಆಮೇಲೆ ಹೊರಟುಹೋಗಲಿ; ಅಂದು ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.


ಪ್ರಭುವೋ ಯೆಹೋವನ ಸನ್ನಿಧಿಯಲ್ಲಿ ಹವಿರ್ಭೋಜನಮಾಡುವದಕ್ಕೆ ಇಲ್ಲಿ ಪ್ರಭುವಾಗಿ ಕೂತುಕೊಳ್ಳಬಹುದು; ಅವನು ಹೆಬ್ಬಾಗಿಲ ಕೈಸಾಲೆಯ ಮಾರ್ಗವಾಗಿ ಸೇರಿ ಅದೇ ಮಾರ್ಗವಾಗಿ ಹೊರಡಬೇಕು ಎಂದು ಹೇಳಿದನು.


ಯೆರೂಸಲೇವಿುನ ಮಹಿಳೆಯರೇ, ನೀವು ನನ್ನ ಕಾಂತನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂಬದನ್ನು ಅವನಿಗೆ ತಿಳಿಸಬೇಕೆಂದು ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.


ಬನ್ನಿರಿ, ನಾನು ಬಡಿಸುವ ಆಹಾರವನ್ನು ಉಣ್ಣಿರಿ, ನಾನು ಬೆರಸಿರುವ ದ್ರಾಕ್ಷಾರಸವನ್ನು ಕುಡಿಯಿರಿ.


ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.


ನಿನ್ನ ರಕ್ಷಣೆಯ ಬಯಕೆಯಿಂದಲೇ ನನ್ನ ಮನವು ಬಲಗುಂದಿತು; ನಾನು ನಿನ್ನ ವಾಕ್ಯದಲ್ಲೇ ನಿರೀಕ್ಷೆಯುಳ್ಳವನಾಗಿದ್ದೇನೆ.


ಸ್ವಾಮೀ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ ನಿನ್ನ ನಾಮಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಆ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಬೇಕು ಎಂದು ಪ್ರಾರ್ಥಿಸಿದೆನು.


ಅಲ್ಲಿ ಅರಸನು ಬಾಗಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಾ ಜನರ ಕೀರ್ತನೆಗಳನ್ನು ನುಡಿಸುತ್ತಿದ್ದರು. ಇದನ್ನು ಕಂಡಕೂಡಲೆ ಆಕೆಯು ಬಟ್ಟೆಗಳನ್ನು ಹರಿದುಕೊಂಡು - ದ್ರೋಹ, ದ್ರೋಹ ಎಂದು ಕೂಗಿದಳು.


ಶಲ್ಲೂಮ್ಯರು ಇಂದಿನವರೆಗೂ ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಲನ್ನು ಕಾಯುತ್ತಿರುತ್ತಾರೆ. ಇವರು ಲೇವಿಯರ ಪಾಳೆಯಗಳ ದ್ವಾರಪಾಲಕರು.


ಯೆಹೋವನ ಆಲಯದ ಪ್ರಾಕಾರದೊಳಗೆ ಸಬ್ಬತ್‍ದಿನದ ಆರಾಧನೆಗಾಗಿ ರಾಜರಿಗೆ ಕಟ್ಟಲ್ಪಟ್ಟಿದ್ದ ಮಂಟಪವನ್ನೂ ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಲನ್ನೂ ಬದಲಾಯಿಸಿದನು.


ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನೂ ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ ಅರಸನಿಗೆ -


ಆದಾಗ್ಯೂ ಈ ಹೂವುಗಳಲ್ಲಿ ಒಂದಕ್ಕಿರುವಷ್ಟು ಅಲಂಕಾರವು ಅರಸನಾದ ಸೊಲೊಮೋನನಿಗೆ ಸಹ ಅವನು ತನ್ನ ಸಕಲ ವೈಭವದಿಂದಿರುವಾಗಲೂ ಇರಲಿಲ್ಲವೆಂದು ನಿಮಗೆ ಹೇಳುತ್ತೇನೆ.


ಶೆಬದ ರಾಣಿಯು ಸೊಲೊಮೋನನ ಜ್ಞಾನ, ಅವನು ಕಟ್ಟಿಸಿದ ಅರಮನೆ,


ವಿಸ್ಮಿತಳಾಗಿ ಅವನಿಗೆ - ನಾನು ನನ್ನ ದೇಶದಲ್ಲಿ ನಿನ್ನ ಜ್ಞಾನವನ್ನೂ ಕೃತ್ಯಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.


ಅನಂತರ ಸೊಲೊಮೋನನು ದೂತರ ಮುಖಾಂತರವಾಗಿ ಹೀರಾಮನಿಗೆ -


ಯೆಹೋವನ ಅನುಗ್ರಹದಿಂದ ತಮ್ಮ ತಂದೆಯಾದ ದಾವೀದನಿಗೆ ಎಲ್ಲಾ ಶತ್ರುಗಳು ವಶವಾಗುವವರೆಗೆ ಅವನು ಸುತ್ತಲೂ ಯುದ್ಧಗಳನ್ನು ನಡಿಸಬೇಕಾಗಿದ್ದದರಿಂದ ತನ್ನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದನೆಂದು ನೀನು ಬಲ್ಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು