2 ಪೇತ್ರನು 2:6 - ಕನ್ನಡ ಸತ್ಯವೇದವು J.V. (BSI)6 ಆತನು ಸೊದೋಮ್‍ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಮುಂದೆ ಭಕ್ತಿಹೀನರಾಗಿ ಬದುಕುವವರ ಗತಿ ಇಂಥದೆಂದು ಸೂಚಿಸುವದಕ್ಕಾಗಿ ಅವುಗಳಿಗೆ ನಾಶನವನ್ನು ವಿಧಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸೊದೋಮ್ ಮತ್ತು ಗೊಮೋರ ಪಟ್ಟಣಗಳನ್ನು ಕೂಡ ದೇವರು ಬಿಡಲಿಲ್ಲ. ದುರ್ಜನರಿಗೆ ಬರಲಿರುವ ದುರ್ಗತಿ ಏನೆಂದು ಸೂಚಿಸುವುದಕ್ಕಾಗಿ ಆ ಪಟ್ಟಣಗಳನ್ನು ಸುಟ್ಟು ಭಸ್ಮಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದೇವರು ಸೊದೋಮ್, ಗೊಮೋರ ಎಂಬ ಕೆಟ್ಟ ಪಟ್ಟಣಗಳನ್ನು ದಂಡಿಸಿದನು. ಆತನು ಆ ಪಟ್ಟಣಗಳಲ್ಲಿ ಏನೂ ಉಳಿಯದಂತೆ, ಸುಟ್ಟು ಬೂದಿಮಾಡಿದನು. ತನಗೆ ವಿರುದ್ಧವಾಗಿರುವ ಜನರಿಗೆ ಏನಾಗುತ್ತದೆ ಎಂಬುದಕ್ಕೆ ಆತನು ಆ ಪಟ್ಟಣಗಳನ್ನು ನಿದರ್ಶನಗಳನ್ನಾಗಿ ಇಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ದೇವರು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಸೊದೊಮ್ ಅನಿ ಗೊಮೊರ್ ಹ್ಯಾ ಶಾರಾಕ್ನಿ ತೆನಿ ಶಿಕ್ಷಾ ದಿಲ್ಲ್ಯಾನ್ ಅನಿ ಜಾಳ್ವುನ್ ರಕ್ಕಾ ಕರುನ್ ಟಾಕ್ಲ್ಯಾನ್ ದೆವ್ ಅನಿ ದೆವಸ್ಪಾನ್ ನಸ್ತಾನಾ ಚಲ್ತಲ್ಯಾಕ್ನಿ ಹೆ ಎಕ್ ಉದಾರನ್ ಕರುನ್ ಥವ್ಲ್ಯಾನ್. ಅಧ್ಯಾಯವನ್ನು ನೋಡಿ |
ಇಸ್ರಾಯೇಲ್ಯರ ದೇವರಾದ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಹೀಗಿರಲು, ನನ್ನ ಜೀವದಾಣೆ, ಸೊದೋವಿುನ ಗತಿಯೇ ಮೋವಾಬಿಗೂ ಆಗುವದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವದು; ಆ ಪ್ರಾಂತಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವವು; ನನ್ನ ಪ್ರಜೆಯಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು, ಅವು ನನ್ನ ಜನಶೇಷದವರಿಗೆ ಸ್ವಾಸ್ತ್ಯವಾಗುವವು.