Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:6 - ಕನ್ನಡ ಸತ್ಯವೇದವು J.V. (BSI)

6 ಒಡನೆ ದಾವೀದನು ದೂತರ ಮುಖಾಂತರವಾಗಿ ಯೋವಾಬನಿಗೆ - ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು ಎಂದು ಆಜ್ಞಾಪಿಸಿದನು. ಅವನು ಊರೀಯನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ದಾವೀದನು ದೂತರ ಮುಖಾಂತರವಾಗಿ ಯೋವಾಬನಿಗೆ, “ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು” ಎಂದು ಹೇಳಿ ಕಳುಹಿಸಿದನು. ಅವನು ಊರೀಯನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಒಡನೆ ದಾವೀದನು ದೂತರ ಮುಖಾಂತರ ಯೋವಾಬನಿಗೆ, “ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು,” ಎಂದು ಆಜ್ಞಾಪಿಸಿದನು. ಅವನು ಅಂತೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದಾವೀದನು ಯೋವಾಬನಿಗೆ, “ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು” ಎಂಬ ಸಂದೇಶವನ್ನು ಕಳುಹಿಸಿದನು. ಯೋವಾಬನು ಊರೀಯನನ್ನು ದಾವೀದನ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ದಾವೀದನು, “ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸು,” ಎಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯನನ್ನು ದಾವೀದನ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:6
12 ತಿಳಿವುಗಳ ಹೋಲಿಕೆ  

ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವದು.


ಆ ಮನುಷ್ಯನನ್ನು ನಾನರಿಯೆನು ಎಂದು ಹೇಳಿ ಶಾಪಹಾಕಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು.


ಅವನು ತಿರಿಗಿ - ಅಲ್ಲ, ಆ ಮನುಷ್ಯನನ್ನು ನಾನರಿಯೆನು ಎಂದು ಆಣೆಯಿಟ್ಟುಕೊಂಡು ಹೇಳಿದನು.


ಅಲ್ಲ, ನೀನು ಏನನ್ನುತ್ತೀಯೋ ನನಗೆ ಗೊತ್ತಿಲ್ಲ ಎಂದು ಎಲ್ಲರ ಮುಂದೆ ಹೇಳಿದನು.


ಮತ್ತು ಯೆಹೋವನು - ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ;


ಅದಕ್ಕೆ ಸೌಲನು - ನಾನು ಪಾಪ ಮಾಡಿದ್ದೇನೆ; ದಯವಿಟ್ಟು ಇಸ್ರಾಯೇಲ್ಯರ ಮುಂದೆಯೂ ಜನರ ಹಿರಿಯರ ಮುಂದೆಯೂ ನನ್ನ ಮಾನವನ್ನುಳಿಸು; ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸುವದಕ್ಕಾಗುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ ಎಂದು ಬೇಡಿಕೊಳ್ಳಲು ಅವನು ಹಿಂದಿರುಗಿ ಸೌಲನ ಜೊತೆಯಲ್ಲಿ ಹೋದನು.


ಒಳ್ಳೇ ಕೆಲಸ ಮಾಡಿದರೆ ನಿನ್ನ ತಲೆ ಎತ್ತಲ್ಪಡುವದಲ್ಲವೇ; ಅಲ್ಲದಿದ್ದರೆ ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವದು; ಆದರೂ ನೀನು ಅದನ್ನು ವಶಮಾಡಿಕೊಳ್ಳಬೇಕು ಎಂದು ಹೇಳಿದನು.


ಅನಂತರ ಆಕೆಯು ತನ್ನ ಮನೆಗೆ ಹೋದಳು. ಆಕೆಯು ತಾನು ಗರ್ಭಧರಿಸಿದ್ದು ಗೊತ್ತಾದಾಗ ದಾವೀದನಿಗೆ ವರ್ತಮಾನ ಕಳುಹಿಸಿದಳು.


ಊರೀಯನು ಬಂದಾಗ ದಾವೀದನು - ಯೋವಾಬನೂ ಸೈನ್ಯದವರೂ ಹೇಗಿರುತ್ತಾರೆ? ಯುದ್ಧವು ಹೇಗೆ ನಡೆದದೆ ಎಂದು ವಿಚಾರಿಸಿದನಂತರ ಅವನಿಗೆ -


ಹಿತ್ತಿಯನಾದ ಊರೀಯ, ಒಟ್ಟಿಗೆ ಮೂವತ್ತೇಳು ಮಂದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು