Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:16 - ಕನ್ನಡ ಸತ್ಯವೇದವು J.V. (BSI)

16 ಆದದರಿಂದ ದಾವೀದನು ಮಗುವಿಗೋಸ್ಕರ ದೇವರನ್ನು ಪ್ರಾರ್ಥಿಸುತ್ತಾ ಉಪವಾಸಮಾಡುತ್ತಾ ಒಳಕೋಣೆಯಲ್ಲಿ ನೆಲದ ಮೇಲೆಯೇ ಬಿದ್ದುಕೊಂಡು ರಾತ್ರಿಕಳೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದಾವೀದನು ಮಗುವಿಗೋಸ್ಕರ ದೇವರನ್ನು ಪ್ರಾರ್ಥಿಸುತ್ತಾ, ಉಪವಾಸ ಮಾಡುತ್ತಾ, ಒಳಗಿನ ಕೋಣೆಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆಯೇ ಬಿದ್ದುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದುದರಿಂದ ದಾವೀದನು ಮಗುವಿಗಾಗಿ ದೇವರನ್ನು ಪ್ರಾರ್ಥಿಸುತ್ತಾ ಉಪವಾಸ ಮಾಡುತ್ತಾ ಒಳಕೋಣೆಯಲ್ಲಿ ನೆಲದ ಮೇಲೆಯೇ ಬಿದ್ದುಕೊಂಡು ರಾತ್ರಿ ಕಳೆಯುತ್ತಿದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದಾವೀದನು ಮಗುವಿಗಾಗಿ ದೇವರಲ್ಲಿ ಪ್ರಾರ್ಥಿಸಿದನು. ಅವನು ಉಪವಾಸ ಮಾಡಿದನು. ಅವನು ತನ್ನ ಮನೆಯೊಳಗೇ ಇದ್ದನು. ಅವನು ರಾತ್ರಿಯೆಲ್ಲ ನೆಲದ ಮೇಲೆಯೇ ಬಿದ್ದುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದಾವೀದನು ಕೂಸಿಗೋಸ್ಕರ ದೇವರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪವಾಸ ಮಾಡಿ, ಒಳಗಿನ ಕೋಣೆಯಲ್ಲಿ ನೆಲದ ಮೇಲೆಯೇ ರಾತ್ರಿ ಕಳೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:16
17 ತಿಳಿವುಗಳ ಹೋಲಿಕೆ  

ಆಗ ಅರಸನು ಎದ್ದು ತನ್ನ ಬಟ್ಟೆಗಳನ್ನು ಹರಿದುಕೊಂಡು ನೆಲಕ್ಕೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮತಮ್ಮ ಬಟ್ಟೆಗಳನ್ನು ಹರಕೊಂಡು ಅವನ ಹತ್ತಿರ ನಿಂತರು.


ಅವನು ಮೂರು ದಿವಸ ಕಣ್ಣುಕಾಣದೆ ಏನೂ ತಿನ್ನಲಿಲ್ಲ; ಏನೂ ಕುಡಿಯಲಿಲ್ಲ.


ದೇವರು ಒಂದು ವೇಳೆ ಮನಮರುಗಿ ಹಿಂದಿರುಗಿ ತನ್ನ ಉಗ್ರಕೋಪವನ್ನು ತೊಲಗಿಸಾನು, ನಾವು ನಾಶವಾಗದೆ ಉಳಿದೇವು ಎಂಬದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.


ಕಣ್ಣೀರುಸುರಿಸಿ ಅಂಗಲಾಚಿ ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು;


ನಾನು ಅತ್ತತ್ತು ಉಪವಾಸ ಬಿದ್ದದ್ದೆಲ್ಲಾ ಪರಿಹಾಸ್ಯಕ್ಕೆ ಕಾರಣವಾಯಿತು.


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ; ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಯನ್ನು ಹರಿದುಕೊಂಡು ಹಗಲಿರುಳು ಮೈಮೇಲೆ ಗೋಣೀತಟ್ಟನ್ನು ಹಾಕಿಕೊಂಡು ಉಪವಾಸ ಮಾಡುತ್ತಾ ದೀನಮನಸ್ಸಿನಿಂದ ಪ್ರವರ್ತಿಸಿದನು.


ದಾವೀದನು ಅವರಿಗೆ - ಹುಡುಗನು ಜೀವದಿಂದಿದ್ದಾಗ ಒಂದು ವೇಳೆ ಯೆಹೋವನು ಕೃಪೆಮಾಡಿ ಅವನನ್ನು ಉಳಿಸಾನು ಅಂದುಕೊಂಡು ಉಪವಾಸಮಾಡಿದೆನು, ಅತ್ತೆನು.


ಯೆಹೋವನೇ, [ನಿನ್ನ ಜನರು] ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಆಶ್ರಯಿಸಿದರು, ನಿನ್ನ ಶಿಕ್ಷೆಗೆ ಗುರಿಯಾಗಿ ಜಪಮಾಡಿದರು.


ಎಂದು ಹೇಳಿ ಮನೆಗೆ ಹೊರಟು ಹೋದನು. ಊರೀಯನ ಹೆಂಡತಿಯಲ್ಲಿ ದಾವೀದನಿಗೆ ಹುಟ್ಟಿದ ಮಗುವು ಯೆಹೋವನ ಪೆಟ್ಟಿನಿಂದ ಬಹುವಾಗಿ ಅಸ್ವಸ್ಥವಾಯಿತು.


ನಾನು ಈ ವರ್ತಮಾನವನ್ನು ಕೇಳಿದಾಗ ನೆಲದ ಮೇಲೆ ಕೂತುಕೊಂಡು ಅತ್ತೆನು; ಕೆಲವು ದಿವಸಗಳವರೆಗೂ ಶೋಕಿಸುತ್ತಾ ಉಪವಾಸವಾಗಿದ್ದು ಪರಲೋಕ ದೇವರ ಮುಂದೆ ವಿಜ್ಞಾಪನೆ ಮಾಡುತ್ತಾ ಇದ್ದೆನು.


ಅನಂತರ ರಾಜನು ಅರಮನೆಗೆ ಹೋಗಿ ವಿನೋದ ವಾದ್ಯಗಳನ್ನು ತನ್ನ ಮುಂದೆ ತರಿಸದೆ ಉಪವಾಸವಾಗಿ ರಾತ್ರಿಯನ್ನು ಕಳೆದನು; ಅವನಿಗೆ ನಿದ್ರೆತಪ್ಪಿತು.


ಆಗ ಯೆಹೋಶುವನೂ ಇಸ್ರಾಯೇಲ್ಯರ ಹಿರಿಯರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಬೂದಿಯನ್ನು ಹಾಕಿಕೊಂಡು ಸಾಯಂಕಾಲದವರೆಗೂ ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿದ್ದರು.


ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ ವಿಜ್ಞಾಪನೆಗಳಲ್ಲಿ ನಿರತನಾದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು