Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 10:4 - ಕನ್ನಡ ಸತ್ಯವೇದವು J.V. (BSI)

4 ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ ಗಡ್ಡದ ಅರ್ಧಭಾಗವನ್ನು ಬೋಳಿಸಿ ಅವರ ನಿಲುವಂಗಿಗಳನ್ನು ಕುಂಡಿಯಿಂದ ಕೆಳಗಿನ ಭಾಗವನ್ನೆಲ್ಲಾ ಕತ್ತರಿಸಿ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದರಿಂದ ಹಾನೂನನು ದಾವೀದನ ಪ್ರತಿನಿಧಿಗಳನ್ನು ಹಿಡಿಸಿ, ಗಡ್ಡದ ಅರ್ಧ ಭಾಗವನ್ನು ಬೋಳಿಸಿ, ಸೊಂಟದಿಂದ ಕೆಳಗೆ ಅವರ ನಗ್ನತೆಯು ಕಾಣುವಂತೆ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದುದರಿಂದ ಹಾನೂನನು ದಾವೀದನ ಸೇವಕರನ್ನು ಬಂಧಿಸಿದನು. ಗಡ್ಡದ ಅರ್ಧಭಾಗವನ್ನು ಬೋಳಿಸಿ ಅವರ ನಿಲುವಂಗಿಗಳನ್ನು ಕುಂಡಿಯಿಂದ ಕೆಳಗಿನ ಭಾಗವನ್ನೆಲ್ಲಾ ಕತ್ತರಿಸಿ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದ್ದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ ಅವರ ಗಡ್ಡದ ಅರ್ಧಭಾಗವನ್ನು ಬೋಳಿಸಿದನು. ಅವರ ನಡುವಿನ ಕೆಳಭಾಗವು ಕಾಣುವಂತೆ ಅವರ ಬಟ್ಟೆಗಳನ್ನು ಮಧ್ಯಭಾಗದಲ್ಲಿ ಕತ್ತರಿಸಿದನು, ನಂತರ ಅವರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದ್ದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿದು, ಅವರ ಅರ್ಧ ಗಡ್ಡವನ್ನು ಬೋಳಿಸಿ, ಅವರ ವಸ್ತ್ರಗಳನ್ನು ಬೆನ್ನ ಹಿಂದೆ ಮಧ್ಯದಿಂದ ಸೊಂಟದ ಕೆಳಗಿನವರೆಗೂ ಕತ್ತರಿಸಿ, ಅವರನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 10:4
8 ತಿಳಿವುಗಳ ಹೋಲಿಕೆ  

ಅಶ್ಶೂರದ ಅರಸನು ಐಗುಪ್ತದ ಸೆರೆಯವರನ್ನೂ ಕೂಷಿನ ಕೈದಿಗಳನ್ನೂ ಅವರು ದೊಡ್ಡವರಾಗಲಿ ಚಿಕ್ಕವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.


ಗಡ್ಡ ಬೋಳಿಸಿ ಬಟ್ಟೆಹರಿದು ಗಾಯಮಾಡಿಕೊಂಡಿದ್ದ ಎಂಭತ್ತು ಜನರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಒಂದು ಕೈಯಲ್ಲಿ ಧೂಪನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಹೋಗುತ್ತಿದ್ದರು.


ಬಯಿತ್ ಮತ್ತು ದೀಬೋನ್ ಊರುಗಳವರು ಅಳುವದಕ್ಕಾಗಿ ಪೂಜಾಸ್ಥಾನಗಳಿಗೆ ಹತ್ತಿದ್ದಾರೆ; ನೆಬೋವಿನಲ್ಲಿಯೂ ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ; ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಿದೆ.


ಚಂಡಿಕೆ ಬಿಡಬಾರದು, ಗಡ್ಡವನ್ನು ವಿಕಾರಗೊಳಿಸಬಾರದು.


ಅವರು ಈ ವರ್ತಮಾನವನ್ನು ದಾವೀದನಿಗೆ ಹೇಳಿ ಕಳುಹಿಸಿದಾಗ ಅವನು ಬಹಳವಾಗಿ ಅಪಮಾನಹೊಂದಿದ ಅವರಿಗೆ ಆಳುಗಳ ಮುಖಾಂತರವಾಗಿ - ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿದ್ದು ಅನಂತರ ಬನ್ನಿರಿ ಎಂದು ಹೇಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು