Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:12 - ಕನ್ನಡ ಸತ್ಯವೇದವು J.V. (BSI)

12 ಆದದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ನಿಮಗೆ ದೊರಕಿರುವ ಸತ್ಯದಲ್ಲಿ ಸ್ಥಿರವಾಗಿದ್ದರೂ ಅವುಗಳನ್ನು ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಯಾವಾಗಲೂ ಸಿದ್ಧವಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ನಿಮಗೆ ದೊರೆತಿರುವ ಸತ್ಯದಲ್ಲಿ ಸ್ಥಿರವಾಗಿದ್ದರೂ ಅವುಗಳನ್ನು ನಿಮಗೆ ನೆನಪಿಸಿಕೊಡುವುದಕ್ಕೆ ನಾನು ಯಾವಾಗಲೂ ಸಿದ್ಧವಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಈ ವಿಷಯಗಳೆಲ್ಲಾ ನಿಮಗೆ ತಿಳಿದೇ ಇವೆ; ನೀವು ಅಂಗೀಕರಿಸಿದ ಸತ್ಯದಲ್ಲಿ ಸ್ಥಿರವಾಗಿಯೂ ಇದ್ದೀರಿ. ಆದರೂ ಇವುಗಳನ್ನು ಪದೇ ಪದೇ ನಿಮ್ಮ ಜ್ಞಾಪಕಕ್ಕೆ ತರಲು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇವೆಲ್ಲವೂ ನಿಮಗೆ ತಿಳಿದಿದೆ. ನಿಮ್ಮಲ್ಲಿರುವ ಸತ್ಯದಲ್ಲಿ ನೀವು ಸ್ಥಿರವಾಗಿದ್ದೀರಿ. ಆದರೆ ಇವುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳುವಂತೆ ನಾನು ನಿಮಗೆ ಯಾವಾಗಲೂ ಸಹಾಯ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮ್ಮ ನೆನಪಿಗೆ ತರಲು ನಾನು ಬಯಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹೆಚ್ಯಾಸಾಟ್ನಿ ಹೆ ಸಗ್ಳೆ ಅದ್ದಿಚ್ ತುಮ್ಕಾ ಗೊತ್ತ್ ರ್‍ಹಾಲ್ಯಾರ್‍ಬಿ ತುಮಿ ಘೆಟಲ್ಲ್ಯಾ ಖರೆಪಾನಾತ್ ತುಮಿ ಘಟ್ ಹಾಸಿ, ಹೊಲ್ಲ್ಯಾರ್ಬಿ ಕನ್ನಾಬಿ ಮಿಯಾ ತುಮ್ಕಾ ಹಿ ಯಾದ್ ಕರುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:12
20 ತಿಳಿವುಗಳ ಹೋಲಿಕೆ  

ನೀವು ಸತ್ಯವನ್ನು ತಿಳಿಯದವರೆಂಬ ಭಾವನೆಯಿಂದಲ್ಲ, ನೀವು ಅದನ್ನು ತಿಳಿದಿರುವದರಿಂದಲೂ ಯಾವ ಸುಳ್ಳೂ ಸತ್ಯದಿಂದ ಹುಟ್ಟಿ ಬರುವದಿಲ್ಲವೆಂಬದನ್ನು ನೀವು ತಿಳಿದವರಾಗಿರುವದರಿಂದಲೂ ನಿಮಗೆ ಬರೆದೆನು.


ಕಡೇ ಮಾತೇನಂದರೆ ನನ್ನ ಸಹೋದರರೇ, ಕರ್ತನಲ್ಲಿ ಸಂತೋಷಪಡಿರಿ. ಮೊದಲು ತಿಳಿಸಿದ ಮಾತುಗಳನ್ನು ತಿರಿಗಿ ನಿಮಗೆ ಬರೆಯುವದರಲ್ಲಿ ನನಗೇನೂ ಬೇಸರವಿಲ್ಲ; ನಿಮ್ಮನ್ನಾದರೋ ಅದು ದೃಢಮಾಡುವದು.


ಆತನಲ್ಲಿ ಬೇರೂರಿಕೊಂಡು ಭಕ್ತಿವೃದ್ಧಿಯನ್ನು ಹೊಂದಿ ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರಮಾಡುವವರಾಗಿರಿ.


ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವವಂದರೆ - ಕರ್ತನು ತನ್ನ ಪ್ರಜೆಯನ್ನು ಐಗುಪ್ತ ದೇಶದೊಳಗಿಂದ ಬಿಡಿಸಿದ ತರುವಾಯ ಅವರೊಳಗೆ ನಂಬದೆಹೋದವರನ್ನು ನಾಶಮಾಡಿದನು.


ನಾನು ನನ್ನ ದೇಹವೆಂಬ ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ.


ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.


ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನಮಾಡುತ್ತಿದ್ದಾಗ ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.


ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ಅಧರ್ಮಿಗಳ ಭ್ರಾಂತಿಯ ಸೆಳವಿಗೆ ಸಿಕ್ಕಿಕೊಂಡು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಟರಾಗದಂತೆ ಎಚ್ಚರಿಕೆಯಾಗಿರಿ.


ಪ್ರಿಯರೇ, ನಿಮಗೀಗ ಬರೆಯುವದು ಎರಡನೆಯ ಪತ್ರಿಕೆ.


ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.


ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಾನು ಸಂಕ್ಷೇಪವಾಗಿ ಬರೆದು ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು.


ನಾನಾವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ದೇವರ ಕೃಪೆಯನ್ನು ಆತುಕೊಂಡು ಮನಸ್ಸನ್ನು ದೃಢಮಾಡಿಕೊಳ್ಳುವದು ಉತ್ತಮವೇ; ಭೋಜನಪದಾರ್ಥಗಳನ್ನು ವಿಶೇಷಿಸುವದರಿಂದ ಅದು ಆಗುವದಿಲ್ಲ. ಭೋಜನಪದಾರ್ಥಗಳನ್ನು ವಿಶೇಷಿಸಿ ನಡೆದವರು ಏನೂ ಪ್ರಯೋಜನ ಹೊಂದಲಿಲ್ಲ.


ಹೀಗಿರಲಾಗಿ ನೀವು ಜ್ಞಾನಪ್ರಕಾಶದಲ್ಲಿ ಸೇರಿ ಕಷ್ಟಾನುಭವವೆಂಬ ಬಲು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ;


ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತವನ್ನಿಟ್ಟದರ ಮೂಲಕ ನಿನಗೆ ದೊರಕಿದ ದೇವರ ಕೃಪಾವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕಕೊಡುತ್ತೇನೆ.


ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದುವವನಾಗಿ ಕ್ರಿಸ್ತ ಯೇಸುವಿನ ಒಳ್ಳೇ ಸೇವಕನಾಗಿರುವಿ.


ಸಭೆಗಳು ಕ್ರಿಸ್ತನಂಬಿಕೆಯಲ್ಲಿ ದೃಢವಾಗುತ್ತಾ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚುತ್ತಾ ಬಂದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು