Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:10 - ಕನ್ನಡ ಸತ್ಯವೇದವು J.V. (BSI)

10 ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದದರಿಂದಲೂ ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡದರಿಂದಲೂ ಕತ್ತಿಯು ನಿನ್ನ ಮನೆಯನ್ನು ಬಿಟ್ಟು ಹೋಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದಲೂ, ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡದ್ದರಿಂದಲೂ, ನೀತಿಯ ಕತ್ತಿಯು ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದೆ; ಹಾಗು ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡೆ. ಆದ್ದರಿಂದ ಕತ್ತಿ ನಿನ್ನ ಮನೆಯನ್ನು ಬಿಟ್ಟು ತೊಲಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀನು ಅವನ ಹೆಂಡತಿಯನ್ನು ತೆಗೆದುಕೊಂಡದ್ದರಿಂದ ಮತ್ತು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದ ಕತ್ತಿಯು ನಿನ್ನ ಕುಟುಂಬವನ್ನು ಸದಾ ಹಿಡಿದಿರುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಈಗ ನೀನು ನನ್ನನ್ನು ತಿರಸ್ಕರಿಸಿ, ಹಿತ್ತಿಯನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡದ್ದರಿಂದ, ಖಡ್ಗವು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ತೊಲಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:10
16 ತಿಳಿವುಗಳ ಹೋಲಿಕೆ  

ಆತನ ಅಪಾರವಾದ ದಯಾ ಸಹನ ದೀರ್ಘಶಾಂತಿಗಳನ್ನು ಅಸಡ್ಡೆಮಾಡುತ್ತೀಯಾ? ಮನಸ್ಸನ್ನು ಬೇರೆಮಾಡಿಕೊಳ್ಳುವದಕ್ಕೆ ದೇವರ ಉಪಕಾರವು ನಿನ್ನನ್ನು ಪ್ರೇರಿಸುತ್ತದೆಂಬದು ನಿನಗೆ ಗೊತ್ತಿಲ್ಲವೇ?


ಆಗ ಯೇಸು ಅವನಿಗೆ - ನಿನ್ನ ಕತ್ತಿಯನ್ನು ತಿರಿಗಿ ಒರೆಯಲ್ಲಿ ಸೇರಿಸು; ಕತ್ತಿಯನ್ನು ಹಿಡಿದವರೆಲ್ಲರು ಕತ್ತಿಯಿಂದ ಸಾಯುವರು.


ಹೀಗಿರಲು ಈ ಮಾತನ್ನು ತಾತ್ಸಾರ ಮಾಡುವವನು ಮನುಷ್ಯನನ್ನು ತಿರಸ್ಕರಿಸುವದು ಮಾತ್ರವಲ್ಲದೆ ಪವಿತ್ರಾತ್ಮವರವನ್ನು ನಿಮಗೆ ದಯಪಾಲಿಸುವ ದೇವರನ್ನೂ ತಿರಸ್ಕರಿಸುತ್ತಾನೆ.


ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಕೂಡ ಸೇವಿಸಲಾರಿರಿ.


ಇಸಾಕನ ವಂಶದವರ ಪೂಜಾಸ್ಥಳಗಳು ಹಾಳಾಗುವವು, ಇಸ್ರಾಯೇಲಿನ ಪವಿತ್ರಾಲಯಗಳು ಬೀಡುಬೀಳುವವು; ನಾನು ಕತ್ತಿಹಿರಿದು ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು ಅಂದನು.


ಇದನ್ನು ಕೇಳಿ ಅರಸನು ಎದೆಯೊಡೆದವನಾಗಿ - ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ, ಮಗನೇ ಎಂದು ಕೂಗಿ ಅಳುತ್ತಾ ಹೆಬ್ಬಾಗಲಿನ ಮೇಲಿರುವ ಕೋಣೆಗೆ ಹೋದನು.


ನಿನ್ನ ಗೋತ್ರದವರೂ ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಈಗ ತಿಳಿಸುವದೇನಂದರೆ - ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರು ತಿರಸ್ಕಾರಹೊಂದುವರು.


ಪೂರಾ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ಓಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ ಅಂದನು.


ಆದರೆ ರಾತ್ರಿಯಲ್ಲಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು - ನೀನು ಆ ಸ್ತ್ರೀಯನ್ನು ಸೇರಿಸಿಕೊಂಡದರಿಂದ ಸಾಯತಕ್ಕವನಾಗಿದ್ದಿ; ಆಕೆ ಮುತ್ತೈದೆ ಅಂದನು.


ಯೆರೂಸಲೇಮನ್ನೂ ಇವನ ಸಂತಾನವನ್ನೂ ಉಳಿಸಿದನು.


ಉಪಕಾರಕ್ಕೆ ಅಪಕಾರಮಾಡುವವನ ಮನೆಗೆ ಕೇಡುತಪ್ಪದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು