Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 10:14 - ಕನ್ನಡ ಸತ್ಯವೇದವು J.V. (BSI)

14 ಇವರು ಓಡಿಹೋಗುವದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಹೊಕ್ಕರು. ಯೋವಾಬನು ಅಮ್ಮೋನಿಯರೊಡನೆ ಯುದ್ಧಮಾಡುವದನ್ನು ಬಿಟ್ಟು ಯೆರೂಸಲೇವಿುಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯ ಎದುರಿನಿಂದ ಓಡಿಹೋಗಿ, ಪಟ್ಟಣವನ್ನು ಪ್ರವೇಶಿಸಿದರು. ಯೋವಾಬನು ಅಮ್ಮೋನಿಯರೊಡನೆ ಯುದ್ಧ ಮಾಡುವುದನ್ನು ಬಿಟ್ಟು ಯೆರೂಸಲೇಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯನ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಹೊಕ್ಕರು. ಯೋವಾಬನು ಅಮ್ಮೋನಿಯರೊಡನೆ ಯುದ್ಧಮಾಡುವುದನ್ನು ಬಿಟ್ಟು ಜೆರುಸಲೇಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅರಾಮ್ಯರು ಓಡಿಹೋಗುತ್ತಿರುವುದನ್ನು ನೋಡಿದ ಅಮ್ಮೋನಿಯರು ಅಬೀಷೈಯನ್ನು ಬಿಟ್ಟು ಓಡಿಹೋದರು. ಅವರು ತಮ್ಮ ನಗರಕ್ಕೆ ಹಿಂದಿರುಗಿದರು. ಯೋವಾಬನು ಯುದ್ಧರಂಗದಿಂದ ಹಿಂದಿರುಗಿ ಜೆರುಸಲೇಮಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನಿಯರು ಕಂಡಾಗ, ಅವರು ಅಬೀಷೈಯನ ಎದುರಿನಿಂದ ಓಡಿಹೋಗಿ ಪಟ್ಟಣದೊಳಗೆ ಅಡಗಿಕೊಂಡರು. ಆಗ ಯೋವಾಬನು ಅಮ್ಮೋನಿಯರೊಡನೆ ಯುದ್ಧಮಾಡುವುದನ್ನು ಬಿಟ್ಟು, ಯೆರೂಸಲೇಮಿಗೆ ತಿರುಗಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 10:14
7 ತಿಳಿವುಗಳ ಹೋಲಿಕೆ  

ಪಡಕೊಂಡ ಬೆಳ್ಳಿಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.


ಅರಾಮ್ಯರಿಗೆ ತಮ್ಮ ಸೈನ್ಯವು ಇಸ್ರಾಯೇಲ್ಯರಿಂದ ಅಪಜಯಹೊಂದಿತೆಂದು ಗೊತ್ತಾದಾಗ ಅವರೆಲ್ಲರೂ ಕೂಡಿಬಂದರು.


ಮರುವರುಷ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ದಾವೀದನು ಯೋವಾಬನನ್ನೂ ತನ್ನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತಗಳನ್ನು ಹಾಳುಮಾಡಿ ರಬ್ಬಕ್ಕೆ ಮುತ್ತಿಗೆಹಾಕಿದರು. ದಾವೀದನು ಯೆರೂಸಲೇವಿುನಲ್ಲಿಯೇ ಇದ್ದನು.


ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಮಂದಿಯನ್ನು ಕೊಂದದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.


ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದದರಿಂದ ನೀನು ನನ್ನ ಸ್ವಂತ ಆಳುಗಳನ್ನು ತೆಗೆದುಕೊಂಡು ಹೋಗಿ ಅವನನ್ನು ಹಿಂದಟ್ಟು; ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡಾನು ಅಂದನು.


ನನ್ನ ಶತ್ರುಗಳನ್ನು ಹಿಂದಟ್ಟಿ ಸಂಹರಿಸುವೆನು; ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವದಿಲ್ಲ.


ಇದಲ್ಲದೆ ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಹೊಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು