Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:18 - ಕನ್ನಡ ಸತ್ಯವೇದವು J.V. (BSI)

18 ಅದನ್ನು ಯೆಹೂದ್ಯರಿಗೆ ಕಲಿಸಬೇಕೆಂದು ಆಜ್ಞಾಪಿಸಿದನು. ಈ ಗೀತವು ಯಾಷಾರ್ ಗ್ರಂಥದಲ್ಲಿ ಬರೆದಿರುತ್ತದೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬಿಲ್ಲೆ ಎಂಬ ಈ ಗೀತೆಯನ್ನು ಯೆಹೂದ್ಯರಿಗೆ ಕಲಿಸಬೇಕೆಂದು ಆಜ್ಞಾಪಿಸಿದನು. ಆ ಗೀತವು ಯಾಷಾರ್ ಗ್ರಂಥದಲ್ಲಿ ಬರೆದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ‘ಬಿಲ್ಲೆ’ ಎಂಬ ಈ ಗೀತೆಯನ್ನು ಯೆಹೂದ್ಯರಿಗೆ ಕಲಿಸಬೇಕೆಂದು ಆಜ್ಞಾಪಿಸಿದನು. ಇದರ ಉಲ್ಲೇಖ ‘ಯಾಷಾರ್’ ಎಂಬ ಗ್ರಂಥದಲ್ಲಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಈ ಶೋಕಗೀತೆಯನ್ನು ಯೆಹೂದದ ಜನರಿಗೆ ಕಲಿಸಬೇಕೆಂದು ಅವನು ತನ್ನ ಜನರಿಗೆ ಹೇಳಿದನು. ಈ ಗೀತೆಗೆ “ಬಿಲ್ಲು” ಎಂದು ಹೆಸರು. ಈ ಗೀತೆಯನ್ನು ಯಾಷಾರ್ ಗ್ರಂಥದಲ್ಲಿ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದಲ್ಲದೆ ದಾವೀದನು ಬಿಲ್ಲೆ ಎಂಬ ಗೀತೆಯನ್ನು ಯೆಹೂದ್ಯರಿಗೆ ಕಲಿಸಬೇಕೆಂದು ಹೇಳಿದನು. ಇದು ಯಾಷಾರನ ಗ್ರಂಥದಲ್ಲಿ ಬರೆಯಲಾಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:18
4 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವವರೆಗೆ ಸೂರ್ಯಚಂದ್ರರು ಹಾಗೆಯೇ ನಿಂತರು. ಈ ಮಾತು ಯಾಷಾರ್‍‍‍ಗ್ರಂಥದಲ್ಲಿ ಬರೆದದೆಯಲ್ಲಾ! ಹೀಗೆ ಸೂರ್ಯನು ಮುಣುಗಲಿಕ್ಕೆ ಆತುರಪಡದೆ ಹೆಚ್ಚುಕಡಿಮೆ ಒಂದು ದಿವಸ ಪೂರ್ತಿ ಆಕಾಶ ಮಧ್ಯದಲ್ಲಿಯೇ ನಿಂತನು.


ಆ ಸಂಗತಿಗಳು ಯಾವವಂದರೆ - ನೀವು ಹೋರೇಬಿನಲ್ಲಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದಾಗ ಆತನು ನನಗೆ - ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕೂಡಿಸು; ಅವರು ತಾವು ಭೂವಿುಯ ಮೇಲಿರುವ ದಿನಗಳಲ್ಲೆಲ್ಲಾ ನನಗೆ ಭಯಭಕ್ತಿಯಿಂದಿರುವದಕ್ಕೆ ಕಲಿತುಕೊಂಡು ತಮ್ಮ ಮಕ್ಕಳಿಗೂ ಕಲಿಸಿಕೊಡುವಂತೆ ಅವರಿಗೆ ಆಜ್ಞೆಗಳನ್ನು ತಿಳಿಸುತ್ತೇನೆ ಎಂದು ಹೇಳಿದ ದಿನದ ವಿಷಯಗಳೇ.


ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು; ನಿನ್ನ ಸಹೋದರರು ನಿನಗೇ ಎರಗುವರು.


ಇಸ್ರಾಯೇಲ್ಯರೇ, ನಿಮ್ಮ ವೈಭವವು ನಿಮ್ಮ ಗುಡ್ಡಗಳಲ್ಲಿ ಮಣ್ಣುಪಾಲಾಗಿ ಹೋಯಿತು. ಅಯ್ಯೋ, ಪರಾಕ್ರಮಶಾಲಿಗಳೇ, ಹೇಗೆ ಹತರಾದಿರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು