Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:16 - ಕನ್ನಡ ಸತ್ಯವೇದವು J.V. (BSI)

16 ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಕ್ತಿಯನ್ನೂ ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿಸುವವರಾಗಿರಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ತಿಳಿಯಪಡಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ, ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಮ್ಮ ಪ್ರಭು ಯೇಸುಕ್ರಿಸ್ತರ ಶಕ್ತಿಸಾಮರ್ಥ್ಯವನ್ನು ಮತ್ತು ಅವರ ಪುನರಾಗಮನವನ್ನು ನಿಮಗೆ ತಿಳಿಯಪಡಿಸುವಾಗ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕತೆಗಳನ್ನು ಆಧರಿಸಿ ನಾವು ಮಾತನಾಡಲಿಲ್ಲ. ನಾವೇ ಅವರ ಮಹತ್ತನ್ನು ಕಣ್ಣಾರೆಕಂಡು ಅದನ್ನು ತಿಳಿಯಪಡಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಶಕ್ತಿಯ ಕುರಿತಾಗಿ ಮತ್ತು ಆತನ ಬರುವಿಕೆಯ ಕುರಿತಾಗಿ ನಿಮಗೆ ತಿಳಿಸಿದ್ದೇವೆ. ಆ ಸಂಗತಿಗಳು ಜನರಿಂದ ಕಲ್ಪಿತವಾದ ಜಾಣ್ಮೆಯ ಕಥೆಗಳಲ್ಲ. ಯೇಸುವಿನ ಮಹಿಮೆಯನ್ನು ನಾವು ಕಣ್ಣಾರೆ ಕಂಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಶಕ್ತಿಯ ಬಗ್ಗೆಯೂ ಅವರ ಪುನರಾಗಮನದ ಬಗ್ಗೆಯೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಕುತಂತ್ರವಾಗಿ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿಸಲಿಲ್ಲ. ಆದರೆ ನಾವೇ ಕ್ರಿಸ್ತ ಯೇಸುವಿನ ಮಹತ್ತನ್ನು ಕಣ್ಣಾರೆ ಕಂಡವರಾಗಿ ತಿಳಿಯಪಡಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅಮ್ಚ್ಯಾ ಯೆತಲ್ಯಾ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ತಾಕ್ತಿಚ್ಯಾ ವಿಶಯಾತ್ ಕಳ್ವುಲ್ಯಾಂವ್, ಕಾನಿಯಾಂಚ್ಯಾ ವೈರ್ ಅಮಿ ಹೊಂದುನ್ ನಾ, ಹೆ ಸಗ್ಳ್ಯೆ ಅಮಿ ಜೆಜುಚಿ ಮಹಿಮಾ ಅಮಿ ಡೊಳ್ಯಾನಿ ಬಗಟ್ಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:16
40 ತಿಳಿವುಗಳ ಹೋಲಿಕೆ  

ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ, ಅದರ ವಿಷಯದಲ್ಲಿ ಸಾಕ್ಷಿಹೇಳುತ್ತೇವೆ.


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಕಲ್ಪನಾಕಥೆಗಳಿಗೂ ಕೊನೆಮೊದಲಿಲ್ಲದ ವಂಶಾವಳಿಗಳಿಗೂ ಲಕ್ಷ್ಯಕೊಡಬಾರದೆಂತಲೂ ಆಜ್ಞಾಪಿಸಬೇಕೆಂಬದಾಗಿ ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ದೇವರು ನಿರ್ವಹಿಸುವ ಕೆಲಸಕ್ಕೆ ಅನುಕೂಲವಾಗಿಲ್ಲ; ಇದರಲ್ಲಿ ನಂಬಿಕೆಯೇ ಮುಖ್ಯವಾದದ್ದು.


ಅಜ್ಜೀಕಥೆಗಳಂತಿರುವ ಕೇವಲ ಪ್ರಾಪಂಚಿಕವಾದ ಕಥೆಗಳನ್ನು ತಳ್ಳಿಬಿಟ್ಟು ನೀನು ದೇವಭಕ್ತಿಯ ವಿಷಯದಲ್ಲಿ ಸಾಧನೆಮಾಡಿಕೋ.


ನಿಮ್ಮ ನಂಬಿಕೆಯು ಮಾನುಷಜ್ಞಾನವನ್ನು ಆಧಾರಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಂಡಿರಬೇಕೆಂದು ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೆ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.


ನಾವು ಇನ್ನು ಮೇಲೆ ಕೂಸುಗಳಾಗಿರಬಾರದು; ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಬಿದ್ದು ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ನೂಕಿಸಿಕೊಂಡು ಹೋಗುವವರ ಹಾಗಿರಬಾರದು.


ದೀಕ್ಷಾಸ್ನಾನ ಮಾಡಿಸುವದಕ್ಕಲ್ಲ, ಸುವಾರ್ತೆಯನ್ನು ಸಾರುವದಕ್ಕೇ ಕ್ರಿಸ್ತನು ನನ್ನನ್ನು ಕಳುಹಿಸಿದನು. ಆದರೆ ವಾಕ್ಚಾತುರ್ಯದಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯು ನಿರರ್ಥಕವಾಗುವದು.


ಇಗೋ ಮೇಘಗಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂವಿುಯಲ್ಲಿರುವ ಎಲ್ಲಾ ಕುಲದವರು ಆತನನ್ನು ನೋಡಿ ಎದೆಬಡುಕೊಳ್ಳುವರು. ಹೌದು, ಹಾಗೆಯೇ ಆಗುವದು. ಆಮೆನ್.


ಇಂಥವರ ವಿಷಯದಲ್ಲೇ ಆದಾಮನಿಗೆ ಏಳನೆಯ ತಲೆಯವನಾದ ಹನೋಕನು - ಇಗೋ ಕರ್ತನು ಲಕ್ಷಾಂತರ ಪರಿಶುದ್ಧದೂತರನ್ನು ಕೂಡಿಕೊಂಡು


ಆ ಅಧರ್ಮಸ್ವರೂಪನ ಪ್ರತ್ಯಕ್ಷತೆಯು ಸೈತಾನನ ಮಾಟಕ್ಕನುಗುಣವಾಗಿರುವದು. ಅದು ಮೋಸಗೊಳಿಸುವ ಸಕಲವಿಧವಾದ ಮಹತ್ಕಾರ್ಯ ಸೂಚಕಕಾರ್ಯ ಅದ್ಭುತಕಾರ್ಯ ಇವುಗಳಿಂದಲೂ ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶನ ಮಾರ್ಗದಲ್ಲಿರುವವರಿಗೋಸ್ಕರ ಸಂಭವಿಸುವದು.


ನಾಚಿಕೆಯನ್ನು ಹುಟ್ಟಿಸುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಕೆಡಿಸದೆ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಸಜ್ಜನರೆಂದು ಪ್ರತಿಮನುಷ್ಯನ ಮನಸ್ಸು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ಆದರೆ ನಾವು ದೇವರ ವಾಕ್ಯವನ್ನು ಕಲಬೆರಿಕೆಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಉಪದೇಶ ಹೊಂದಿದವರಿಗೆ ತಕ್ಕ ಹಾಗೆ ಕ್ರಿಸ್ತನ ಅನ್ಯೋನ್ಯತೆಯಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತಾಡುತ್ತೇವೆ.


ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ ಅಗಸನ ಚೌಳಿಗೂ ಸಮಾನನಾಗಿದ್ದಾನೆ;


ನಮ್ಮ ಕರ್ತನಾದ ಯೇಸು ಪ್ರತ್ಯಕ್ಷನಾಗುವಾಗ ಆತನ ಮುಂದೆ ನಮ್ಮ ಭರವಸವೂ ನಮ್ಮ ಸಂತೋಷವೂ ನಾವು ಹೊಗಳಿಕೊಳ್ಳುವ ಜಯಮಾಲೆಯೂ ಯಾರು? ನೀವೇ ಅಲ್ಲವೇ.


ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸಿ ಪ್ರಭಾವವುಳ್ಳ ತನ್ನ ದೇಹದ ಸಾರೂಪ್ಯವಾಗುವಂತೆ ಮಾಡುವನು.


ನೀವೂ ನನ್ನಾತ್ಮನೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ


ಸಹೋದರರೇ, ನಾನಂತೂ ದೇವರು ಹೇಳಿಕೊಟ್ಟ ಮಾತನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ ಜ್ಞಾನಾಡಂಬರದಿಂದಾಗಲಿ ಬರಲಿಲ್ಲ.


ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರಪಡಿಸುತ್ತೇವೆ. ಇಂಥ ಕ್ರಿಸ್ತನ ಸಂಗತಿಯು ಯೆಹೂದ್ಯರಿಗೆ ವಿಘ್ನವೂ ಅನ್ಯಜನರಿಗೆ ಹುಚ್ಚುಮಾತೂ ಆಗಿದೆ;


ಹೀಗೆ ನೀವು ಯಾವ ಕೃಪಾವರದಲ್ಲಿಯೂ ಕೊರತೆಯಿಲ್ಲದವರಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇದ್ದೀರಿ.


ಪವಿತ್ರವಾದ ಆತ್ಮವುಳ್ಳವನಾಗಿದ್ದು ಸತ್ತಮೇಲೆ ಜೀವಿತನಾಗಿ ಎದ್ದು ಬಂದ ಮಹತ್ಕಾರ್ಯದಿಂದ ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ.


ನೀನು ಅವನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರೆಲ್ಲರಿಗೆ ಅವನು ನಿತ್ಯಜೀವವನ್ನು ಕೊಡಬೇಕೆಂದು ಅವನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿಯಲ್ಲಾ.


ಹೇಗೆ ವಿುಂಚು ಮೂಡಣದಲ್ಲಿ ಹುಟ್ಟಿ ಪಡುವಣದವರೆಗೂ ಕಾಣಿಸುತ್ತದೋ ಹಾಗೆಯೇ ಮನುಷ್ಯಕುಮಾರನ ಪ್ರತ್ಯಕ್ಷತೆಯು ಇರುವದು.


ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕೂತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು - ಅದು ಯಾವಾಗ ಆಗುವದು? ನೀನು ಪ್ರತ್ಯಕ್ಷನಾಗುವದಕ್ಕೂ ಯುಗದ ಸಮಾಪ್ತಿಗೂ ಸೂಚನೆಯೇನು? ನಮಗೆ ಹೇಳು ಅನ್ನಲು


ನಿಮಗೆ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತವರೊಳಗೆ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವ ತನಕ ಮರಣಹೊಂದುವದಿಲ್ಲ ಅಂದನು.


ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವದಕ್ಕೆ ಮುಂಚೆಯೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;


ಮನುಷ್ಯಕುಮಾರನು ತನ್ನ ತಂದೆಯ ಪ್ರಭಾವದೊಡನೆ ತನ್ನ ದೂತರ ಸಮೇತವಾಗಿ ಬರುವನು; ಆವಾಗ ಆತನು ಒಬ್ಬೊಬ್ಬನಿಗೆ ಅವನವನ ನಡತೆಗೆ ತಕ್ಕ ಫಲವನ್ನು ಕೊಡುವನು.


ಆರು ದಿವಸಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಇವನ ತಮ್ಮನಾದ ಯೋಹಾನನನ್ನೂ ಮಾತ್ರ ವಿಂಗಡವಾಗಿ ಕರಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು.


ಆಗ ಮನುಷ್ಯಕುಮಾರನು ಬಹು ಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವದನ್ನು ಕಾಣುವರು.


ಯೇಸು - ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳೊಂದಿಗೆ ಬರುವದನ್ನೂ ನೋಡುವಿರಿ ಅಂದನು.


ಅದನ್ನು ನೋಡಿ ಎಲ್ಲರು ದೇವರ ಮಹತ್ವಕ್ಕೆ ಬೆರಗಾದರು.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಲೋಕಾದಿಯಿಂದ ಅಂಥವರಿಗೆ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವದು, ಅವರ ನಾಶವು ತೂಕಡಿಸುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು