Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:2 - ಕನ್ನಡ ಸತ್ಯವೇದವು J.V. (BSI)

2 ದೇವರ ವಿಷಯವಾಗಿಯೂ ನಮ್ಮ ಕರ್ತನಾದ ಯೇಸುವಿನ ವಿಷಯವಾಗಿಯೂ ಪರಿಜ್ಞಾನವು ನಿಮಗೆ ಉಂಟಾಗುವದರಲ್ಲಿ ಕೃಪೆಯೂ ಶಾಂತಿಯೂ ನಿಮಗೆ ಹೆಚ್ಚೆಚ್ಚಾಗಿ ದೊರೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೇವರನ್ನು ಕುರಿತಾಗಿಯೂ, ನಮ್ಮ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿಯೂ ಇರುವ ಪರಿಜ್ಞಾನದಲ್ಲಿ ನಿಮಗೆ ಕೃಪೆಯೂ, ಶಾಂತಿಯೂ ಹೆಚ್ಚುಹೆಚ್ಚಾಗಿ ದೊರೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದೇವರ ಮತ್ತು ಪ್ರಭು ಯೇಸುಕ್ರಿಸ್ತರ ಬಗ್ಗೆ ನೀವು ಪಡೆಯುತ್ತಿರುವ ಜ್ಞಾನಾರ್ಜನೆಯು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅಧಿಕಾಧಿಕವಾಗಿ ತರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ. ದೇವರನ್ನು ಮತ್ತು ನಮ್ಮ ಪ್ರಭುವಾದ ಯೇಸುವನ್ನು ನೀವು ನಿಜವಾಗಿಯೂ ತಿಳಿದಿರುವುದರಿಂದ ನಿಮಗೆ ಕೃಪೆಯೂ ಶಾಂತಿಯೂ ದೊರೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇವರ ವಿಷಯವಾಗಿಯೂ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ವಿಷಯವಾಗಿಯೂ ಇರುವ ತಿಳುವಳಿಕೆಯ ಮೂಲಕ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ದೆವಾಚ್ಯಾ ವಿಶಯಾತ್ ಅನಿ ಅಮ್ಚ್ಯಾ ಧನಿಯಾ ಜೆಜುಚ್ಯಾ ವಿಶಯಾತ್ ತುಮಿ ಕಳ್ವುನ್ ಘೆತಲ್ಯಾತ್ ಭರ್ಪುರ್ ಕುರ್ಪಾ ಅನಿ ಶಾಂತಿ ಗಾವುಂದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:2
18 ತಿಳಿವುಗಳ ಹೋಲಿಕೆ  

ನೀವು ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಅಭಿವೃದ್ಧಿಯನ್ನು ಹೊಂದುತ್ತಾ ಇರ್ರಿ. ಆತನಿಗೆ ಈಗಲೂ ಸದಾಕಾಲವೂ ಸ್ತೋತ್ರ. ಆಮೆನ್.


ಇಷ್ಟೇ ಅಲ್ಲದೇ, ನನ್ನ ಕರ್ತನಾದ ಕ್ರಿಸ್ತ ಯೇಸುವನ್ನರಿಯುವದೇ ಅತಿಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿವಿುತ್ತ ನಾನು ಎಲ್ಲವನ್ನೂ ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ ದೇವರಿಗೆ ವಿಧೇಯರಾಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗುವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನುಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ದೇವರಿಂದ ಕರೆಯಲ್ಪಟ್ಟ ನಿಮಗೆ ಕರುಣೆಯೂ ಶಾಂತಿಯೂ ಪ್ರೀತಿಯೂ ಹೆಚ್ಚಾಗಲಿ.


ರೋಮಾಪುರದಲ್ಲಿ ದೇವರಿಗೆ ಪ್ರಿಯರೂ ದೇವಜನರಾಗುವದಕ್ಕೆ ಕರೆಯಲ್ಪಟ್ಟವರೂ ಆಗಿರುವವರೆಲ್ಲರಿಗೆ ಬರೆಯುವದೇನಂದರೆ - ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಇಂಥವನೆಂದು ತಂದೆಯೇ ಹೊರತು ಇನ್ಯಾವನೂ ತಿಳಿದವನಲ್ಲ; ತಂದೆ ಇಂಥವನೆಂದು ಮಗನೇ ಹೊರತು ಇನ್ನಾವನೂ ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ ಅಂದನು.


ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗಕುಲಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ -


ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವದೇನಂದರೆ - ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಾತನಿಂದ


ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.


ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸಂಬಂಧವಾದ ಪರಿಜ್ಞಾನವನ್ನು ಹೊಂದುವ ವಿಷಯದಲ್ಲಿ ನಿಮ್ಮನ್ನು ಆಲಸ್ಯಗಾರರೂ ನಿಷ್ಫಲರೂ ಆಗದಂತೆ ಮಾಡುತ್ತವೆ.


ನಮ್ಮನ್ನು ತನ್ನ ಪ್ರಭಾವದಿಂದಲೂ ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯ ಶಕ್ತಿಯು ನಮಗೆ ಪರಿಜ್ಞಾನವನ್ನು ಕೊಟ್ಟದ್ದರಲ್ಲಿ ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವು ದೊರೆಯಿತೆಂದು ಬಲ್ಲೆವಷ್ಟೆ.


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ ಕುಲಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿದನು - ನಿಮಗೆ ಸುಖವು ಹೆಚ್ಚೆಚ್ಚಾಗಲಿ!


ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು