Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:14 - ಕನ್ನಡ ಸತ್ಯವೇದವು J.V. (BSI)

14 ಯಾಕಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ಈ ಗುಡಾರವನ್ನು ಕಿತ್ತುಹಾಕುವ ಕಾಲ ಬೇಗನೇ ಬರುತ್ತದೆಂದು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಏಕೆಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ನಾನು ಈ ಗುಡಾರವನ್ನು ಬಿಟ್ಟುಹೋಗುವ ಕಾಲವು ಸಮೀಪವಾಗಿದೆಯೆಂದು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಾನು ಈ ಗುಡಾರವನ್ನು ತ್ಯಜಿಸುವ ಕಾಲವು ಸಮೀಪಿಸಿತೆಂದು ಬಲ್ಲೆ. ನಮ್ಮ ಪ್ರಭು ಯೇಸುಕ್ರಿಸ್ತರೇ ನನಗಿದನ್ನು ಸ್ಪಷ್ಟಪಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ಬಹುಬೇಗ ಈ ದೇಹವನ್ನು ತ್ಯಜಿಸಬೇಕೆಂಬುದೂ ನನಗೆ ತಿಳಿದಿದೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಅದನ್ನು ತೋರ್ಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ನನಗೆ ಸ್ಪಷ್ಟ ಪಡಿಸಿದ ಪ್ರಕಾರ, ಈ ನನ್ನ ದೇಹವೆಂಬ ಗುಡಾರವನ್ನು ತೆಗೆದುಹಾಕುವ ಕಾಲ ಬೇಗನೆ ಬರುತ್ತದೆಂದು ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾನ್ ಮಾಕಾ ದಾಕ್ವುನ್ ದಿಲ್ಲ್ಯಾ ಸಾರ್ಕೆ ಮಾಜೆ ಮರಾನ್ ಲಗ್ಗುನಾಚ್ ಯೆತಲೆ ಹಾಯ್ ಮನುನ್ ಮಾಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:14
11 ತಿಳಿವುಗಳ ಹೋಲಿಕೆ  

ಯಾಕಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸಮೀಪಕ್ಕೆ ಬಂದದೆ.


ಯೆಹೋವನು ಮೋಶೆಗೆ - ನೀನು ಸಾಯಬೇಕಾದ ಕಾಲ ಸಮೀಪವಾಯಿತು; ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು ದೇವದರ್ಶನದ ಗುಡಾರದಲ್ಲಿ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು ಎಂದು ಆಜ್ಞಾಪಿಸಲಾಗಿ ಮೋಶೆಯೂ ಯೆಹೋಶುವನೂ ದೇವದರ್ಶನದ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಂತುಕೊಂಡರು.


ಇಗೋ, ಇಷ್ಟು ದಿವಸ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ಬಲ್ಲೆನು.


ಭೂಲೋಕದವರೆಲ್ಲರೂ ಹೋಗುವ ಮಾರ್ಗವನ್ನು ನಾನೂ ಈಗ ಅನುಸರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ; ಎಲ್ಲವೂ ತಪ್ಪದೆ ನೆರವೇರಿದವೆಂಬದು ನಿಮಗೆ ಮಂದಟ್ಟಾಯಿತಲ್ಲಾ.


ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು ನನ್ನ ಕಡೆಯಿಂದ ಒಯ್ಯಲ್ಪಟ್ಟಿದೆ; ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀ.


ಸೀಮೋನ ಪೇತ್ರನು ಆತನನ್ನು - ಸ್ವಾಮೀ, ಎಲ್ಲಿಗೆ ಹೋಗುತ್ತೀ? ಎಂದು ಕೇಳಿದ್ದಕ್ಕೆ ಯೇಸು - ನಾನು ಹೋಗುವಲ್ಲಿಗೆ ನೀನು ಈಗ ನನ್ನ ಹಿಂದೆ ಬರಲಾರಿ, ತರುವಾಯ ನನ್ನ ಹಿಂದೆ ಬರುವಿ ಅಂದನು.


ಭೂವಿುಯ ಮೇಲಿರುವ ನಮ್ಮ ಮನೆಯು ಅಂದರೆ ನಮ್ಮ ದೇಹವೆಂಬ ಗುಡಾರವು ಕಿತ್ತುಹಾಕಲ್ಪಟ್ಟರೂ ದೇವರಿಂದುಂಟಾದ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು. ಅದು ಕೈಯಿಂದ ಕಟ್ಟಿದ ಮನೆಯಾಗಿರದೆ ನಿತ್ಯವಾಗಿರುವಂಥದಾಗಿದೆ.


ನಾನು ನನ್ನ ದೇಹವೆಂಬ ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು