Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:11 - ಕನ್ನಡ ಸತ್ಯವೇದವು J.V. (BSI)

11 ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಮಹಾಪದವಿಯವರ ಮೇಲೆ ದೂಷಣಾಭಿಪ್ರಾಯವನ್ನು ಹೇಳುವದಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಅವರಿಗೆ ವಿರೋಧವಾಗಿ ದೂಷಣೆಯನ್ನು, ನಿಂದೆಯನ್ನು ಹೇಳದಿರಲು, ಆ ಗರ್ವಿಷ್ಠರು ಮಹಿಮಾಪದವಿಗಳನ್ನು ದೂಷಿಸಲು ಹಿಂಜರಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈ ಕಳ್ಳಬೋಧಕರು ಉದ್ಧಟರು, ಸ್ವೇಚ್ಛಾಪರರು, ಸ್ವರ್ಗನಿವಾಸಿಗಳನ್ನು ದೂಷಿಸುವವರು. ದೇವದೂತರು ಶಕ್ತಿಯಲ್ಲಿ ಮತ್ತು ಪರಾಕ್ರಮದಲ್ಲಿ ಶ್ರೇಷ್ಠರಾಗಿದ್ದರೂ ಸಹ ಈ ಸ್ವರ್ಗನಿವಾಸಿಗಳನ್ನು ಪ್ರಭುವಿನ ಮುಂದೆ ದೂಷಿಸುವುದೂ ಇಲ್ಲ, ಖಂಡಿಸುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವದೂತರು ಈ ಸುಳ್ಳುಬೋಧಕರಿಗಿಂತ ಹೆಚ್ಚು ಬಲಿಷ್ಠರಾಗಿದ್ದಾರೆ ಮತ್ತು ಹೆಚ್ಚು ಶಕ್ತಿಯುಳ್ಳವರಾಗಿದ್ದಾರೆ. ಆದರೂ ದೇವದೂತರು ಸುಳ್ಳುಬೋಧಕರನ್ನು ಪ್ರಭುವಿನ ಸನ್ನಿಧಿಯಲ್ಲಿ ದೂಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೂ ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಸ್ವರ್ಗೀಯ ಜೀವಿಗಳ ವಿರೋಧವಾಗಿ ಕರ್ತದೇವರ ಮುಂದೆ ಇವರು ನ್ಯಾಯತೀರ್ಪನ್ನು ತರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಕಶ್ಯಾಕ್ ಮಟ್ಲ್ಯಾರ್, ಹ್ಯಾ ಝುಟಿ ಶಿಕಾಪಾ ಶಿಕ್ವುತಲ್ಯಾಂಚ್ಯಾನ್ಕಿ ದೆವಾಚಿ ದುತಾ ಲೈ ಬಳಾಚೆ ಅನಿ ತಾಕ್ತಿಚೆ ಹೊವ್ನ್ ಹಾತ್, ಖರೆ ತೆನಿ ಹ್ಯಾ ಝುಟ್ಯಾ ಶಿಕಾಪಾಕಾರಾಕ್ನಿ ಧನಿಯಾಚ್ಯಾ ಇದ್ರಾಕ್ ಝಡ್ತಿ ಕರಿನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:11
6 ತಿಳಿವುಗಳ ಹೋಲಿಕೆ  

ಆದರೆ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದಮಾಡಿದಾಗ ಅವನು ಸೈತಾನನ ಮೇಲೆ ದೂಷಣಾಭಿಪ್ರಾಯವನ್ನು ಹೇಳುವದಕ್ಕೆ ಧೈರ್ಯಗೊಳ್ಳದೆ - ಕರ್ತನು ನಿನ್ನನ್ನು ಖಂಡಿಸಲಿ ಅಂದನು.


ಯಾವಾಗ ಕೊಡುವನಂದರೆ ಯೇಸು ಕರ್ತನು ತನ್ನ ಶಕ್ತಿಯನ್ನು ತೋರ್ಪಡಿಸುವ ದೇವದೂತರಿಂದ ಕೂಡಿದವನಾಗಿ ಉರಿಯುವ ಬೆಂಕಿಯಲ್ಲಿ ಆಕಾಶದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.


ಗಾಳಿಗಳನ್ನು ನಿನ್ನ ದೂತರನ್ನಾಗಿಯೂ ಅಗ್ನಿಜ್ವಾಲೆಯನ್ನು ಸೇವಕರನ್ನಾಗಿಯೂ ಮಾಡಿಕೊಳ್ಳುತ್ತೀ.


ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು; ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ; ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು, ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ ಎಂದು ಹೇಳಿದನು.


ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೇ, ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ.


ಸೂಳೆಗಾರಿಕೆ ಕಳ್ಳತನ ಕೊಲೆ ಹಾದರ ದ್ರವ್ಯಾಶೆ ಕೆಡುಕುತನ ಮೋಸ ಬಂಡತನ ಹೊಟ್ಟೇಕಿಚ್ಚು ಬೈಗಳು ಸೊಕ್ಕು ಬುದ್ಧಿಗೇಡಿತನ ಇವೇ ಮೊದಲಾದವುಗಳ ಕೆಟ್ಟ ಆಲೋಚನೆಗಳು ಹೊರಡುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು