Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:3 - ಕನ್ನಡ ಸತ್ಯವೇದವು J.V. (BSI)

3 ನಮ್ಮನ್ನು ತನ್ನ ಪ್ರಭಾವದಿಂದಲೂ ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯ ಶಕ್ತಿಯು ನಮಗೆ ಪರಿಜ್ಞಾನವನ್ನು ಕೊಟ್ಟದ್ದರಲ್ಲಿ ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವು ದೊರೆಯಿತೆಂದು ಬಲ್ಲೆವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ತಮ್ಮ ಸ್ವಂತ ಮಹಿಮೆಯಲ್ಲೂ ಸೌಭಾಗ್ಯದಲ್ಲೂ ಭಾಗಿಗಳಾಗಲು ದೇವರು ನಮ್ಮನ್ನು ಕರೆದಿದ್ದಾರೆ. ಅವರನ್ನು ಅರಿತುಕೊಳ್ಳುವುದರ ಮೂಲಕ ನಾವು ಭಕ್ತಿಯುತ ಜೀವನವನ್ನು ನಡೆಸಲು ಬೇಕಾದುದೆಲ್ಲವನ್ನೂ ಆ ಯೇಸುವಿನ ದಿವ್ಯಶಕ್ತಿಯಿಂದ ಪಡೆದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೇಸುವಿಗೆ ದೇವರ ಶಕ್ತಿಯಿದೆ. ಜೀವಿಸಲು ಮತ್ತು ದೇವರ ಸೇವೆ ಮಾಡಲು ಬೇಕಾದ ಪ್ರತಿಯೊಂದನ್ನು ಆತನ ಶಕ್ತಿಯು ನಮಗೆ ಒದಗಿಸಿದೆ. ನಾವು ಆತನನ್ನು ಬಲ್ಲವರಾದ್ದರಿಂದಲೇ ಅವುಗಳನ್ನು ಪಡೆದುಕೊಂಡಿದ್ದೇವೆ. ಯೇಸು ತನ್ನ ಪ್ರಭಾವದಿಂದಲೂ ಗುಣಾತಿಶಯದಿಂದಲೂ ನಮ್ಮನ್ನು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೇವರು ತಮ್ಮ ಸ್ವಂತ ಮಹಿಮೆಗಾಗಿಯೂ ಸದ್ಗುಣಕ್ಕಾಗಿಯೂ ನಮ್ಮನ್ನು ಕರೆದಿದ್ದಾರೆ. ಏಕೆಂದರೆ, ದೇವರ ತಿಳುವಳಿಕೆಯ ಮೂಲಕವಾಗಿ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ದೇವರ ಶಕ್ತಿಯು ನಮಗೆ ಕೊಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತೆಚ್ಯಾ ದೈವಿಕ್ ಬಳಾನ್ ಅಮ್ಕಾ ಅಮ್ಚ್ಯಾ ಜಿವನಾಕ್ ಅನಿ ದೆವಸ್ಪಾನಾಕ್ ಪಾಜೆ ಹೊಲ್ಲೆ ಸಗ್ಳೆ ದಿಲ್ಯಾನಾಯ್, ತೆಚ್ಯಾ ಶಾನ್ಪಾನಾಚ್ಯಾ ವೈನಾ ಅಮ್ಕಾ ತೆನಿ ಅಪ್ನಾಚ್ಯಾ ಸ್ವತಾಚ್ಯಾ ಮಹಿಮೆನ್ ಅನಿ ಬರೆಪಾನಾನ್ ಬಲ್ವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:3
39 ತಿಳಿವುಗಳ ಹೋಲಿಕೆ  

ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು.


ಆತನು ನಮ್ಮಲ್ಲಿ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವದಕ್ಕೆ ಕರೆದನು.


ಯೆಹೋವದೇವರು ಸೂರ್ಯನೂ ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನು?


ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ; ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೇ?


ಅದಕ್ಕಾತನು - ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ಬಲವು ಪೂರ್ಣಸಾಧಕವಾಗುತ್ತದೆ ಎಂದು ನನಗೆ ಹೇಳಿದ್ದಾನೆ. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲಸಿಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾವಸ್ಥೆಗಳ ವಿಷಯದಲ್ಲಿಯೇ ಬಹುಸಂತೋಷವಾಗಿ ಹೆಚ್ಚಳಪಡುವೆನು.


ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿಹೋದನು.


ನೀವು ಹೀಗೆ ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು.


ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ತನ್ನ ರಾಜ್ಯಪ್ರಭಾವಗಳಲ್ಲಿ ಪಾಲುಗಾರರಾಗುವದಕ್ಕೆ ಕರೆಯುವ ದೇವರಿಗೆ ಯೋಗ್ಯರಾಗಿ ನೀವು ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೇ ತಿಳಿದದೆ.


ದೇವರು ನಮ್ಮನ್ನು ಬಂಡತನಕ್ಕೆ ಕರೆಯದೆ ಶುದ್ಧರಾಗಿರುವದಕ್ಕೆ ಕರೆದನು.


ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರಿ.


ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಯೋಗ್ಯರಾಗಿ ನಡೆದುಕೊಳ್ಳಬೇಕೆಂದು ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.


ದೇವರು ನಂಬಿಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.


ದೇವರ ವಿಷಯವಾಗಿಯೂ ನಮ್ಮ ಕರ್ತನಾದ ಯೇಸುವಿನ ವಿಷಯವಾಗಿಯೂ ಪರಿಜ್ಞಾನವು ನಿಮಗೆ ಉಂಟಾಗುವದರಲ್ಲಿ ಕೃಪೆಯೂ ಶಾಂತಿಯೂ ನಿಮಗೆ ಹೆಚ್ಚೆಚ್ಚಾಗಿ ದೊರೆಯಲಿ.


ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ


ಅಪಕಾರಕ್ಕೆ ಅಪಕಾರವನ್ನು ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.


ಭೂಪರಲೋಕಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನಗಳಾಗಲಿ ಪ್ರಭುತ್ವಗಳಾಗಲಿ ದೊರೆತನಗಳಾಗಲಿ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನ ಮುಖಾಂತರವಾಗಿಯೂ ಆತನಿಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು.


ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು; ಅದಕ್ಕೆ ಇಹಪರಗಳಲ್ಲಿಯೂ ಜೀವವಾಗ್ದಾನ ಉಂಟು.


ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು,


ಕಡೇ ಮಾತೇನಂದರೆ, ಸಹೋದರರೇ, ಯಾವಾವದು ಸತ್ಯವೂ ಮಾನ್ಯವೂ ನ್ಯಾಯವೂ ಶುದ್ಧವೂ ಪ್ರೀತಿಕರವೂ ಮನೋಹರವೂ ಆಗಿದೆಯೋ, ಯಾವದು ಸದ್ಗುಣವಾಗಿದೆಯೋ, ಯಾವದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳನ್ನೂ ಲಕ್ಷ್ಯಕ್ಕೆ ತಂದುಕೊಳ್ಳಿರಿ.


ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಈತನು ದೇವರ ಪ್ರಭಾವದ ಪ್ರಕಾಶವೂ ಆತನ ತತ್ವದ ಮೂರ್ತಿಯೂ ತನ್ನ ಶಕ್ತಿಯ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ಪಾಪವಿಶುದ್ಧಿಮಾಡಿದ ಮೇಲೆ ಉನ್ನತಲೋಕದೊಳಗೆ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವಕ ಸೈನಿಕರು ಉದಯಕಾಲದ ಇಬ್ಬನಿಯಂತಿರುವರು.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.


ಆತನು ಕರುಣಿಸಿದ ನಮ್ಮನ್ನು ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿದಂತೆ ಅನ್ಯಜನರೊಳಗಿಂದ ಸಹ ಕರೆದನು.


ಗುಣವಂತೆಯು ಪತಿಯ ತಲೆಗೆ ಕಿರೀಟ; ಮಾನ ಕಳೆಯುವವಳು ಪತಿಯ ಎಲುಬಿಗೆ ಕ್ಷಯ.


ನನ್ನ ಮಗಳೇ, ಈಗ ಭಯಪಡಬೇಡ. ನೀನು ಗುಣವಂತೆಯೆಂಬದು ಊರಿನವರಿಗೆಲ್ಲಾ ಗೊತ್ತದೆ; ಆದದರಿಂದ ನೀನು ಹೇಳಿದ್ದನ್ನೆಲ್ಲಾ ಮಾಡುವೆನು.


ಪತಿಯು ಸಹ - ಬಹುಮಂದಿ ಸ್ತ್ರೀಯರು ಗುಣವತಿಯರಾಗಿ ನಡೆದಿದ್ದಾರೆ, ಅವರೆಲ್ಲರಿಗಿಂತಲೂ ನೀನೇ ಶ್ರೇಷ್ಠಳು ಎಂದು ಆಕೆಯನ್ನು ಕೊಂಡಾಡುವನು.


ಗುಣವತಿಯಾದ ಸತಿಯು ಎಲ್ಲಿ ಸಿಕ್ಕಾಳು? ಆಕೆಯು ಹವಳಕ್ಕಿಂತಲೂ ಬಹು ಅಮೂಲ್ಯಳು.


ಇಷ್ಟೇ ಅಲ್ಲದೇ, ನನ್ನ ಕರ್ತನಾದ ಕ್ರಿಸ್ತ ಯೇಸುವನ್ನರಿಯುವದೇ ಅತಿಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿವಿುತ್ತ ನಾನು ಎಲ್ಲವನ್ನೂ ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.


ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ


ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸಂಬಂಧವಾದ ಪರಿಜ್ಞಾನವನ್ನು ಹೊಂದುವ ವಿಷಯದಲ್ಲಿ ನಿಮ್ಮನ್ನು ಆಲಸ್ಯಗಾರರೂ ನಿಷ್ಫಲರೂ ಆಗದಂತೆ ಮಾಡುತ್ತವೆ.


ಆದದರಿಂದ ಸಹೋದರರೇ, ದೇವರು ನಿಮ್ಮನ್ನು ಕರೆದದ್ದನ್ನೂ ಆದುಕೊಂಡದ್ದನ್ನೂ ದೃಢಪಡಿಸಿಕೊಳ್ಳುವದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡಹುವದಿಲ್ಲ.


ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.


ನೀವು ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಅಭಿವೃದ್ಧಿಯನ್ನು ಹೊಂದುತ್ತಾ ಇರ್ರಿ. ಆತನಿಗೆ ಈಗಲೂ ಸದಾಕಾಲವೂ ಸ್ತೋತ್ರ. ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು