Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 3:4 - ಕನ್ನಡ ಸತ್ಯವೇದವು J.V. (BSI)

4 ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ನಮ್ಮ ಪಿತೃಗಳು ನಿದ್ರೆ ಹೊಂದಿದ ದಿನ ಮೊದಲುಗೊಂಡು ಸಮಸ್ತವೂ ಲೋಕಾದಿಯಿಂದಿದ್ದ ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ನಮ್ಮ ಪೂರ್ವಿಕರು ನಿದ್ರೆಹೊಂದಿದ ನಂತರದಿಂದ; ಸಮಸ್ತವೂ ಸೃಷ್ಟಿಯ ಆರಂಭದಲ್ಲಿ ಇದ್ದ ಹಾಗೆಯೇ ಇದೆಯಲ್ಲಾ?” ಎಂದು ಪರಿಹಾಸ್ಯಮಾಡುತ್ತಾ ಕೇಳುವರೆಂಬುದಾಗಿ ನೀವು ಮೊದಲು ತಿಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇವರು ತಮ್ಮ ದುರಾಶೆಗಳಿಗೆ ಬಲಿಯಾಗಿ, “ಆತನು ಮರಳಿ ಬರುವನು ಎಂಬ ವಾಗ್ದಾನವು ಏನಾಯಿತು? ನಮ್ಮ ಪಿತೃಗಳು ಮೃತರಾದರು; ಅಂದಿನಿಂದ ಸಮಸ್ತವೂ ಲೋಕಾದಿಯಿಂದಲೂ ಇದ್ದ ಹಾಗೆಯೇ ಇದೆಯಲ್ಲಾ,” ಎಂದು ಅಪಹಾಸ್ಯಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ಜನರು, “ಆತನು ಮತ್ತೆ ಬರುವುದಾಗಿ ವಾಗ್ದಾನ ಮಾಡಿದ್ದನು. ಆತನು ಎಲ್ಲಿದ್ದಾನೆ? ನಮ್ಮ ಪಿತೃಗಳು ಸತ್ತುಹೋದರು. ಆದರೆ ಈ ಲೋಕವು ಆದಿಯಿಂದಲೂ ಇದ್ದ ರೀತಿಯಲ್ಲಿಯೇ ಇದೆ” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ?” ಎಂದು ಕುಚೋದ್ಯದಿಂದ ಕೇಳುವರೆಂದು ನೀವು ಮೊದಲು ತಿಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅನಿ “ತೆನಿ ಅನಿ ಪರ್ತುನ್ ಯೆತಾ ಮನುನ್ ಗೊಸ್ಟ್ ದಿಲ್ಯಾನ್, ತೊ ಅತ್ತಾ ಖೈಯ್ ಹಾಯ್ ? ಅಮ್ಚಿ ವಾಡ್ ವಡ್ಲಾ ಮರುನ್ ಗೆಲಿ, ಖರೆ ಹ್ಯೊ ಜಗ್ ಅದ್ದಿಸ್ನಾ ಹೊತ್ತ್ಯಾ ಸಾರ್ಕೆಚ್ ಹಾಯ್” ಮನುನ್ ತಿ ಲೊಕಾ ಸಾಂಗ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 3:4
20 ತಿಳಿವುಗಳ ಹೋಲಿಕೆ  

ಆಹಾ, ಜನರು ನನಗೆ - ಯೆಹೋವನ ಮಾತೆಲ್ಲಿ? ಅದು ಈಗಲೇ ನೆರವೇರಲಿ ಎಂದು ಹೇಳುತ್ತಾರೆ.


ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ; ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು, ಅವರೇ ಆತನಿಗೆ ಇಷ್ಟ, ನ್ಯಾಯತೀರಿಸುವ ದೇವರು ಎಲ್ಲಿಯೋ ಎಂದು ನೀವು ಅಂದುಕೊಳ್ಳುವದರಲ್ಲಿಯೇ.


ಆದರೆ ಆ ಆಳು - ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಅಂತ ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವದಕ್ಕೂ ತಿಂದು ಕುಡಿದು ಅಮಲೇರುವದಕ್ಕೂ ತೊಡಗಿದರೆ


ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೆ ನಡೆಯದಿರುವ ಕಾರಣ ಅಪರಾಧಮಾಡಬೇಕೆಂಬ ಯೋಚನೆಯು ನರಜನ್ಮದವರ ಹೃದಯದಲ್ಲಿ ತುಂಬಿ ತುಳುಕುವದು.


ಆದರೆ ಆ ಕೆಟ್ಟ ಆಳು - ನನ್ನ ಯಜಮಾನನು ತಡಮಾಡುತ್ತಾನೆ ಅಂತ ತನ್ನ ಮನಸ್ಸಿನಲ್ಲಿ ಅಂದುಕೊಂಡು


ನಮ್ಮ ಕರ್ತನಾದ ಯೇಸು ಪ್ರತ್ಯಕ್ಷನಾಗುವಾಗ ಆತನ ಮುಂದೆ ನಮ್ಮ ಭರವಸವೂ ನಮ್ಮ ಸಂತೋಷವೂ ನಾವು ಹೊಗಳಿಕೊಳ್ಳುವ ಜಯಮಾಲೆಯೂ ಯಾರು? ನೀವೇ ಅಲ್ಲವೇ.


ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣು ಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ - ನೀವೆದ್ದು ಈ ಸ್ಥಳವನ್ನು ಬಿಟ್ಟು ಹೋಗಿರಿ, ಯೆಹೋವನು ಈ ಊರನ್ನು ನಾಶಮಾಡುತ್ತಾನೆ ಎಂದು ಹೇಳಿದನು. ಆದರೆ ಅವನು ಅವರಿಗೆ ಗೇಲಿಮಾಡುವವನಾಗಿ ಕಾಣಿಸಿದನು.


ಇದ್ದದೇ ಇರುವದು, ನಡೆದದ್ದೇ ನಡೆಯುವದು, ಲೋಕದಲ್ಲಿ ಹೊಸದೇನೂ ಇಲ್ಲ.


ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ - ಆಮೆನ್ ಎಂಬಾತನು ಅಂದರೆ ನಂಬತಕ್ಕ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲನೂ ಆಗಿರುವಾತನು ಹೇಳುವದೇನಂದರೆ -


ಇವರು - ಮನೆಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಈ ಪಟ್ಟಣವು ಹಂಡೆ, ನಾವು ಮಾಂಸ ಎಂದು ಹೇಳುತ್ತಾರೆ.


ದೇವರಾದರೋ ಸೃಷ್ಟಿಯ ಮೊದಲಿನಿಂದಲೇ ಮನುಷ್ಯರನ್ನು ಗಂಡುಹೆಣ್ಣಾಗಿ ನಿರ್ಮಿಸಿದನೆಂತಲೂ


ಹೆಣ ಬಿದ್ದಲ್ಲಿ ಹದ್ದುಗಳು ಕೂಡುವವು.


ಮನುಷ್ಯಕುಮಾರನು ತನ್ನ ತಂದೆಯ ಪ್ರಭಾವದೊಡನೆ ತನ್ನ ದೂತರ ಸಮೇತವಾಗಿ ಬರುವನು; ಆವಾಗ ಆತನು ಒಬ್ಬೊಬ್ಬನಿಗೆ ಅವನವನ ನಡತೆಗೆ ತಕ್ಕ ಫಲವನ್ನು ಕೊಡುವನು.


ನಿಮಗೆ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತವರೊಳಗೆ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವ ತನಕ ಮರಣಹೊಂದುವದಿಲ್ಲ ಅಂದನು.


ಯೇಸುಸ್ವಾವಿುಯೇ, ನನ್ನಾತ್ಮವನ್ನು ಸೇರಿಸಿಕೋ ಎಂದು ಪ್ರಾರ್ಥಿಸಿ ಮೊಣಕಾಲೂರಿ - ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು