Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:16 - ಕನ್ನಡ ಸತ್ಯವೇದವು J.V. (BSI)

16 ಆದರೆ ಅವನ ಅಕ್ರಮಕ್ಕೆ ಖಂಡನೆಯಾಯಿತು; ಮೂಕ ಪಶುವು ಮನುಷ್ಯಸ್ವರದಿಂದ ಮಾತಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಅವನ ದುಷ್ಟ ಕೃತ್ಯಕ್ಕೆ ಖಂಡನೆಯಾಯಿತು. ಮೂಕ ಪ್ರಾಣಿಯಾದ ಕತ್ತೆಯು ಮನುಷ್ಯಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನವನ್ನು ಅಡ್ಡಿ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಬಿಳಾಮನು ಅನೀತಿಯಿಂದ ಹಣಗಳಿಸಿದ ಲಾಭಕೋರ; ತನ್ನ ಅಕ್ರಮಕ್ಕೆ ತಕ್ಕ ದಂಡನೆಯನ್ನು ಅನುಭವಿಸಿದವನು. ಮೂಕ ಹೇಸರಗತ್ತೆಯೊಂದು ಮಾನವನಂತೆ ಮಾತಾಡಿ ಈ ಪ್ರವಾದಿಯ ಮೂರ್ಖತನಕ್ಕೆ ತಡೆಹಾಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಅವನು ಮಾಡುತ್ತಿರುವುದು ತಪ್ಪೆಂದು ಒಂದು ಹೇಸರಕತ್ತೆಯು ಅವನಿಗೆ ತಿಳಿಸಿತು. ಅದು ಒಂದು ಮೂಕಪ್ರಾಣಿ. ಆದರೆ ಅದು ಮಾನವನಂತೆ ಮಾತಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಅವನ ದುಷ್ಟತನಕ್ಕೆ ಖಂಡನೆಯಾಯಿತು. ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖರೆ ತೊ ಕರುಕ್ ಲಾಗಲ್ಲೆ ಚುಕ್ ಮನುನ್ ಎಕ್ ಗಾಡ್ವಾನ್ ಕಳ್ವುಲ್ಯಾನ್. ತೆ ಎಕ್ ಮುಕ್ಕೆ ಜನಾವರ್, ಖರೆ ತೆನಿ ಮಾನ್ಸಾ ಸಾರ್ಕೆ ಬೊಲುನ್ ತ್ಯಾ ಪ್ರವಾದಿಚ್ಯಾ ಪಿಶೆ ಪಾನಾಕ್ ಅಡ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:16
8 ತಿಳಿವುಗಳ ಹೋಲಿಕೆ  

ಎಲ್ಲಾ ಸಭಾಮಂದಿರಗಳಲ್ಲಿಯೂ ನಾನು ಅನೇಕಾವರ್ತಿ ಅವರನ್ನು ದಂಡಿಸಿ ಅವರಿಂದ ದೂಷಣೆಯ ಮಾತುಗಳನ್ನಾಡಿಸುವದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಪರಪಟ್ಟಣಗಳ ತನಕ ಅವರನ್ನು ಹಿಂಸೆಪಡಿಸಿದೆನು.


ಹೀಗಿರುವದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಕೊಟ್ಟಾರು?


ದಂಡನೆಯ ದಿನಗಳು ಹತ್ತರಿಸಿವೆ, ಮುಯ್ಯಿತೀರಿಸುವ ದಿವಸಗಳು ಸಮೀಪಿಸಿವೆ; ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; [ಇಸ್ರಾಯೇಲೇ,] ನಿನ್ನ ಅಧರ್ಮವು ಬಹಳವಾಗಿರುವದರಿಂದಲೂ ವಿರೋಧವು ಹೆಚ್ಚಾಗಿರುವದರಿಂದಲೂ ಪ್ರವಾದಿಯು ಮೂರ್ಖನು, ದೇವರಾತ್ಮಾವಿಷ್ಟನು ಹುಚ್ಚನು [ಅಂದುಕೊಳ್ಳುತ್ತಿ].


ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕವ್ಯವಹಾರದಲ್ಲೆಲ್ಲಾ ಸೇರಿಕೊಂಡಿದೆ; ಇದಲ್ಲದೆ ನರವಂಶದವರ ಎದೆಯಲ್ಲಿ ಕೆಟ್ಟತನವು ತುಂಬಿದೆ; ಅವರು ಬದುಕಿರುವ ತನಕ ಮರುಳುತನವು ಅವರ ಮನಸ್ಸನ್ನು ಹಿಡಿದಿರುವದು. ಆಮೇಲೆ ಪ್ರೇತಲೋಕವೇ ಗತಿ.


ನಾನು ತಿರುಗಿಕೊಂಡು ಜ್ಞಾನವನ್ನೂ ಮೂಲತತ್ವವನ್ನೂ ಹುಡುಕಿ ವಿಚಾರಿಸಿ ಗ್ರಹಿಸುವದಕ್ಕೂ ಅಧರ್ಮವು ಮೂಢತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳುವದಕ್ಕೂ ಮನಸ್ಸಿಟ್ಟೆನು.


ನೀನು ನರನನ್ನು ಪಾಪದ ನಿವಿುತ್ತ ಗದರಿಸಿ ಶಿಕ್ಷಿಸುವಾಗ ಅವನ ಚೆಲುವಿಕೆಯು ನುಸಿಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ. ಮನುಷ್ಯನೆಂಬವನು ಬರೀ ಉಸಿರೇ. ಸೆಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು