Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಯೋಹಾನನು 1:1 - ಕನ್ನಡ ಸತ್ಯವೇದವು J.V. (BSI)

1-2 ಸಭೆಯ ಹಿರಿಯನು ದೇವರಾದುಕೊಂಡವರಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಬರೆಯುವದೇನಂದರೆ - ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ಸದಾಕಾಲವೂ ನಮ್ಮೊಂದಿಗಿರುವಂಥ ಸತ್ಯದ ನಿವಿುತ್ತ ನಾನು ನಿಮ್ಮನ್ನು ಸತ್ಯವಾಗಿ ಪ್ರೀತಿಸುತ್ತೇನೆ; ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಭೆಯ ಹಿರಿಯನಾದ ನಾನು, ದೇವರು ಆಯ್ಕೆ ಮಾಡಿರುವ ಅಮ್ಮನವರಿಗೂ, ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದೇವರಿಂದ ಆಯ್ಕೆಯಾದ ಶ್ರೀಮಾತೆಗೂ ಆಕೆಯ ಮಕ್ಕಳಿಗೂ - ಸಭಾಹಿರಿಯನಾದ ನಾನು ಬರೆಯುವ ಪತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಭಾಹಿರಿಯನು, ದೇವರಿಂದ ಆಯ್ಕೆಯಾದ ಅಮ್ಮನವರಿಗೆ ಮತ್ತು ಆಕೆಯ ಮಕ್ಕಳಿಗೆ ಬರೆಯುವ ಪತ್ರ. ನಾನು ನಿಮ್ಮೆಲ್ಲರನ್ನು ಸತ್ಯದಲ್ಲಿ ಪ್ರೀತಿಸುತ್ತೇನೆ. ಸತ್ಯವನ್ನು ತಿಳಿದಿರುವ ಜನರೆಲ್ಲರೂ ಸಹ ನಿಮ್ಮನ್ನು ಪ್ರೀತಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸಭಾಹಿರಿಯನಾದ ನಾನು, ನಮ್ಮಲ್ಲಿ ವಾಸಿಸುವ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿ ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜಾನ್ತ್ಯಾನ್, ಪ್ರಿತಿಚ್ಯಾ ಬಾಯಿಕ್ ಅನಿ ತಿಚ್ಯಾ ಪೊರಾಕ್ನಿ ಲಿವ್ತಲಿ ಚಿಟ್, ಮಿಯಾ ತುಮ್ಚೊ ಪ್ರೆಮ್ ಕರ್ತಾ ಅನಿ ಮಿಯಾ ಎಕ್ಲೊಚ್ ನ್ಹಯ್, ಖರೆಪಾನ್ ಗೊತ್ತ್ ಹೊತ್ತಿ, ಎಚುನ್ ಹೊಲ್ಲೆ ಸಗ್ಳೆ ಜಾನಾ ತುಮ್ಚೊ ಪ್ರೆಮ್ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಯೋಹಾನನು 1:1
25 ತಿಳಿವುಗಳ ಹೋಲಿಕೆ  

ಪ್ರಿಯರಾದ ಮಕ್ಕಳೇ, ನಾವು ಬರೀಮಾತಿನಿಂದಾಗಲಿ ಬಾಯುಪಚಾರದಿಂದಾಗಲಿ ಪ್ರೀತಿಸುವವರಾಗಿರಬಾರದು; ನಿಮ್ಮ ಪ್ರೀತಿಯು ಕೃತ್ಯದಲ್ಲಿಯೂ ಸತ್ಯದಲ್ಲಿಯೂ ತೋರಬೇಕು.


ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬದು ಆತನ ಚಿತ್ತವಾಗಿದೆ.


ಮತ್ತು ಸತ್ಯವು ನಿಮ್ಮನ್ನು ಬಿಡುಗಡೆಮಾಡುವದು ಎಂದು ಹೇಳಿದನು.


ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿಮಗೆ ಬರೆಯದೆ ಮೊದಲಿನಿಂದಲೂ ನಮಗೆ ಬಂದ ಆಜ್ಞೆಯನ್ನು ಬರೆಯುವವನಾಗಿ - ನಾವು ಒಬ್ಬರನ್ನೊಬ್ಬರು ಪ್ರೀತಿಸುವವರಾಗಿರೋಣ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.


ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ ಇನ್ನು ಮುಂದೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಎಚ್ಚರಿಸಿ ಹೇಳುವದೇನಂದರೆ -


ಆಗ ನಿಮ್ಮ ಸಂತೋಷವು ಪರಿಪೂರ್ಣವಾಗುವದು. ದೇವರಾದುಕೊಂಡವಳಾದ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ.


ನೀವು ಸತ್ಯವನ್ನು ತಿಳಿಯದವರೆಂಬ ಭಾವನೆಯಿಂದಲ್ಲ, ನೀವು ಅದನ್ನು ತಿಳಿದಿರುವದರಿಂದಲೂ ಯಾವ ಸುಳ್ಳೂ ಸತ್ಯದಿಂದ ಹುಟ್ಟಿ ಬರುವದಿಲ್ಲವೆಂಬದನ್ನು ನೀವು ತಿಳಿದವರಾಗಿರುವದರಿಂದಲೂ ನಿಮಗೆ ಬರೆದೆನು.


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ ದೇವರಿಗೆ ವಿಧೇಯರಾಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗುವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನುಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಯಾಕಂದರೆ ಸತ್ಯದ ಪರಿಜ್ಞಾನವನ್ನು ನಾವು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಇರುವದಿಲ್ಲ;


ಚೆನ್ನಾಗಿ ಓಡುತ್ತಾ ಇದ್ದಿರಿ; ನೀವು ಸತ್ಯವನ್ನು ಅನುವರ್ತಿಸದಂತೆ ಯಾರು ನಿಮ್ಮನ್ನು ತಡೆದರು?


ಎಲೈ ಬುದ್ಧಿಯಿಲ್ಲದ ಗಲಾತ್ಯದವರೇ, ಯಾರು ನಿಮ್ಮನ್ನು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ವರ್ಣಿಸಲ್ಪಟ್ಟನಲ್ಲವೇ.


ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯುವದಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ - ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ - ನೀವು ಯೆಹೂದ್ಯರ ಪದ್ಧತಿಗಳನ್ನು ಅನುಸರಿಸಬೇಕೆಂದು ನೀನು ಬಲಾತ್ಕಾರ ಮಾಡುವದು ಹೇಗೆ?


ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆ ಹೊತ್ತಾದರೂ ಸಮ್ಮತಿಪಡಲಿಲ್ಲ.


ನಾನು ಬುಡದಿಂದ ಎಲ್ಲವನ್ನೂ ಚೆನ್ನಾಗಿ ವಿಚಾರಿಸಿದವನಾದಕಾರಣ ಅವುಗಳನ್ನು ನಿನಗೆ ಕ್ರಮವಾಗಿ ಬರೆಯುವದು ಒಳ್ಳೇದೆಂದು ನನಗೂ ತೋಚಿತು.


ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.


ಕರ್ತನ ಭಕ್ತರಲ್ಲಿ ಪ್ರಸಿದ್ಧನಾದ ರೂಫನಿಗೂ ನನಗೆ ತಾಯಿಯಂತಿರುವ ಅವನ ತಾಯಿಗೂ ವಂದನೆಗಳು.


ದೇವರು ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬೆಲಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ.


ಸಭೆಯ ಹಿರಿಯನು ತಾನು ಸತ್ಯವಾಗಿ ಪ್ರೀತಿಸುವ ಪ್ರಿಯ ಗಾಯನಿಗೆ ಬರೆಯುವದೇನಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು