Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:18 - ಕನ್ನಡ ಸತ್ಯವೇದವು J.V. (BSI)

18 ತಪ್ಪಾದ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಬಂಡುಬಂಡಾದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ದುರ್ಮಾರ್ಗಿಗಳ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರನ್ನು ಇವರು ಜಂಬದ ಸೊಕ್ಕುಮಾತುಗಳಿಂದ, ಮೂರ್ಖ ಹೇಳಿಕೆಗಳಿಂದ, ಭೋಗ-ವಿಲಾಸಗಳ ಬಲೆಯಿಂದ ವಶಪಡಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವರು ಅರ್ಥವಿಲ್ಲದ ಮಾತು ಗಳಿಂದ ಬಡಾಯಿಕೊಚ್ಚಿಕೊಳ್ಳುತ್ತಾರೆ; ಜನರನ್ನು ಪಾಪಗಳ ಬಲೆಗೆ ನಡೆಸುತ್ತಿದ್ದಾರೆ. ತಪ್ಪುಮಾರ್ಗದಲ್ಲಿ ನಡೆಯುವ ಜನರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡು ಬಂದ ಜನರನ್ನು ದಾರಿತಪ್ಪಿಸುತ್ತಾರೆ. ತಮ್ಮ ಪಾಪಸ್ವಭಾವಕ್ಕನುಸಾರವಾಗಿ ಮಾಡಲು ಇಚ್ಛಿಸುವ ಕೆಟ್ಟಕಾರ್ಯಗಳನ್ನು ಬಳಸಿಕೊಂಡು ಈ ಸುಳ್ಳುಬೋಧಕರು ಅವರನ್ನು ದಾರಿ ತಪ್ಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ತಪ್ಪಾದ ಮಾರ್ಗದಲ್ಲಿ ಬಾಳುವವರಿಂದ ತಪ್ಪಿಸಿಕೊಂಡವರನ್ನು ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೆನಿ ಪವಿತ್ರ್ ನಸಲ್ಲಿ ಗೊಸ್ಟಿಯಾ ಬೊಲುನ್ ಬುರ್ಶ್ಯಾಪಾನಾ ವೈನಾ ತ್ಯಾ ಲೊಕಾಕ್ನಿ ಗೊಂದಳಾಚ್ಯಾ ವಾಟೆತ್ ಚಲ್ವುತಲ್ಯಾ ಲೊಕಾಂಚ್ಯಾಕ್ನಾ ಚುಕ್ವುನ್ ಘೆವ್ಕ್ ಯೆಲ್ಲ್ಯಾಕ್ನಿ ವಾಟ್ ಚುಕ್ವುತಾತ್, ಅಪ್ಲ್ಯಾ ಪಾಪಾಚ್ಯಾ ಸ್ವಭಾವಾ ಸಾರ್ಕೆ ಕರುಕ್ ಇಚ್ಛ್ಯಾ ಕರ್ತಲಿ ಬುರ್ಶಿಕಾಮಾ ವಾಪ್ರುನ್ ಘೆವ್ಕ್ ಹಿ ಝುಟಿ ಶಿಕಾಪಾಕಾರಿ ತೆಂಕಾ ವಾಟ್ ಚುಕ್ವುತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:18
22 ತಿಳಿವುಗಳ ಹೋಲಿಕೆ  

ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.


ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಪ್ರಭಾವ ಗುಣಾತಿಶಯಗಳಿಂದ ಅಮೂಲ್ಯವಾಗಿಯೂ ಉತ್ಕೃಷ್ಟವಾಗಿಯೂ ಇರುವ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.


ದುಂದೌತಣ ಕುಡಿಕತನಗಳಲ್ಲಿಯಾಗಲಿ ಕಾಮ ವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚುಗಳಲ್ಲಿಯಾಗಲಿ ಕಾಲಕಳೆಯದೆ ಹಗಲು ಹೊತ್ತಿಗೆ ತಕ್ಕಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.


ಭೂಲೋಕದಲ್ಲಿ ನೀವು ಅತಿಭೋಗಿಗಳಾಗಿ ಬದುಕಿ ಮನಸ್ಸು ಬಂದಂತೆ ನಡೆದುಕೊಂಡಿದ್ದೀರಿ. ವಧೆಯ ದಿವಸ ಬಂದರೂ ನಿಮ್ಮನ್ನು ಕೊಬ್ಬಿಸಿಕೊಂಡಿದ್ದೀರಿ.


ಯಾವದು ದೇವರೆನಿಸಿಕೊಳ್ಳುತ್ತದೋ ಯಾವದು ಪೂಜೆ ಹೊಂದುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಹೇಳಿಕೊಂಡು ದೇವರ ಗರ್ಭಗುಡಿಯಲ್ಲೇ ಕೂತುಕೊಳ್ಳುತ್ತಾನೆ.


ಮತ್ತೊಂದು ಮೃಗವು ಭೂವಿುಯೊಳಗಿಂದ ಬರುವದನ್ನು ಕಂಡೆನು. ಇದಕ್ಕೆ ಟಗರಿಗಿರುವಂತೆ ಎರಡು ಕೊಂಬುಗಳಿದ್ದವು; ಘಟಸರ್ಪದಂತೆ ಮಾತಾಡಿತು.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.


ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು.


ಬೇರೆ ಅನೇಕವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು - ವಕ್ರಬುದ್ಧಿಯುಳ್ಳ ಈ ಸಂತತಿಯವರಿಂದ ತಪ್ಪಿಸಿಕೊಳ್ಳಿರಿ ಎಂದು ಅವರನ್ನು ಎಚ್ಚರಿಸಿದನು.


ರಾಜನು ಮನಸ್ಸುಬಂದ ಹಾಗೆ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಉಬ್ಬಿ ದೇವಾಧಿದೇವನನ್ನು ವಿುತಿಮೀರಿ ದೂಷಿಸಿ [ನಿಮ್ಮ ಮೇಲಿನ] ದೇವೋಗ್ರವು ತೀರುವ ತನಕ ವೃದ್ಧಿಯಾಗಿರುವನು; ದೈವಸಂಕಲ್ಪವು ನೆರವೇರಲೇಬೇಕು.


ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವದು ಇಗೋ, ಮಹಾಪಟ್ಟಣವಾದ ಈ ಬಾಬೆಲ್ ಎಂದು ಕೊಚ್ಚಿಕೊಂಡನು.


ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರದೆಂದು ಕರ್ತನಲ್ಲಿರುವವನಾಗಿ ನಿಮಗೆ ಖಂಡಿತವಾಗಿ ಹೇಳುತ್ತೇನೆ.


ಅವರ ನಿರ್ಲಜ್ಜಾಕೃತ್ಯಗಳನ್ನು ಅನೇಕರು ಅನುಸರಿಸುವರು; ಅವರ ನಿವಿುತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವದು.


ಆದರೆ ಆ ಅಧರ್ಮಿಗಳ ನಾಚಿಕೆಗೆಟ್ಟ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು.


ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲಚಿತ್ತರನ್ನು ಮರುಳುಗೊಳಿಸುವವರೂ ಲೋಭದಲ್ಲಿ ತೇರ್ಗಡೆಹೊಂದಿದ ಮನಸ್ಸುಳ್ಳವರೂ ಶಾಪಕ್ಕೆ ಪಾತ್ರರೂ ಆಗಿದ್ದಾರೆ.


ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ಅಧರ್ಮಿಗಳ ಭ್ರಾಂತಿಯ ಸೆಳವಿಗೆ ಸಿಕ್ಕಿಕೊಂಡು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಟರಾಗದಂತೆ ಎಚ್ಚರಿಕೆಯಾಗಿರಿ.


ದೇವರ ಮನುಷ್ಯನು ಹಿಂದಿರುಗಿಕೊಂಡು ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.


ನಿನ್ನವರು ದೊಡ್ಡ ಬಾಯಿಮಾಡಿ ನನ್ನ ಮೇಲೆ ಆಡಿದ ಹೆಚ್ಚು ಹರಟೆಗಳನ್ನು ಕೇಳಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು