Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:19 - ಕನ್ನಡ ಸತ್ಯವೇದವು J.V. (BSI)

19 ಸೇವಕರು ಈ ಪ್ರಕಾರ ಗುಜುಗುಜು ಮಾತಾಡುವದನ್ನು ದಾವೀದನು ಕಂಡು ಮಗುವು ಮೃತಿಹೊಂದಿತೆಂದು ತಿಳಿದು ಸೇವಕರನ್ನು - ಮಗುವು ಸತ್ತಿತೋ ಎಂದು ಕೇಳಿದನು. ಅವರು - ಹೌದು, ಸತ್ತಿತು ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸೇವಕರು ಈ ಪ್ರಕಾರ ಪಿಸುಗುಟ್ಟುವುದನ್ನು ಕಂಡು ದಾವೀದನು, ಮಗು ಸತ್ತು ಹೋಯಿತೆಂದು ತಿಳಿದು ಸೇವಕರನ್ನು, “ಮಗು ಸತ್ತುಹೋಯಿತೋ?” ಎಂದು ಕೇಳಿದನು. ಅವರು, “ಹೌದು ಸತ್ತುಹೋಯಿತು” ಎಂದು ಉತ್ತರ ಕೊಟ್ಟರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸೇವಕರು ಈ ಪ್ರಕಾರ ಗುಜುಗುಜು ಮಾತಾಡುವುದನ್ನು ದಾವೀದನು ಕಂಡು ಮಗು ಸತ್ತು ಹೋಯಿತೆಂದು ತಿಳಿದು, ಸೇವಕರನ್ನು, “ಮಗು ತೀರಿಕೊಂಡಿತೋ?,” ಎಂದು ಕೇಳಿದನು. ಅವರು “ಹೌದು, ತೀರಿಕೊಂಡಿತು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ದಾವೀದನು ತನ್ನ ಸೇವಕರು ಗುಸುಗುಸು ಮಾತನಾಡುವುದನ್ನು ಕೇಳಿ, ಮಗು ಸತ್ತಿದೆಯೆಂಬುದನ್ನು ಅರ್ಥಮಾಡಿಕೊಂಡನು. ಆದ್ದರಿಂದ ದಾವೀದನು ತನ್ನ ಸೇವಕರನ್ನು ಕರೆದು, “ಮಗು ಸತ್ತುಹೋಯಿತೇ?” ಎಂದು ಕೇಳಿದನು. “ಹೌದು, ಸತ್ತುಹೋಯಿತು” ಎಂದು ಸೇವಕರು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ ದಾವೀದನು ತನ್ನ ಸೇವಕರು ಪಿಸುಗುಟ್ಟುವುದನ್ನು ಕಂಡು, ಮಗು ಸತ್ತು ಹೋಯಿತೆಂದು ಗ್ರಹಿಸಿಕೊಂಡನು. ದಾವೀದನು ತನ್ನ ಸೇವಕರಿಗೆ, “ಮಗುವು ಸತ್ತು ಹೋಯಿತೋ?” ಎಂದನು. ಅವರು, “ಸತ್ತು ಹೋಯಿತು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:19
4 ತಿಳಿವುಗಳ ಹೋಲಿಕೆ  

ಏಳನೆಯ ದಿನದಲ್ಲಿ ಮಗುವು ಸತ್ತಿತು; ಅವನ ಸೇವಕರು ಭಯಪಟ್ಟು ಈ ವರ್ತಮಾನವನ್ನು ದಾವೀದನಿಗೆ ತಿಳಿಸಲಿಲ್ಲ. ಅವರು - ಹುಡುಗನು ಜೀವದಿಂದಿದ್ದಾಗಲೇ ಅವನು ನಮ್ಮ ಸಂತೈಸುವಿಕೆಯನ್ನು ಲಕ್ಷಿಸಲಿಲ್ಲ. ಹೀಗಿರುವಲ್ಲಿ ಮಗುವಿನ ಮರಣವಾರ್ತೆಯನ್ನು ಅವನಿಗೆ ತಿಳಿಸಿದರೆ ಅವನು ತನಗೆ ಏನಾದರೂ ಕೇಡುಮಾಡಿಕೊಂಡಾನಲ್ಲವೇ ಎಂದು ಮಾತಾಡಿಕೊಳ್ಳುತ್ತಿದ್ದರು.


ಆಗ ದಾವೀದನು ನೆಲದಿಂದೆದ್ದು ಸ್ನಾನಮಾಡಿ ತೈಲ ಹಚ್ಚಿಕೊಂಡು ತನ್ನ ಬಟ್ಟೆಗಳನ್ನು ಬದಲಿಸಿ ಯೆಹೋವನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರತರಿಸಿ ಊಟಮಾಡಿದನು.


ಅರಸನಾದ ದಾವೀದನು ಅಮ್ನೋನನ ಮರಣದ ವಿಷಯ ಆದರಣೆಹೊಂದಿ ತನ್ನ ಮಗನಾದ ಅಬ್ಷಾಲೋಮನನ್ನು ತಿರಿಗಿ ನೋಡುವದಕ್ಕೆ ಬಹಳ ಆತುರಪಟ್ಟನು.


ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು ನಿರೀಕ್ಷೆಯಿಲ್ಲದವರಾದ ಇತರರಂತೆ ದುಃಖಿಸುವದು ನಮ್ಮ ಮನಸ್ಸಿಗೆ ಒಪ್ಪುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು