Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:4 - ಕನ್ನಡ ಸತ್ಯವೇದವು J.V. (BSI)

4 ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಪ್ರಭಾವ ಗುಣಾತಿಶಯಗಳಿಂದ ಅಮೂಲ್ಯವಾಗಿಯೂ ಉತ್ಕೃಷ್ಟವಾಗಿಯೂ ಇರುವ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀವು ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೀಗೆ ನೀವು ಲೋಕದಲ್ಲಿ ಆಶಾಪಾಶಗಳಿಂದ ಉಂಟಾಗುವ ಭ್ರಷ್ಟಾಚಾರದಿಂದ ತಪ್ಪಿಸಿಕೊಂಡು ದೈವಿಕಸ್ವಭಾವದಲ್ಲಿ ಪಾಲುಗಾರರಾಗುವಂತೆ, ದೇವರು ಅಮೂಲ್ಯವೂ ಅತ್ಯುತ್ತಮವೂ ಆದ ವಾಗ್ದಾನಗಳನ್ನು ಅನುಗ್ರಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೇಸು ತಾನು ಮಾಡಿದ ವಾಗ್ದಾನದಂತೆ, ತನ್ನ ಪ್ರಭಾವ ಮತ್ತು ಗುಣಾತಿಶಯಗಳ ಮೂಲಕ ನಮಗೆ ಅಮೂಲ್ಯವಾದ ಹಾಗೂ ಉತ್ಕೃಷ್ಟವಾದ ವರಗಳನ್ನು ದಯಪಾಲಿಸಿರುವನು. ಆ ವರಗಳಿಂದ ನೀವು ದೇವರ ಗುಣಾತಿಶಯದಲ್ಲಿ ಪಾಲುಗಾರರಾಗಲು ಸಾಧ್ಯ. ಹೀಗಿರಲಾಗಿ ನೀವು ಈ ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನಕ್ಕೆ ತಪ್ಪಿಸಿಕೊಂಡವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಅತ್ಯಂತ ಮಹತ್ವವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ದೇವರು ನಮಗೆ ದಯಪಾಲಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅಸೆ ತೆನಿ ಅಮ್ಕಾ ಗೊಸ್ಟ್ ದಿವ್ನ್ ಸಾಂಗಲ್ಲೆ ಲೈ ಮೊಟೆ ಅನಿ ಕಿಮ್ತಿಚೆ ವರು ದಿಲ್ಯಾನಾಯ್, ಅಸೆ ಹ್ಯಾ ವರುಕ್ ಲಾಗುನ್ ತೆನಿ ಹ್ಯಾ ಜಗಾಚ್ಯಾ ನಾಸ್ ಹೊವ್ನ್ ಜಾತಲ್ಯಾ ಬುರ್ಶ್ಯಾಪಾನಾತ್ನಾ ಚುಕ್ವುನ್ ಘೆವ್ಚೆ ಅನಿ ದೆವಾಚ್ಯಾ ಗುನಾತ್ ವಾಟೊ ಘೆಯ್ ಸಾರ್ಕೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:4
25 ತಿಳಿವುಗಳ ಹೋಲಿಕೆ  

ನಾವೆಲ್ಲರೂ ಮುಸುಕುತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ಪ್ರಭಾವದಿಂದ ಅಧಿಕಪ್ರಭಾವಕ್ಕೆ ಹೋಗುತ್ತಾ ಆ ಪ್ರಭಾವದ ಸಾರೂಪ್ಯವುಳ್ಳವರೇ ಆಗುತ್ತೇವೆ; ಇದು ದೇವರಾತ್ಮನಾಗಿರುವ ಕರ್ತನ ಕೆಲಸಕ್ಕನುಸಾರವಾದದ್ದೇ.


ಈ ಸ್ವಭಾವವು ಅದನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ದಿನೇದಿನೇ ನೂತನವಾಗುತ್ತಾ ಪೂರ್ಣಜ್ಞಾನವನ್ನು ಉಂಟುಮಾಡುತ್ತದೆ.


ಆ ತಂದೆಗಳು ಕೆಲವು ದಿವಸಗಳ ಪ್ರಯೋಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ.


ಪ್ರಿಯರೇ, ಈಗ ದೇವರ ಮಕ್ಕಳಾಗಿದ್ದೇವೆ; ಮುಂದೆ ನಾವು ಏನಾಗುವೆವೋ ಅದು ಇನ್ನು ಪ್ರತ್ಯಕ್ಷವಾಗಲಿಲ್ಲ. ಕ್ರಿಸ್ತನು ಪ್ರತ್ಯಕ್ಷನಾಕುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು;


ಆದದರಿಂದ ಅನ್ಯಜನರ ಮಧ್ಯದಲ್ಲಿಂದ ಹೊರಟು ಬಂದು ಪ್ರತ್ಯೇಕವಾಗಿರಿ; ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.


ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶನವನ್ನು ಕೊಯ್ಯುವನು. ಆತ್ಮನನ್ನು ಕುರಿತು ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.


ಕ್ರಿಸ್ತನು ತಾನು ಕೊಡುತ್ತೇನೆಂದು ನಮಗೆ ವಾಗ್ದಾನ ಮಾಡಿದ್ದು ನಿತ್ಯಜೀವವು.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವದೇನಂದರೆ -


ಮತ್ತು ಈ ಕಾರಣದಿಂದ ಆತನು ಒಂದು ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ. ಮೊದಲನೆಯ ಒಡಂಬಡಿಕೆಯ ಕಾಲದಲ್ಲಿ ನಡೆದ ಅಕ್ರಮಗಳ ಪರಿಹಾರಕ್ಕಾಗಿ ಆತನು ಮರಣವನ್ನು ಅನುಭವಿಸಿದ್ದರಿಂದ ದೇವರಿಂದ ಕರೆಯಿಸಿಕೊಂಡವರು ವಾಗ್ದಾನವಾಗಿದ್ದ ನಿತ್ಯಬಾಧ್ಯತೆಯನ್ನು ಹೊಂದುವದಕ್ಕೆ ಆತನ ಮೂಲಕ ಮಾರ್ಗವಾಯಿತು.


ನಿಶ್ಚಯವಾಗಿ ದೇವರ ವಾಗ್ದಾನಗಳು ಎಷ್ಟಿದ್ದರೂ ಕ್ರಿಸ್ತನಲ್ಲೇ ದೃಢವಾಗುತ್ತವೆ. ಆದಕಾರಣ ದೇವರ ಪ್ರಭಾವವು ಪ್ರಕಾಶವಾಗುವದಕ್ಕೋಸ್ಕರ ಆತನ ಮೂಲಕವಾಗಿ ನಾವು ಆಮೆನ್ ಎಂದು ಹೇಳುತ್ತೇವೆ.


ಒಳ್ಳೇದು, ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು. ಆತನು ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬನು ಕ್ರಿಸ್ತನೇ.


ಅವರು ಇಸ್ರಾಯೇಲನ ವಂಶದವರೂ ದೇವರು ಪುತ್ರರಾಗಿ ಸ್ವೀಕರಿಸಿದವರೂ ಆಗಿದ್ದಾರೆ. ಅವರಲ್ಲಿ ದೇವರ ತೇಜಸ್ಸಾನ್ನಿಧ್ಯವು ಇದೆ; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡನು; ಅವರಿಗೆ ಧರ್ಮಶಾಸ್ತ್ರವೂ ದೇವಾಲಯದಲ್ಲಿ ನಡೆಯುವ ಆರಾಧನೆಯೂ ವಾಗ್ದಾನಗಳೂ ಕೊಡೋಣವಾದವು.


ನಾವೆಲ್ಲರು ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯವನ್ನು ಹೊಂದಿ ಪ್ರವೀಣತೆಗೆ ಬಂದವರಾಗಿ ಕ್ರಿಸ್ತನ ಪರಿಪೂರ್ಣತೆಯೆಂಬ ಪ್ರಮಾಣವನ್ನು ಮುಟ್ಟುವ ತನಕ


ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.


ಕರ್ತನು ತನ್ನ ವಾಗ್ದಾನವನ್ನು ನೆರವೇರಿಸುವದಕ್ಕೆ ತಡಮಾಡುತ್ತಾನೆಂಬದಾಗಿ ಕೆಲವರು ಅರ್ಥಮಾಡಿಕೊಳ್ಳುವ ಪ್ರಕಾರ ಆತನು ತಡಮಾಡುವವನಲ್ಲ. ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.


ಆದರೆ ನಾವು ದೇವರ ವಾಗ್ದಾನವನ್ನು ನಂಬಿ ನೂತನಾಕಾಶಮಂಡಲವನ್ನೂ ನೂತನಭೂಮಂಡಲವನ್ನೂ ಎದುರು ನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು