Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:13 - ಕನ್ನಡ ಸತ್ಯವೇದವು J.V. (BSI)

13 ಆಗ ದಾವೀದನು ನಾತಾನನಿಗೆ - ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ ಎಂದು ಹೇಳಿದನು. ನಾತಾನನು ಅವನಿಗೆ - ಯೆಹೋವನು ನಿನ್ನ ಪಾಪವನ್ನು ಕ್ಷವಿುಸಿದ್ದಾನೆ, ನೀನು ಸಾಯುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇನೆ” ಎಂದು ಹೇಳಿದನು. ನಾತಾನನು ಅವನಿಗೆ “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ, ನೀನು ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ದಾವೀದನು ನಾತಾನನಿಗೆ, “ನಾನು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದ್ದೇನೆ,” ಎಂದು ಹೇಳಿದನು. ನಾತಾನನು ಅವನಿಗೆ, “ಸರ್ವೇಶ್ವರ ನಿನ್ನ ಪಾಪವನ್ನು ಕ್ಷಮಿಸಿದ್ದಾರೆ; ನೀನು ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದೆನು” ಎಂದನು. ನಾತಾನನು ದಾವೀದನಿಗೆ, “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ. ನೀನು ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ದಾವೀದನು ನಾತಾನನಿಗೆ, “ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇನೆ,” ಎಂದನು. ನಾತಾನನು ದಾವೀದನಿಗೆ, “ನೀನು ಸಾಯದ ಹಾಗೆ ಯೆಹೋವ ದೇವರು ನಿನ್ನ ಪಾಪವನ್ನು ಪರಿಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:13
46 ತಿಳಿವುಗಳ ಹೋಲಿಕೆ  

ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವದು.


ನಿನಗೇ ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದಲ್ಲಾ.


ಖಾನೇಷುಮಾರಿ ಮಾಡಿಸಿದನಂತರ ದಾವೀದನನ್ನು ಮನಸ್ಸಾಕ್ಷಿಯು ಹಂಗಿಸತೊಡಗಿತು. ಆದದರಿಂದ ಅವನು ಯೆಹೋವನನ್ನು - ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು; ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷವಿುಸು ಎಂದು ಪ್ರಾರ್ಥಿಸಿದನು.


ದೇವದೂತನು ತನ್ನ ಸೇವಕರಿಗೆ - ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ ಎಂದು ಅಪ್ಪಣೆಕೊಟ್ಟು ಅವನಿಗೆ - ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರಗಳನ್ನು ತೊಡಿಸುವೆನು ಎಂದು ಹೇಳಿದನು.


ಆದರೂ ಮಗನು ಅವನಿಗೆ - ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪಮಾಡಿದ್ದೇನೆ; ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ ಎಂದು ಹೇಳಲು


ಅದಕ್ಕೆ ಸೌಲನು - ನಾನು ಪಾಪ ಮಾಡಿದ್ದೇನೆ; ದಯವಿಟ್ಟು ಇಸ್ರಾಯೇಲ್ಯರ ಮುಂದೆಯೂ ಜನರ ಹಿರಿಯರ ಮುಂದೆಯೂ ನನ್ನ ಮಾನವನ್ನುಳಿಸು; ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸುವದಕ್ಕಾಗುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ ಎಂದು ಬೇಡಿಕೊಳ್ಳಲು ಅವನು ಹಿಂದಿರುಗಿ ಸೌಲನ ಜೊತೆಯಲ್ಲಿ ಹೋದನು.


ಯಾವನಾದರೂ ಪರಪತ್ನಿಯನ್ನು ಸಂಗವಿುಸಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದುಬಂದವನೂ ಭೂರಾಜರ ಒಡೆಯನೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ


ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಟ್ಟು ಸಾಯಬೇಕಾಗಿತ್ತು. ಆದರೆ ಒಂದೇ ಸಾರಿ ಯುಗಗಳ ಸಮಾಪ್ತಿಯಲ್ಲೇ ಆತನು ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ತನ್ನನ್ನು ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.


ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವು ಬೆಳಕಿನಲ್ಲಿ ನಡೆದರೆ ನಾವು ಒಬ್ಬರಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಮತ್ತು ಆತನ ಮಗನಾದ ಯೇಸುವಿನ ರಕ್ತವು ಸಕಲಪಾಪವನ್ನು ನಿವಾರಣಮಾಡಿ ನಮ್ಮನ್ನು ಶುದ್ಧಿಮಾಡುತ್ತದೆ.


ಇದನ್ನು ಅವರು ಕೇಳಿ ಹೃದಯದಲ್ಲಿ ಅಲಗುನೆಟ್ಟಂತಾಗಿ ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ - ಸಹೋದರರೇ, ನಾವೇನು ಮಾಡಬೇಕು ಎಂದು ಕೇಳಲು


ಮತ್ತು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ತಲೆಯನ್ನು ಹೊಯಿಸಿದನು.


ಆತನು ವ್ಯಥೆಗೊಳಿಸಿದರೇನು, ತನ್ನ ಕೃಪಾತಿಶಯದಿಂದ ಕನಿಕರಿಸುವನು;


ನಿನ್ನ ದ್ರೋಹಗಳನ್ನು ಮಂಜಿನಂತೆ ಪರಿಹರಿಸಿದ್ದೇನೆ, ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.


ನೀನು ನನಗೋಸ್ಕರ ಹಣಕೊಟ್ಟು ಬಜೆಯನ್ನು ತರಲಿಲ್ಲ, ಯಜ್ಞಪಶುಗಳ ವಪೆಯಿಂದ ನನ್ನನ್ನು ತೃಪ್ತಿಪಡಿಸಲಿಲ್ಲ; ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಪಡಿಸಿದ್ದೀ, ನಿನ್ನ ದೋಷಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.


ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು, ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಹಿಂದೆ ಹಾಕಿಬಿಟ್ಟಿದ್ದೀ.


ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ ಅಪರಂಜಿಯ ಆಭರಣಕ್ಕೂ ಸಮಾನ.


ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸೇನು; ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ.


ಅವನು ಮನುಷ್ಯರ ಮುಂದೆ ನಿಂತು - ನಾನು ಪಾಪಮಾಡಿ ನ್ಯಾಯವನ್ನು ಕೆಡಿಸಿದ್ದರೂ ಆತನು ಮುಯ್ಯಿ ತೀರಿಸದೆ


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು - ನಿನ್ನನ್ನು ರಾಜಮಂತ್ರಿಯನ್ನಾಗಿ ನೇವಿುಸಿದ್ದೇವೋ? ಸುಮ್ಮನಿರು, ನಿನಗೆ ಪೆಟ್ಟು ಬೇಕೋ ಅನ್ನಲು ಅವನು - ನೀನು ನನ್ನ ಬುದ್ಧಿವಾದವನ್ನು ಲಾಲಿಸದೆ ಹೀಗೆ ಮಾಡುವದರಿಂದ ದೇವರು ನಿನ್ನನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆಂಬದಾಗಿ ನನಗೆ ತಿಳಿಯಬಂತು ಎಂದು ಹೇಳಿ ಸುಮ್ಮನಾದನು.


ಆಸನು ಈ ಮಾತುಗಳ ದೆಸೆಯಿಂದ ಬೇಸರಗೊಂಡು ದರ್ಶಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿಡಿಸಿ ಕೋಳಹಾಕಿಸಿದನು. ಇದಲ್ಲದೆ ಜನರಲ್ಲಿ ಕೆಲವರನ್ನು ಪೀಡಿಸಿದನು.


ಆಗ ಅರಸನು ಎಲೀಯನನ್ನು ಕರತರುವದಕ್ಕಾಗಿ ಪಂಚದಶಾಧಿಪತಿಯನ್ನು ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಹೋಗಿ ಎಲೀಯನು ಬೆಟ್ಟದ ತುದಿಯಲ್ಲಿ ಕೂತಿರುವದನ್ನು ಕಂಡು ಅವನಿಗೆ - ದೇವರ ಮನುಷ್ಯನೇ ಇಳಿದು ಬಾ; ಅರಸನು ನಿನ್ನನ್ನು ಕರೆಯುತ್ತಾನೆ ಎಂದು ಹೇಳಿದನು.


ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು - ಅರಸನು ಹಾಗನ್ನದಿರಲಿ ಅಂದನು.


ಅಹಾಬನು ಎಲೀಯನನ್ನು ಕಂಡು ಅವನನ್ನು - ನನ್ನ ವೈರಿಯೇ, ನೀನು ನನ್ನನ್ನು ಕಂಡುಕೊಂಡಿಯಾ ಎಂದು ಕೇಳಲು ಅವನು - ಹೌದು, ಕಂಡುಕೊಂಡೆನು; ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.


ಬೇತೇಲಿನ ವೇದಿಯ ಬಳಿಯಲ್ಲಿ ನಿಂತಿದ್ದ ಅರಸನು ಆ ದೇವರ ಮನುಷ್ಯನು ವೇದಿಗೆ ವಿರೋಧವಾಗಿ ನುಡಿದದ್ದನ್ನು ಕೇಳಿ ಕೈಚಾಚಿ - ಅವನನ್ನು ಹಿಡಿಯಿರಿ ಎಂದು ಆಜ್ಞಾಪಿಸಿದನು. ಕೂಡಲೆ ಅವನ ಕೈ ಒಣಗಿಹೋಯಿತು.


ಆಗ ಸೌಲನು ಸಮುವೇಲನಿಗೆ - ಏನು? ನಾನು ಯೆಹೋವನ ಮಾತನ್ನು ಕೇಳಲಿಲ್ಲವೋ? ಆತನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರನ್ನೆಲ್ಲಾ ಸಂಹರಿಸಿ ಅವರ ಅರಸನಾದ ಅಗಾಗನನ್ನು ಹಿಡಿದು ತಂದೆನು.


ಮನುಷ್ಯನನ್ನು ಹೊಡೆದು ಕೊಂದವನಿಗೆ ಮರಣ ಶಿಕ್ಷೆಯಾಗಬೇಕು.


ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ಎದೆಯನ್ನು ಬಡುಕೊಳ್ಳುತ್ತಾ - ದೇವರೇ, ಪಾಪಿಯಾದ ನನ್ನನ್ನು ಕರುಣಿಸು ಅಂದನು.


ಈ ಮನೆಯಲ್ಲಿ ಅವನೂ ನನಗಿಂತ ದೊಡ್ಡವನಲ್ಲ; ನೀನು ಅವನ ಧರ್ಮಪತ್ನಿಯಾದದರಿಂದ ನಿನ್ನನ್ನು ಮಾತ್ರ ನನಗೆ ಅಧೀನಮಾಡಲಿಲ್ಲ; ಹೀಗಿರುವಲ್ಲಿ ನಾನು ಇಂಥಾ ಮಹಾದುಷ್ಕೃತ್ಯವನ್ನು ನಡಿಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ ಎಂದು ತನ್ನ ದಣಿಯ ಹೆಂಡತಿಗೆ ಉತ್ತರಕೊಟ್ಟನು.


ಆಗ ದಾವೀದನು - ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾಗಿದ್ದೇನೆ; ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷವಿುಸು ಎಂದು ದೇವರನ್ನು ಪ್ರಾರ್ಥಿಸಲು


ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ.


ಆಗ ಫರೋಹನು ಮೋಶೆ ಆರೋನರನ್ನು ಕರಿಸಿ ಅವರಿಗೆ - ನಾನು ಅಪರಾಧಿಯೆಂದು ಈಗ ಒಪ್ಪಿಕೊಂಡೆನು; ಯೆಹೋವನು ನ್ಯಾಯವಂತನು, ನಾನೂ ನನ್ನ ಜನರೂ ದೋಷಿಗಳು.


ದಾವೀದನು ಜನಸಂಹಾರಕದೂತನನ್ನು ಕಂಡಾಗ ಯೆಹೋವನಿಗೆ - ಮೂರ್ಖತನದಿಂದ ಪಾಪಮಾಡಿದವನು ನಾನು; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿನ್ನ ಕೈ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ ಎಂದು ಬೇಡಿಕೊಂಡನು.


ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು