Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:15 - ಕನ್ನಡ ಸತ್ಯವೇದವು J.V. (BSI)

15 ತನ್ನ ಆಳುಗಳಲ್ಲಿ ಒಬ್ಬನನ್ನು ಕರೆದು - ಇವನ ಮೇಲೆ ಬಿದ್ದು ಹೊಡಿ ಎಂದು ಆಜ್ಞಾಪಿಸಲು ಅವನು ಇವನನ್ನು ಹೊಡೆದು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ತನ್ನ ಆಳುಗಳಲ್ಲಿ ಒಬ್ಬನನ್ನು ಕರೆದು, “ಹೋಗಿ ಇವನನ್ನು ಕೊಂದುಹಾಕು” ಎಂದು ಆಜ್ಞಾಪಿಸಲು ಅವನು ಅಮಾಲೇಕ್ಯನನ್ನು ಹೊಡೆದು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ತನ್ನ ಆಳುಗಳಲ್ಲಿ ಒಬ್ಬನನ್ನು ಕರೆದು, “ಇವನನ್ನು ಕೊಲ್ಲು,” ಎಂದು ಆಜ್ಞಾಪಿಸಿದನು. ಅವನು ಇವನನ್ನು ಹೊಡೆದು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15-16 ನಂತರ ದಾವೀದನು ತನ್ನ ಗುಂಪಿನ ಯುವಕನೊಬ್ಬನನ್ನು ಕರೆದು, “ನೀನು ಹೋಗಿ ಆ ಅಮಾಲೇಕ್ಯನನ್ನು ಕೊಲ್ಲು” ಎಂದು ಹೇಳಿದನು. ಇಸ್ರೇಲರ ಯುವಕನು ಆ ಅಮಾಲೇಕ್ಯನನ್ನು ಕೊಂದುಬಿಟ್ಟನು. ದಾವೀದನು ಆ ಅಮಾಲೇಕ್ಯನಿಗೆ, “ನಿನ್ನ ಸಾವಿಗೆ ನೀನೇ ಕಾರಣನು. ನೀನು ನಿನ್ನ ವಿರುದ್ಧವೇ ಸಾಕ್ಷಿ ಹೇಳಿದೆ. ‘ಯೆಹೋವನಿಂದ ಆರಿಸಲ್ಪಟ್ಟ ರಾಜನನ್ನು ನಾನು ಕೊಂದೆ’ ಎಂದು ನೀನೇ ಹೇಳಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯುವಕರಲ್ಲಿ ಒಬ್ಬನನ್ನು ಕರೆದು, “ನೀನು ಇವನನ್ನು ಕೊಲ್ಲು,” ಎಂದನು. ಹಾಗೆಯೇ ಅವನು ಅವನನ್ನು ಹೊಡೆದು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:15
8 ತಿಳಿವುಗಳ ಹೋಲಿಕೆ  

ಅಧರ್ಮಿಯ ಸಂಬಳವು ಜೊಳ್ಳು; ಧರ್ಮವನ್ನು ಬಿತ್ತುವವನ ಲಾಭವು ಗಟ್ಟಿ.


ಯುಕ್ತಿವಂತರ ಕೈಯಿಂದ ಏನೂ ಆಗದಂತೆ ಅವರ ಉಪಾಯಗಳನ್ನು ಭಂಗಪಡಿಸುತ್ತಾನೆ.


ಯೆಹೋಯಾದಾವನ ಮಗನಾದ ಬೆನಾಯನಿಗೆ ಅವನನ್ನು ಸಂಹರಿಸೆಂದು ಆಜ್ಞಾಪಿಸಲು ಇವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸ್ಥಿರವಾಯಿತು.


ಯೆಹೋಯಾದಾವನ ಮಗನಾದ ಬೆನಾಯನು ಹೋಗಿ ಯೋವಾಬನನ್ನು ಕೊಂದನು. ಅವನ ಶವಕ್ಕೆ ಅರಣ್ಯದಲ್ಲಿರುವ ಅವನ ಮನೆಯ ನಿವೇಶನದಲ್ಲಿ ಸಮಾಧಿಯಾಯಿತು.


ಯೆಹೋಯಾದಾವನ ಮಗನಾದ ಬೆನಾಯನಿಗೆ ಆಜ್ಞಾಪಿಸಿದದರಿಂದ ಅವನು ಹೋಗಿ ಅವನನ್ನು ಹೊಡೆದು ಕೊಂದುಹಾಕಿದನು.


ತನ್ನ ಹಿರೀ ಮಗನಾದ ಎತೆರನಿಗೆ - ನೀನೆದ್ದು ಇವರನ್ನು ಕೊಂದುಹಾಕು ಅಂದನು. ಆದರೆ ಅವನು ಇನ್ನೂ ಹುಡುಗನಾಗಿದ್ದದರಿಂದ ಭಯಪಟ್ಟು ಕತ್ತಿಯನ್ನು ಹಿರಿಯಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು