2 ಪೇತ್ರನು 2:20 - ಕನ್ನಡ ಸತ್ಯವೇದವು J.V. (BSI)20 ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಮ್ಮ ಪ್ರಭು ಹಾಗೂ ಉದ್ಧಾರಕರಾದ ಯೇಸುಕ್ರಿಸ್ತರನ್ನು ಕುರಿತ ಜ್ಞಾನದ ಮೂಲಕ ಕೆಲವರು ಲೋಕದ ಕಲ್ಮಶದಿಂದ ಪಾರಾಗಿ ನಿರ್ಮಲರಾಗುತ್ತಾರೆ. ಇಂಥವರು ಮರಳಿ ಅದರಲ್ಲೇ ಸಿಲುಕಿಕೊಂಡು ಅದಕ್ಕೆ ಗುಲಾಮರಾದರೆ ಅವರ ಅಂತಿಮ ಗತಿ ಮೊದಲ ಗತಿಗಿಂತಲೂ ಅಧೋಗತಿಯಾಗಿರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಈ ಲೋಕದಲ್ಲಿನ ಕೆಟ್ಟಕಾರ್ಯಗಳಿಂದ ಆ ಜನರನ್ನು ಪಾರುಮಾಡಲಾಯಿತು. ನಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದರ ಮೂಲಕ ಅವರಿಗೆ ಬಿಡುಗಡೆಯಾಯಿತು. ಆದರೆ ಆ ಜನರು ತಮ್ಮ ಹಿಂದಿನ ಸಂಗತಿಗಳ ಕಡೆಗೆ ಹಿಂದಿರುಗಿಹೋದರೆ ಮತ್ತು ಅವುಗಳು ಅವರನ್ನು ತಮ್ಮ ಹತೋಟಿಯಲ್ಲಿಟ್ಟುಕೊಂಡಿದ್ದರೆ ಅವರು ಮೊದಲಿಗಿಂತಲೂ ಹೆಚ್ಚು ಕೆಟ್ಟುಹೋಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನಹೊಂದಿ ಲೋಕದ ಮಾಲಿನ್ಯಗಳನ್ನು ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಅಮ್ಚ್ಯಾ ಧನಿಯಾ ಜೆಜುಕ್ರಿಸ್ತಾಕ್ ಒಳ್ಕುನ್ ಘೆಟಲ್ಲ್ಯಾ ವೈನಾ ತೆಂಕಾ ಸುಟ್ಕಾ ಹೊಲೆ, ಅನಿ ಹ್ಯಾ ಜಗಾತ್ಲ್ಯಾ ಬುರ್ಶ್ಯಾ ಕಾಮಾತ್ನಾ ತ್ಯಾ ಲೊಕಾಕ್ನಿ ಸುಟ್ಕಾ ಕರುನ್ ಹೊಲೆ, ಅಸೆ ರಾತಾನಾ ಪಾಟಿ ಪರ್ತುನ್ ಗೆಲ್ಯಾರ್ ಅನಿ ತ್ಯಾ ಸಂಗತಿಯಾನಿ ತೆಂಕಾ ಹತೊಟಿತ್ ಥವ್ನ್ ಘೆಟಲ್ಲೆ ಹೊಯ್ ಹೊಲ್ಯಾರ್ ತೆನಿ ಅದ್ಲ್ಯಾಕಿಂತಾಬಿ ಲೈ ಹಾಳ್ ಹೊವ್ನ್ ಜಾತಾ. ಅಧ್ಯಾಯವನ್ನು ನೋಡಿ |