Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:7 - ಕನ್ನಡ ಸತ್ಯವೇದವು J.V. (BSI)

7 ನಿನ್ನ ಪ್ರಜೆಗಳೂ ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರೂ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನ ಪ್ರಜೆಗಳೂ, ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರೂ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿಮ್ಮ ಪ್ರಜೆಗಳು ಹಾಗೂ ಸದಾ ನಿಮ್ಮ ಸನ್ನಿಧಿಯಲ್ಲಿ ಇದ್ದುಕೊಂಡು ನಿಮ್ಮ ಜ್ಞಾನವಾಕ್ಯಗಳನ್ನು ಕೇಳುವ ಸೇವಕರು ಧನ್ಯರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿನ್ನ ಹೆಂಡತಿಯರೂ ನಿನ್ನ ಅಧಿಕಾರಿಗಳೂ ಧನ್ಯರು. ನಿನ್ನ ಸೇವೆಮಾಡುವ ಇವರು ನಿನ್ನ ಜ್ಞಾನೋಪದೇಶವನ್ನು ಯಾವಾಗಲೂ ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿನ್ನ ಜನರು ಭಾಗ್ಯವಂತರು. ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಅಧಿಪತಿಗಳು ಭಾಗ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:7
13 ತಿಳಿವುಗಳ ಹೋಲಿಕೆ  

ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಕೂಗಿದಳು. ಆತನು - ಹಾಗನ್ನಬೇಡ, ದೇವರ ವಾಕ್ಯವನ್ನು ಕೇಳಿ ಅದಕ್ಕೆ ಸರಿಯಾಗಿ ನಡಕೊಳ್ಳುವವರೇ ಧನ್ಯರು ಅಂದನು.


ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು; ಜ್ಞಾನಹೀನರ ಒಡನಾಡಿ ಸಂಕಟಪಡುವನು.


ಶಿಷ್ಟರ ಭಾಷಣ ಬಹುಜನಪೋಷಣ; ಬುದ್ಧಿಯ ಕೊರತೆ ಮೂರ್ಖರ ನಾಶನ.


ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನವೂ ಕಾಯುತ್ತಾ ಬಾಗಲಿನ ನಿಲವುಗಳ ಹತ್ತಿರ ಜಾಗರೂಕನಾಗಿ ನನ್ನ ಮಾತುಗಳನ್ನು ಕೇಳುವವನು ಭಾಗ್ಯವಂತನು.


ಅದರ ಲಾಭವು ಬೆಳ್ಳಿಯ ಲಾಭಕ್ಕಿಂತಲೂ ಅದರಿಂದಾಗುವ ಆದಾಯವು ಬಂಗಾರಕ್ಕಿಂತಲೂ ಅಮೂಲ್ಯವೇ ಸರಿ.


ಪ್ರೀತಿಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ;


ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ ಆತನ ಪ್ರಸನ್ನತೆಯನ್ನು ನೋಡುವದಕ್ಕೂ ಆತನ ಮಂದಿರದಲ್ಲಿ ಧ್ಯಾನಮಾಡುವದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರುನೋಡುತ್ತಿರುವೆನು.


ನಿನ್ನ ಪ್ರಜೆಗಳೂ ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರೂ ಧನ್ಯರು.


ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ಪರಿಚಯವಿಲ್ಲವೆಂದೂ ಅಣ್ಣತಮ್ಮಂದಿರನ್ನು ಅರಿಯೆವೆಂದೂ ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ ಹೇಳಿ ಬಿಟ್ಟರಲ್ಲಾ.


ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ ನಿನ್ನ ಜ್ಞಾನಾತಿಶಯವು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿದೆ; ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ.


ನಿನ್ನನ್ನು ಮೆಚ್ಚಿ ತನ್ನ ಸನ್ನಿಧಿಯಲ್ಲಿ ಅರಸನಾಗುವದಕ್ಕೆ ನಿನ್ನನ್ನು ತನ್ನ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನಿನ್ನ ದೇವರು ಇಸ್ರಾಯೇಲ್ಯರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿರುವದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇವಿುಸಿದ್ದಾನೆ ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು