Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:21 - ಕನ್ನಡ ಸತ್ಯವೇದವು J.V. (BSI)

21 ಇದನ್ನು ನೋಡಿ ಅವನ ಸೇವಕರು ಅವನಿಗೆ - ಇದೇನು ನೀನು ಮಾಡಿದ್ದು? ಹುಡುಗನು ಜೀವದಿಂದಿದ್ದಾಗ ಅಳುತ್ತಾ ಉಪವಾಸವಾಗಿದ್ದಿ; ಹುಡುಗನು ಸತ್ತನಂತರ ಎದ್ದು ಊಟಮಾಡಿದಿ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇದನ್ನು ನೋಡಿ ಅವನ ಸೇವಕರು ಅವನಿಗೆ, “ಇದೇನು ನೀನು ಮಾಡಿದ್ದು? ಹುಡುಗನು ಜೀವದಿಂದಿದ್ದಾಗ ಅಳುತ್ತಾ ಉಪವಾಸಮಾಡಿದ್ದೀ. ಹುಡುಗನು ಸತ್ತ ನಂತರ ಎದ್ದು ಊಟ ಮಾಡಿರುವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇದನ್ನು ನೋಡಿದ ಸೇವಕರು ಅವನಿಗೆ, “ಇದೇನು ನೀವು ಮಾಡಿದ್ದು? ಹುಡುಗ ಜೀವದಿಂದಿದ್ದಾಗ ಅಳುತ್ತಾ ಉಪವಾಸವಾಗಿದ್ದಿರಿ. ಹುಡುಗ ಸತ್ತ ನಂತರ ಎದ್ದು ಊಟಮಾಡಿದಿರಿ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದಾವೀದನ ಸೇವಕರು ಅವನಿಗೆ, “ನೀನು ಹೀಗೇಕೆ ಮಾಡುತ್ತಿರುವೆ? ಮಗುವು ಇನ್ನೂ ಜೀವಂತವಾಗಿದ್ದಾಗ ನೀನು ಊಟಮಾಡಲಿಲ್ಲ. ನೀನು ಗೋಳಾಡಿದೆ, ಆದರೆ ಮಗುವು ಸತ್ತಮೇಲೆ ನೀನು ಮೇಲಕ್ಕೆದ್ದು ಊಟ ಮಾಡಿದೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನ ಸೇವಕರು ಅವನಿಗೆ, “ಇದು ಏನು ನೀನು ಮಾಡಿದ್ದು? ಮಗುವು ಜೀವದಿಂದ ಇರುವಾಗ, ನೀನು ಉಪವಾಸವಾಗಿದ್ದು ಅದಕ್ಕೋಸ್ಕರ ಅಳುತ್ತಿದ್ದೆ. ಆದರೆ ಮಗುವು ಸತ್ತಮೇಲೆ ನೀನು ಎದ್ದು ರೊಟ್ಟಿಯನ್ನು ತಿಂದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:21
4 ತಿಳಿವುಗಳ ಹೋಲಿಕೆ  

ದೇವರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನಾದರೂ ವಿಚಾರಿಸಿ ತಿಳಿಕೊಳ್ಳುವದಿಲ್ಲ.


ಆಗ ದಾವೀದನು ನೆಲದಿಂದೆದ್ದು ಸ್ನಾನಮಾಡಿ ತೈಲ ಹಚ್ಚಿಕೊಂಡು ತನ್ನ ಬಟ್ಟೆಗಳನ್ನು ಬದಲಿಸಿ ಯೆಹೋವನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರತರಿಸಿ ಊಟಮಾಡಿದನು.


ದಾವೀದನು ಅವರಿಗೆ - ಹುಡುಗನು ಜೀವದಿಂದಿದ್ದಾಗ ಒಂದು ವೇಳೆ ಯೆಹೋವನು ಕೃಪೆಮಾಡಿ ಅವನನ್ನು ಉಳಿಸಾನು ಅಂದುಕೊಂಡು ಉಪವಾಸಮಾಡಿದೆನು, ಅತ್ತೆನು.


ಯೆಹೋವನೇ, ನಾನು ನಂಬಿಗಸ್ತನಾಗಿಯೂ ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದದ್ದನ್ನು ನೆನಪು ಮಾಡಿಕೋ ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು