Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:13 - ಕನ್ನಡ ಸತ್ಯವೇದವು J.V. (BSI)

13 ದಾವೀದನು ವರ್ತಮಾನ ತಂದ ಪ್ರಾಯಸ್ಥನನ್ನು - ನೀನೆಲ್ಲಿಯವನು ಎಂದು ಕೇಳಿದ್ದಕ್ಕೆ ಅವನು - ನಾನು ಇಸ್ರಾಯೇಲ್ಯರಲ್ಲಿ ಪ್ರವಾಸಿಯಾಗಿರುವ ಅಮಾಲೇಕ್ಯನ ಮಗನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದಾವೀದನು ವರ್ತಮಾನ ತಂದ ಯುವಕನನ್ನು, “ನೀನು ಎಲ್ಲಿಯವನು?” ಎಂದು ಕೇಳಿದನು. ಅವನು, “ನಾನು ಇಸ್ರಾಯೇಲರಲ್ಲಿ ಪ್ರವಾಸಿಯಾಗಿರುವ ಅಮಾಲೇಕ್ಯನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದಾವೀದನು ವರ್ತಮಾನ ತಂದ ಆ ಯುವಕನನ್ನು, “ನೀನೆಲ್ಲಿಯವನು?” ಎಂದು ಕೇಳಿದ್ದಕ್ಕೆ ಅವನು, “ನಾನು ಇಸ್ರಯೇಲರಲ್ಲಿ ಪ್ರವಾಸಿಯಾಗಿರುವ ಒಬ್ಬ ಅಮಾಲೇಕ್ಯನು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸೌಲನ ಮರಣದ ಬಗ್ಗೆ ತಿಳಿಸಿದ ಯುವಕನಿಗೆ ದಾವೀದನು, “ನೀನು ಎಲ್ಲಿಂದ ಬಂದಿರುವೆ?” ಎಂದು ಕೇಳಿದನು. ಆ ಯುವಕನು, “ನಾನು ಇಸ್ರೇಲ್ ಜನರಲ್ಲಿ ವಾಸಿಸುತ್ತಿರುವ ವಿದೇಶೀಯನ ಮಗ. ನಾನೊಬ್ಬ ಅಮಾಲೇಕ್ಯನು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದಾವೀದನು ತನಗೆ ವರ್ತಮಾನ ತಿಳಿಸಿದ ಯುವಕನನ್ನು, “ನೀನು ಎಲ್ಲಿಯವನು?” ಎಂದು ಕೇಳಿದನು. ಅವನು, “ನಾನು ವಿದೇಶಿಯ ಮಗನಾದ ಅಮಾಲೇಕ್ಯನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:13
3 ತಿಳಿವುಗಳ ಹೋಲಿಕೆ  

ನಾನು - ಇಗೋ, ಬಂದೆನು ಎಂದು ಹೇಳಿ ಹೋದಾಗ ಅವನು - ನೀನಾರು ಎಂದು ಕೇಳಿದ್ದಕ್ಕೆ - ಅಮಾಲೇಕ್ಯನೆಂದು ಉತ್ತರ ಕೊಟ್ಟೆನು.


ಆಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಪಾಟಿಗೆ ಬಂದು ಅಮಾಲೇಕ್ಯರ ಸಮಸ್ತದೇಶವನ್ನೂ ಹಚಚೋನ್‍ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಜಯಿಸಿದರು.


ಆಗ ದಾವೀದನು ಅವನನ್ನು - ನೀನು ಯಾರ ಕಡೆಯವನು? ಎಲ್ಲಿಯವನು ಎಂದು ಕೇಳಲು ಅವನು - ನಾನು ಐಗುಪ್ತ್ಯನು; ಒಬ್ಬ ಅಮಾಲೇಕ್ಯನ ದಾಸನು. ನಾನು ಮೂರು ದಿನಗಳ ಹಿಂದೆ ಅಸ್ವಸ್ಥನಾಗಿ ಮಲಗಿಕೊಂಡದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು