Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:3 - ಕನ್ನಡ ಸತ್ಯವೇದವು J.V. (BSI)

3 ದಾವೀದನು ಅವನನ್ನು - ನೀನು ಎಲ್ಲಿಂದ ಬಂದಿ ಎಂದು ಕೇಳಲು ಅವನು - ನಾನು ಇಸ್ರಾಯೇಲ್ಯರ ಪಾಳೆಯದಿಂದ ತಪ್ಪಿಸಿಕೊಂಡು ಬಂದೆನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದಾವೀದನು ಅವನನ್ನು, “ನೀನು ಎಲ್ಲಿಂದ ಬಂದಿ” ಎಂದು ಕೇಳಲು ಅವನು, “ನಾನು ಇಸ್ರಾಯೇಲರ ಠಾಣ್ಯದಿಂದ ತಪ್ಪಿಸಿಕೊಂಡು ಬಂದೆನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದಾವೀದನು ಅವನನ್ನು ನೋಡಿ, “ನೀನು ಎಲ್ಲಿಂದ ಬಂದೆ?” ಎಂದು ಕೇಳಿದನು. ಅವನು, “ನಾನು ಇಸ್ರಯೇಲರ ಪಾಳೆಯದಿಂದ ತಪ್ಪಿಸಿಕೊಂಡು ಬಂದೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದಾವೀದನು ಅವನಿಗೆ, “ನೀನು ಎಲ್ಲಿಂದ ಬಂದೆ?” ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, “ನಾನು ಇಸ್ರೇಲರ ಪಾಳೆಯದಿಂದ ತಪ್ಪಿಸಿಕೊಂಡು ಬಂದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದಾವೀದನು ಅವನಿಗೆ, “ನೀನು ಎಲ್ಲಿಂದ ಬಂದೆ?” ಎಂದನು. ಅದಕ್ಕವನು, “ಇಸ್ರಾಯೇಲಿನ ಪಾಳೆಯದಿಂದ ತಪ್ಪಿಸಿಕೊಂಡು ಬಂದೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:3
5 ತಿಳಿವುಗಳ ಹೋಲಿಕೆ  

ಅವರು ಹೋದನಂತರ ಇವನು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು - ಗೇಹಜಿಯೇ, ಎಲ್ಲಿಗೆ ಹೋಗಿ ಬಂದಿ ಎಂದು ಕೇಳಿದನು. ಅದಕ್ಕೆ ಅವನು - ನಿನ್ನ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ ಎಂದು ಉತ್ತರಕೊಟ್ಟನು.


ಮೂರನೆಯ ದಿನ ಸೌಲನ ಪಾಳೆಯದಿಂದ ಒಬ್ಬ ಮನುಷ್ಯನು ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೆ ಬಾಗಿ ನಮಸ್ಕರಿಸಿದನು. ಅವನು ವಸ್ತ್ರಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು.


ಆಗ ದಾವೀದನು - ದಯವಿಟ್ಟು ಕಾರ್ಯವೇನಾಯಿತೆಂದು ತಿಳಿಸು ಅನ್ನಲು ಆ ಮನುಷ್ಯನು - ಇಸ್ರಾಯೇಲ್ಯರು ರಣರಂಗದಿಂದ ಓಡಿಹೋದರು. ಅನೇಕರು ಮಡಿದರು. ಸೌಲನೂ ಅವನ ಮಗನಾದ ಯೋನಾತಾನನೂ ಮೃತಿ ಹೊಂದಿದರು ಎಂದು ತಿಳಿಸಿದನು.


ಆಗ ದಾವೀದನು ಅವನನ್ನು - ನೀನು ಯಾರ ಕಡೆಯವನು? ಎಲ್ಲಿಯವನು ಎಂದು ಕೇಳಲು ಅವನು - ನಾನು ಐಗುಪ್ತ್ಯನು; ಒಬ್ಬ ಅಮಾಲೇಕ್ಯನ ದಾಸನು. ನಾನು ಮೂರು ದಿನಗಳ ಹಿಂದೆ ಅಸ್ವಸ್ಥನಾಗಿ ಮಲಗಿಕೊಂಡದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು