2 ಪೂರ್ವಕಾಲ ವೃತ್ತಾಂತ 9:8 - ಕನ್ನಡ ಸತ್ಯವೇದವು J.V. (BSI)8 ನಿನ್ನನ್ನು ಮೆಚ್ಚಿ ತನ್ನ ಸನ್ನಿಧಿಯಲ್ಲಿ ಅರಸನಾಗುವದಕ್ಕೆ ನಿನ್ನನ್ನು ತನ್ನ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನಿನ್ನ ದೇವರು ಇಸ್ರಾಯೇಲ್ಯರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿರುವದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇವಿುಸಿದ್ದಾನೆ ಎಂದು ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಿನ್ನನ್ನು ಮೆಚ್ಚಿ, ತನ್ನ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನಿನ್ನ ದೇವರು ಇಸ್ರಾಯೇಲರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿರುವುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನ್ನಾಗಿ ನೇಮಿಸಿದ್ದಾನೆ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಿಮ್ಮನ್ನು ಮೆಚ್ಚಿ, ತಮ್ಮ ಸಮ್ಮುಖದಲ್ಲಿ ಅರಸನಾಗಿಸಲು, ತಮ್ಮ ಸಿಂಹಾಸನದ ಮೇಲೆ ನಿಮ್ಮನ್ನು ಕುಳ್ಳಿರಿಸಿದ ಆ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ನಿಮ್ಮ ದೇವರು ಇಸ್ರಯೇಲರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿದ್ದಾರೆ. ಆದ್ದರಿಂದಲೇ ಈ ಜನರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕಾಗಿ ನಿಮ್ಮನ್ನೇ ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಿನ್ನ ದೇವರಿಗೆ ಸ್ತೋತ್ರವಾಗಲಿ. ಆತನು ನಿನ್ನಲ್ಲಿ ಸಂತೋಷಿಸಿ ತನ್ನ ಸಿಂಹಾಸನದಲ್ಲಿ ನಿನ್ನನ್ನು ಕುಳ್ಳಿರಿಸಿದ್ದಾನೆ. ನಿನ್ನ ದೇವರು ಇಸ್ರೇಲನ್ನು ಪ್ರೀತಿಸುತ್ತಾನೆ ಮತ್ತು ಶಾಶ್ವತವಾಗಿ ಪೋಷಿಸುತ್ತಾನೆ. ಅದಕ್ಕಾಗಿಯೇ ನ್ಯಾಯವಾದದ್ದನ್ನೂ ಸರಿಯಾದದ್ದನ್ನೂ ಮಾಡುವುದಕ್ಕಾಗಿ ನಿನ್ನನ್ನು ಇಸ್ರೇಲಿನ ಅರಸನನ್ನಾಗಿ ಮಾಡಿದ್ದಾನೆ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಿನ್ನ ದೇವರಾದ ಯೆಹೋವ ದೇವರಿಗೋಸ್ಕರ ಅರಸನಾಗಿರುವಂತೆ ತಮ್ಮ ಸಿಂಹಾಸನದ ಮೇಲೆ ನಿನ್ನನ್ನು ಕುಳ್ಳಿರಿಸಿದ ನಿನ್ನಲ್ಲಿ ಹರ್ಷಗೊಂಡ ನಿನ್ನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ನಿನ್ನ ದೇವರು ಇಸ್ರಾಯೇಲರನ್ನು ಪ್ರೀತಿಮಾಡಿದ್ದರಿಂದ ಅವರನ್ನು ಯುಗಯುಗಕ್ಕೂ ಸ್ಥಿರಗೊಳಿಸಬೇಕೆಂದಿದ್ದಾರೆ. ನ್ಯಾಯವನ್ನೂ, ನೀತಿಯನ್ನೂ ನಡೆಸಲು ಅವರು ನಿನ್ನನ್ನು ಅರಸನನ್ನಾಗಿ ಮಾಡಿದರು,” ಎಂದಳು. ಅಧ್ಯಾಯವನ್ನು ನೋಡಿ |