Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:14 - ಕನ್ನಡ ಸತ್ಯವೇದವು J.V. (BSI)

14 ದಾವೀದನು ಅವನಿಗೆ - ನೀನು ಕೈಯೆತ್ತಿ ಯೆಹೋವನ ಅಭಿಷಿಕ್ತನನ್ನು ಕೊಲ್ಲುವದಕ್ಕೆ ಏಕೆ ಭಯಪಡಲಿಲ್ಲ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದಾವೀದನು ಅವನಿಗೆ, “ನೀನು ಕೈಯೆತ್ತಿ ಯೆಹೋವನ ಅಭಿಷಿಕ್ತನನ್ನು ಕೊಲ್ಲುವುದಕ್ಕೆ ಏಕೆ ಭಯಪಡಲಿಲ್ಲ?” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದಾವೀದನು, “ಕೈಯೆತ್ತಿ ಸರ್ವೇಶ್ವರನ ಅಭಿಷಿಕ್ತನನ್ನು ಕೊಲ್ಲುವುದಕ್ಕೆ ನೀನು ಹಿಂಜರಿಯಲಿಲ್ಲ ಏಕೆ?” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದಾವೀದನು ಆ ಯುವಕನಿಗೆ, “ಯೆಹೋವನಿಂದ ಆರಿಸಲ್ಪಟ್ಟ ರಾಜನನ್ನು ಕೊಲ್ಲಲು ನೀನು ಹೆದರಲಿಲ್ಲವೇಕೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ದಾವೀದನು ಅವನಿಗೆ, “ಯೆಹೋವ ದೇವರ ಅಭಿಷಿಕ್ತನನ್ನು ಸಂಹರಿಸಲು ನಿನ್ನ ಕೈ ಎತ್ತುವುದಕ್ಕೆ ಯಾಕೆ ಭಯಪಡಲಿಲ್ಲ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:14
12 ತಿಳಿವುಗಳ ಹೋಲಿಕೆ  

ಆದರೆ ದಾವೀದನು - ಅವನನ್ನು ಕೊಲ್ಲಬೇಡ; ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನಾದರೂ ನಿರಪರಾಧಿಯೆಂದು ಎಣಿಸಲ್ಪಡುವನೋ ಅಂದನು.


ಮುಖ್ಯವಾಗಿ ಬಂಡುತನವನ್ನು ಆಶಿಸಿ ಶರೀರಭಾವಾನುಸಾರ ನಡೆದು ಪ್ರಭುತ್ವ ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಫಾಪರರಾಗಿದ್ದು ಮಹಾಪದವಿಯವರನ್ನು ನಿರ್ಭಯವಾಗಿ ದೂಷಿಸುತ್ತಾರೆ.


ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು, ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು ಎಂದು ಹೇಳಿದನು.


ಆದದರಿಂದ ಸೌಲನು ಬಹುಭೀತನಾಗಿ ತನ್ನ ಆಯುಧವಾಹಕನಿಗೆ - ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು; ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನ್ನನ್ನು ತಿವಿದು ಅಪಕೀರ್ತಿಯನ್ನುಂಟುಮಾಡಾರು ಎಂದು ಹೇಳಲು ಅವನು ಹೆದರಿ ಒಲ್ಲೆನು ಅಂದನು. ಆದದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.


ಅವನು ತನ್ನ ಜನರಿಗೆ - ಅವನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ ನನ್ನ ಒಡೆಯನೂ ಆಗಿದ್ದಾನೆ; ನಾನು ನಿಮ್ಮ ಮಾತು ಕೇಳಿ ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನಗೆ ಅಡ್ಡಿಮಾಡಲಿ ಎಂದು ಹೇಳಿದನು.


ಅವನ ಸಂಗಡ ನಾನು ಗೂಢವಾಗಿ ಅಲ್ಲ, ಪ್ರತ್ಯಕ್ಷದಲ್ಲಿ ಸ್ಪಷ್ಟವಾಗಿಯೇ ಮಾತಾಡುವೆನು. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತಾಡುವದಕ್ಕೆ ಭಯಪಡಬೇಕಾಗಿತ್ತು ಎಂದು ಹೇಳಿ ಕೋಪಗೊಂಡು ಹೋದನು.


ಆ ಆಳು ಮುಂದೆ ಹೋದಾಗ ಸಮುವೇಲನು ಎಣ್ಣೇ ಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ - ಯೆಹೋವನು ತನ್ನ ಸ್ವಾಸ್ತ್ಯದ ಮೇಲೆ ಪ್ರಭುವಾಗಿರುವದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.


ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ ಪೀಡಿಸಿದ್ದೂ ಲಂಚತೆಗೆದುಕೊಂಡು ಕುರುಡನಂತೆ ತೀರ್ಪುಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ ಅನ್ನಲು ಅವರು -


ತನ್ನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನ್ನನ್ನು ತಡೆಯಲಿ. ಈಗ ಅವನ ತಲೆಯ ಬಳಿಯಲ್ಲಿರುವ ಬರ್ಜಿಯನ್ನೂ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ ಎಂದು ಹೇಳಿ


ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.


ಈ ಮಾತುಗಳಿಂದ ಸೌಲನಿಗೆ ವಿರೋಧವಾಗಿ ಏಳದಂತೆ ತನ್ನ ಜನರನ್ನು ತಡೆದನು. ಸೌಲನು ಗವಿಯಿಂದ ಹೊರಗೆ ಬಂದು ಸ್ವಲ್ಪ ಮುಂದೆ ಹೋದ ಮೇಲೆ


ನನ್ನ ತಂದೆಯೇ, ಇಗೋ ನೋಡು; ನನ್ನ ಕೈಯಲ್ಲಿ ನಿನ್ನ ನಿಲುವಂಗಿಯ ತುಂಡು ಇದೆ; ನಾನು ನಿನ್ನನ್ನು ಕೊಲ್ಲದೆ ನಿನ್ನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡೆನಷ್ಟೆ. ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವದಿಲ್ಲ. ನಾನು ನಿನಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೋ. ಆದರೂ ನೀನು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವಿಯಲ್ಲಾ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು