Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:10 - ಕನ್ನಡ ಸತ್ಯವೇದವು J.V. (BSI)

10 ಊರೀಯನು ತನ್ನ ಮನೆಗೆ ಹೋಗಲಿಲ್ಲ ಎಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಇವನು ಅವನಿಗೆ - ನೀನು ಪ್ರಯಾಣಮಾಡಿಕೊಂಡು ಬಂದಿಯಲ್ಲಾ; ಯಾಕೆ ಮನೆಗೆ ಹೋಗಲಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಊರೀಯನು ತನ್ನ ಮನೆಗೆ ಹೋಗಲಿಲ್ಲ ಎಂಬ ವರ್ತಮಾನವು ದಾವೀದನಿಗೆ ತಿಳಿದಾಗ ಅವನು ಊರೀಯನಿಗೆ, “ನೀನು ಪ್ರಯಾಣಮಾಡಿಕೊಂಡು ಬಂದಿಯಲ್ಲಾ, ಯಾಕೆ ಮನೆಗೆ ಹೋಗಲಿಲ್ಲ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಊರೀಯನು ತನ್ನ ಮನೆಗೆ ಹೋಗಲಿಲ್ಲ ಎಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಆಗ ದಾವೀದನು ಊರೀಯನಿಗೆ, “ನೀನು ದೀರ್ಘಪ್ರಯಾಣಮಾಡಿ ಬಂದಿರುವೆಯಲ್ಲವೆ? ಏಕೆ ಮನೆಗೆ ಹೋಗಲಿಲ್ಲ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸೇವಕರು ದಾವೀದನಿಗೆ, “ಊರಿಯನು ಮನೆಗೆ ಹೋಗಲೇ ಇಲ್ಲ” ಎಂದು ಹೇಳಿದರು. ಆಗ ದಾವೀದನು, “ನೀನು ದೀರ್ಘ ಪ್ರಯಾಣದಿಂದ ಬಂದಿರುವೆ. ನೀನು ಏಕೆ ಮನೆಗೆ ಹೋಗಲಿಲ್ಲ?” ಎಂದು ಊರೀಯನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಊರೀಯನು ತನ್ನ ಮನೆಗೆ ಹೋಗಲಿಲ್ಲವೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ದಾವೀದನು ಊರೀಯನಿಗೆ, “ನೀನು ಪ್ರಯಾಣದಿಂದ ಬರಲಿಲ್ಲವೋ? ಏಕೆ ನಿನ್ನ ಮನೆಗೆ ಹೋಗಲಿಲ್ಲ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:10
3 ತಿಳಿವುಗಳ ಹೋಲಿಕೆ  

ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಸನ ಸೇವಕರೊಡನೆ ಅರಮನೆಯ ಬಾಗಲಲ್ಲೇ ಮಲಗಿಕೊಂಡನು.


ಅದಕ್ಕೆ ಊರೀಯನು - ಒಡಂಬಡಿಕೆಯ ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ ಅವನ ಸೇವಕರೂ ಬೈಲಿನಲ್ಲಿ ಪಾಳೆಯ ಮಾಡಿಕೊಂಡಿದ್ದಾರೆ. ಹೀಗಿರುವಲ್ಲಿ ನಾನು ನನ್ನ ಮನೆಗೆ ಹೋಗಿ ಉಂಡು ಕುಡಿದು ಹೆಂಡತಿಯೊಡನೆ ಮಲಗಿಕೊಳ್ಳುವದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದನ್ನು ಮಾಡುವದೇ ಇಲ್ಲ ಎಂದು ಉತ್ತರಕೊಟ್ಟನು.


ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಇವನ ಹತ್ತಿರ ಬಂದು ಹೇಳಿದ್ದೇನಂದರೆ - ಒಂದು ಊರಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಇನ್ನೊಬ್ಬನು ಬಡವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು