Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:11 - ಕನ್ನಡ ಸತ್ಯವೇದವು J.V. (BSI)

11 ಅದಕ್ಕೆ ಊರೀಯನು - ಒಡಂಬಡಿಕೆಯ ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ ಅವನ ಸೇವಕರೂ ಬೈಲಿನಲ್ಲಿ ಪಾಳೆಯ ಮಾಡಿಕೊಂಡಿದ್ದಾರೆ. ಹೀಗಿರುವಲ್ಲಿ ನಾನು ನನ್ನ ಮನೆಗೆ ಹೋಗಿ ಉಂಡು ಕುಡಿದು ಹೆಂಡತಿಯೊಡನೆ ಮಲಗಿಕೊಳ್ಳುವದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದನ್ನು ಮಾಡುವದೇ ಇಲ್ಲ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷವೂ, ಇಸ್ರಾಯೇಲ್ಯರೂ, ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ, ಅವನ ಸೇವಕರೂ ಬಯಲಿನಲ್ಲಿ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಾಗ ನಾನು ಮಾತ್ರ ನನ್ನ ಮನೆಗೆ ಹೋಗಿ ಊಟಮಾಡಿ, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದ್ದನ್ನು ಮಾಡುವುದೇ ಇಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷ, ಇಸ್ರಯೇಲರು ಹಾಗು ಯೆಹೂದ್ಯರು ಗುಡಾರಗಳಲ್ಲೇ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ ಅವನ ಸೇವಕರೂ ಬಯಲಿನಲ್ಲೇ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಲ್ಲಿ, ನಾನು ನನ್ನ ಮನೆಗೆ ಹೋಗಿ ಉಂಡು, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿಮ್ಮಾಣೆ, ನಿಮ್ಮ ಜೀವದ ಆಣೆ, ನಾನು ಇಂಥದನ್ನು ಎಂದಿಗೂ ಮಾಡಲಾರೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಊರೀಯನು ದಾವೀದನಿಗೆ, “ಪವಿತ್ರ ಪೆಟ್ಟಿಗೆಯೂ ಇಸ್ರೇಲಿನ ಮತ್ತು ಯೆಹೂದದ ಸೈನಿಕರೂ ಗುಡಾರಗಳಲ್ಲಿ ನೆಲೆಸಿದ್ದಾರೆ. ನನ್ನ ಒಡೆಯನಾದ ಯೋವಾಬನು ಮತ್ತು ನನ್ನ ರಾಜನ ಸೇವಕರು ಹೊಲದಲ್ಲಿ ಪಾಳೆಯ ಮಾಡಿಕೊಂಡಿದ್ದಾರೆ. ಆದ್ದರಿಂದ ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕೂ ಪತ್ನಿಯ ಜೊತೆಯಲ್ಲಿ ಮಲಗುವುದಕ್ಕೂ ನಾನು ಮನೆಗೆ ಹೋಗುವುದು ಸರಿಯಲ್ಲ. ನಿನ್ನಾಣೆ, ನಿನ್ನ ಜೀವದಾಣೆ, ನಾನು ಇಂಥದನ್ನು ಮಾಡುವುದೇ ಇಲ್ಲ.” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಊರೀಯನು ದಾವೀದನಿಗೆ, “ಮಂಜೂಷವೂ, ಇಸ್ರಾಯೇಲಿನವರೂ, ಯೆಹೂದದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ; ನನ್ನ ಒಡೆಯನಾದ ಯೋವಾಬನೂ, ನನ್ನ ಒಡೆಯನ ಸೇವಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವುದಕ್ಕೂ, ಕುಡಿಯುವುದಕ್ಕೂ, ನನ್ನ ಹೆಂಡತಿಯ ಸಂಗಡ ಮಲಗುವುದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:11
19 ತಿಳಿವುಗಳ ಹೋಲಿಕೆ  

ಒಂದು ದಿವಸ ಪ್ರವಾದಿಯಾದ ನಾತಾನನಿಗೆ - ನೋಡು, ನಾನು ದೇವದಾರುಮರದ ಮನೆಯಲ್ಲಿ ವಾಸವಾಗಿದ್ದೇನೆ; ದೇವರ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ ಎಂದು ಹೇಳಿದನು.


ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದದರಿಂದ ನೀನು ನನ್ನ ಸ್ವಂತ ಆಳುಗಳನ್ನು ತೆಗೆದುಕೊಂಡು ಹೋಗಿ ಅವನನ್ನು ಹಿಂದಟ್ಟು; ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡಾನು ಅಂದನು.


ನಾನು ಇಸ್ರಾಯೇಲ್ಯರನ್ನು ಐಗುಪ್ತ ದೇಶದಿಂದ ಬರಮಾಡಿದಂದಿನಿಂದ ಇಂದಿನವರೆಗೂ ಮನೆಯಲ್ಲಿ ವಾಸಮಾಡಲಿಲ್ಲ. ಗುಡಾರದಲ್ಲೇ ವಾಸಿಸುತ್ತಾ [ಅವರೊಡನೆ] ಸಂಚರಿಸಿದೆನು.


ಹನ್ನಳು ಏಲಿಗೆ - ಸ್ವಾಮೀ, ನಿನ್ನ ಜೀವದಾಣೆ; ಮೊದಲು ಯೆಹೋವನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ ಇಲ್ಲಿ ನಿನ್ನ ಹತ್ತಿರ ನಿಂತಿದ್ದ ಸ್ತ್ರೀಯು ನಾನೇ.


ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು; ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.


ಕರ್ತನೂ ಗುರುವೂ ಆಗಿರುವ ನಾನು ನಿಮ್ಮ ಕಾಲುಗಳನ್ನು ತೊಳೆದಿರಲಾಗಿ ನೀವು ಸಹ ಒಬ್ಬರ ಕಾಲನ್ನು ಒಬ್ಬರು ತೊಳೆಯುವ ಹಂಗಿನವರಾಗಿದ್ದೀರಿ.


ಅರಸನು - ಈ ಕಾರ್ಯದಲ್ಲಿ ಯೋವಾಬನ ಕೈಯಿರುತ್ತದಲ್ಲವೋ ಎಂದು ಕೇಳಿದನು. ಅದಕ್ಕೆ ಸ್ತ್ರೀಯು - ಅರಸನ ಜೀವದಾಣೆ, ಅರಸನು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ ಬಲಕ್ಕಾಗಲಿ ಜಾರಿಕೊಳ್ಳುವದಕ್ಕೆ ಆಗುವದಿಲ್ಲ; ನಿನ್ನ ದಾಸಿಯಾದ ನನ್ನನ್ನು ಪ್ರೇರಿಸಿ ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿಕೊಟ್ಟವನು ನಿನ್ನ ಸೇವಕನಾದ ಯೋವಾಬನೇ ಹೌದು.


ಸ್ವಾಮೀ, ನೀನು ಸ್ವಹಸ್ತದಿಂದ ಮುಯ್ಯಿತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನ ಆಣೆ, ನಿನ್ನ ಜೀವದಾಣೆ, ನಿನ್ನ ವಿರೋಧಿಗಳೂ ನಿನಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ.


ಅದಕ್ಕೆ ದಾವೀದನು - ನಿನ್ನ ಕಣ್ಣು ಮುಂದೆ ನನಗೆ ದಯೆ ದೊರಕುತ್ತದೆಂಬದನ್ನು ನಿನ್ನ ತಂದೆಯು ಬಲ್ಲನು. ಆದದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನಾಣೆ, ನನಗೂ ಮರಣಕ್ಕೂ ಒಂದು ಗೇಣು ಮಾತ್ರ ಅಂತರವಿದೆ ಎಂದು ಖಂಡಿತವಾಗಿ ಹೇಳಿದನು.


ದಾವೀದನು ಫಿಲಿಷ್ಟಿಯನೊಡನೆ ಯುದ್ಧಮಾಡುವದಕ್ಕೆ ಹೊರಟದ್ದನ್ನು ಸೌಲನು ಕಂಡು ತನ್ನ ಸೇನಾಪತಿಯಾದ ಅಬ್ನೇರನನ್ನು - ಅಬ್ನೇರನೇ, ಈ ಹುಡುಗನು ಯಾರ ಮಗನು ಎಂದು ಕೇಳಿದ್ದಕ್ಕೆ ಅವನು ಸೌಲನಿಗೆ - ಅರಸನೇ, ನಿನ್ನ ಜೀವದಾಣೆ ನನಗೆ ಗೊತ್ತಿಲ್ಲ ಎಂದು ಉತ್ತರಕೊಟ್ಟನು.


ಅನಂತರ ಸೌಲನು ಅಹೀಯನಿಗೆ - ಏಫೋದನ್ನು ತೆಗೆದುಕೊಂಡು ಬಾ ಎಂದು ಆಜ್ಞಾಪಿಸಿದನು. ಆ ಕಾಲದಲ್ಲಿ ಇವನು ಇಸ್ರಾಯೇಲ್ಯರೊಳಗೆ ಏಫೋದನ್ನು ಧರಿಸುತ್ತಿದ್ದನಷ್ಟೆ.


ಅವರು ಜನರನ್ನು ಕಳುಹಿಸಿ ಕೆರೂಬಿಗಳ ಮಧ್ಯದಲ್ಲಿ ಆಸೀನನಾಗಿರುವ ಸೈನ್ಯಾಧೀಶ್ವರ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.


ಊರೀಯನು ತನ್ನ ಮನೆಗೆ ಹೋಗಲಿಲ್ಲ ಎಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಇವನು ಅವನಿಗೆ - ನೀನು ಪ್ರಯಾಣಮಾಡಿಕೊಂಡು ಬಂದಿಯಲ್ಲಾ; ಯಾಕೆ ಮನೆಗೆ ಹೋಗಲಿಲ್ಲ ಅಂದನು.


ಮೋಶೆ ಅವರಿಗೆ - ನಿಮ್ಮ ಸಹೋದರರು ಯುದ್ಧಕ್ಕೆ ಹೋಗುವಾಗ ನೀವು ಇಲ್ಲೇ ಕೂತಿರಬೇಕೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು