Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:11 - ಕನ್ನಡ ಸತ್ಯವೇದವು J.V. (BSI)

11 ಮತ್ತು ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹೀಗಿರುವುದರಿಂದ ನಮ್ಮ ಕರ್ತನೂ, ರಕ್ಷಕನೂ ಆಗಿರುವ ಯೇಸುಕ್ರಿಸ್ತನ ನಿತ್ಯ ರಾಜ್ಯದಲ್ಲಿ ನಿಮಗೆ ಧಾರಾಳವಾಗಿ ಪ್ರವೇಶವು ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಮ್ಮ ಪ್ರಭು ಹಾಗೂ ಉದ್ಧಾರಕ ಯೇಸುಕ್ರಿಸ್ತರ ಅಮರ ರಾಜ್ಯವನ್ನು ಪ್ರವೇಶಿಸುವ ಭಾಗ್ಯವನ್ನು ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸುಕ್ರಿಸ್ತನ ರಾಜ್ಯದಲ್ಲಿ ನಿಮಗೆ ಮಹಾ ಸ್ವಾಗತವನ್ನು ನೀಡಲಾಗುವುದು. ಆ ರಾಜ್ಯವು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವು ತಮ್ಮ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಭಾಗ್ಯವನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅಸೆ ಅಮ್ಚ್ಯಾ ಧನಿಯಾಕ್ ಅನಿ ಸುಟ್ಕಾ ದಿನಾರ್‍ಯಾ ಜೆಜು ಕ್ರಿಸ್ತಾಚ್ಯಾ ಅಂತ್ ನಸಲ್ಲ್ಯಾ ರಾಜಾತ್ ಭುತ್ತುರ್ ತುಮ್ಕಾ ಫುರಾ ಹಕ್ಕ್ ದಿವ್ನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:11
23 ತಿಳಿವುಗಳ ಹೋಲಿಕೆ  

ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿ; ಅವರು ಭೂವಿುಯ ಮೇಲೆ ಆಳುವರು ಎಂದು ಹೇಳಿದರು.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ - ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ತೆಗೆದುಕೊಳ್ಳಿರಿ.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕೂತುಕೊಂಡೆನು; ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ಹಾಗೆಯೇ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನದ ಫಲಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.


ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗೆ ಸಿದ್ಧವಾಗಿದೆ; ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು; ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.


ಕಳ್ಳನು ಕದ್ದುಕೊಳ್ಳುವದಕ್ಕೂ ಕೊಯ್ಯುವದಕ್ಕೂ ಹಾಳುಮಾಡುವದಕ್ಕೂ ಬರುತ್ತಾನೆ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿ ಇರಬೇಕೆಂತಲೂ ಬಂದೆನು.


ಆಗ ಅವನ ರಾಜ್ಯಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನ ಭಕ್ತಜನರಿಗೆ ಕೊಡೋಣವಾಗುವವು; ಆತನ ರಾಜ್ಯವು ಶಾಶ್ವತರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು ಎಂದು ಹೇಳಿದನು.


ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ


ಸಕಲಜನಾಂಗ ಕುಲಭಾಷೆಗಳವರು ಅವನನ್ನು ಸೇವಿಸಲೆಂದು ಅವನಿಗೆ ದೊರೆತನವೂ ಘನತೆಯೂ ರಾಜ್ಯವೂ ಕೊಡೋಣವಾದವು; ಅವನ ಆಳಿಕೆಯು ಅಂತ್ಯವಿಲ್ಲದ್ದು, ಶಾಶ್ವತವಾದದ್ದು; ಅವನ ರಾಜ್ಯವು ಎಂದಿಗೂ ಅಳಿಯದು.


ಭೂವಿುಯ ಮೇಲಿರುವ ನಮ್ಮ ಮನೆಯು ಅಂದರೆ ನಮ್ಮ ದೇಹವೆಂಬ ಗುಡಾರವು ಕಿತ್ತುಹಾಕಲ್ಪಟ್ಟರೂ ದೇವರಿಂದುಂಟಾದ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು. ಅದು ಕೈಯಿಂದ ಕಟ್ಟಿದ ಮನೆಯಾಗಿರದೆ ನಿತ್ಯವಾಗಿರುವಂಥದಾಗಿದೆ.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವದೇನಂದರೆ -


ಅದು ಸಮೃದ್ಧಿಯಾಗಿ ಹೂಬಿಟ್ಟು ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವದು; ಲೆಬನೋನಿನ ಮಹಿಮೆಯೂ ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ ನಮ್ಮ ದೇವರ ವೈಭವವನ್ನೂ ಕಾಣುವವು.


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ಪ್ರಿಯಳೇ, ವಧುವೇ, ಇಗೋ ನನ್ನ ತೋಟದೊಳಗೆ ಬಂದೆನು, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ತೆಗೆದೆನು, ನನ್ನ ಜೇನುಕೊಡವನ್ನೂ ಜೇನುತುಪ್ಪವನ್ನೂ ತಿಂದೆನು, ನನ್ನ ದ್ರಾಕ್ಷಾರಸವನ್ನೂ ಕ್ಷೀರವನ್ನೂ ಕುಡಿದೆನು. ವಿುತ್ರರೇ, ಊಟಮಾಡಿರಿ; ಪ್ರಿಯರೇ, ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.


ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ.


ನಿನ್ನ ರಾಜ್ಯವು ಶಾಶ್ವತವಾಗಿದೆ; ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವದು.


ಆತನ ಅಪಾರವಾದ ದಯಾ ಸಹನ ದೀರ್ಘಶಾಂತಿಗಳನ್ನು ಅಸಡ್ಡೆಮಾಡುತ್ತೀಯಾ? ಮನಸ್ಸನ್ನು ಬೇರೆಮಾಡಿಕೊಳ್ಳುವದಕ್ಕೆ ದೇವರ ಉಪಕಾರವು ನಿನ್ನನ್ನು ಪ್ರೇರಿಸುತ್ತದೆಂಬದು ನಿನಗೆ ಗೊತ್ತಿಲ್ಲವೇ?


ಆಮೇಲೆ ಆತನು ಬೇರೆ ಎಲ್ಲಾ ದೊರೆತನವನ್ನೂ ಎಲ್ಲಾ ಅಧಿಕಾರವನ್ನೂ ಬಲವನ್ನೂ ನಿವೃತ್ತಿಮಾಡಿ ತಂದೆಯಾಗಿರುವ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿ.


ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ


ನಾನು ಯಾವ ದುಷ್ಕೃತ್ಯವನ್ನೂ ಮಾಡದಂತೆ ಕರ್ತನು ನನ್ನನ್ನು ಕಾಪಾಡಿ ತನ್ನ ಬಳಿಗೆ ಪರಲೋಕರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ


ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.


ನೀವು ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಅಭಿವೃದ್ಧಿಯನ್ನು ಹೊಂದುತ್ತಾ ಇರ್ರಿ. ಆತನಿಗೆ ಈಗಲೂ ಸದಾಕಾಲವೂ ಸ್ತೋತ್ರ. ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು