Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:22 - ಕನ್ನಡ ಸತ್ಯವೇದವು J.V. (BSI)

22 ದಾವೀದನು ಅವರಿಗೆ - ಹುಡುಗನು ಜೀವದಿಂದಿದ್ದಾಗ ಒಂದು ವೇಳೆ ಯೆಹೋವನು ಕೃಪೆಮಾಡಿ ಅವನನ್ನು ಉಳಿಸಾನು ಅಂದುಕೊಂಡು ಉಪವಾಸಮಾಡಿದೆನು, ಅತ್ತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದಾವೀದನು ಅವರಿಗೆ, “ಹುಡುಗನು ಜೀವದಿಂದಿದ್ದಾಗ ಒಂದು ವೇಳೆ ಯೆಹೋವನು ಕೃಪೆಮಾಡಿ ಅವನನ್ನು ಉಳಿಸಾನು ಅಂದುಕೊಂಡು ಉಪವಾಸ ಮಾಡಿದೆನು, ಅತ್ತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದಾವೀದನು ಅವರಿಗೆ, “ಹುಡುಗ ಜೀವದಿಂದಿದ್ದಾಗ ಒಂದು ವೇಳೆ ಸರ್ವೇಶ್ವರ ಕೃಪೆಮಾಡಿ ಅವನನ್ನು ಉಳಿಸಾರು ಎಂದುಕೊಂಡು ಉಪವಾಸ ಮಾಡಿದೆ, ಕಣ್ಣೀರಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದಾವೀದನು, “ಮಗು ಜೀವದಿಂದ ಇರುವಾಗ ನಾನು ಊಟಮಾಡದೆ ಗೋಳಾಡಿದೆ, ಏಕೆಂದರೆ ‘ಒಂದುವೇಳೆ ಯೆಹೋವನು ನನ್ನ ಬಗ್ಗೆ ಅನುಕಂಪವನ್ನು ತೋರಿ ಮಗುವನ್ನು ಬದುಕಿಸಬಹುದು’ ಎಂದು ನಾನು ಯೋಚಿಸಿಕೊಂಡಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅದಕ್ಕವನು, “ಮಗುವು ಜೀವದಿಂದ ಇರುವಾಗ ಅದು ಬದುಕುವ ಹಾಗೆ ಯೆಹೋವ ದೇವರು ನನಗೆ ದಯಮಾಡುವರೋ ಎಂದು ಉಪವಾಸ ಮಾಡಿ ಅತ್ತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:22
10 ತಿಳಿವುಗಳ ಹೋಲಿಕೆ  

ನೀನು ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ - ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ; ನಿನ್ನ ಆಯುಷ್ಯಕ್ಕೆ ಹದಿನೈದು ವರುಷಗಳನ್ನು ಕೂಡಿಸುತ್ತೇನೆ.


ಹೀಗಿರಲು ಹಡಗಿನ ಯಜಮಾನನು ಅವನ ಬಳಿಗೆ ಬಂದು - ಇದೇನು, ನಿದ್ದೆ ಮಾಡುತ್ತೀ! ಎದ್ದು ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾಶವಾಗದೆ ಉಳಿದೇವು ಎಂದು ಹೇಳಿದನು.


ಆತನು ಒಂದು ವೇಳೆ ಪಶ್ಚಾತ್ತಾಪಪಟ್ಟು ಹಿಂದಿರುಗಿ ನಿಮ್ಮ ದೇವರಾದ ಯೆಹೋವನ ಧಾನ್ಯಪಾನನೈವೇದ್ಯಗಳಿಗೆ ಅನುಕೂಲವಾದ ಸುವರಗಳನ್ನು ದಯಪಾಲಿಸಿ ಹೋದಾನು.


ಉಪವಾಸ ದಿನವನ್ನು ಏರ್ಪಡಿಸಿರಿ; ಸಂಘವನ್ನು ಕೂಡಿಸಿರಿ; ಹಿರಿಯರನ್ನೂ ಸಮಸ್ತ ದೇಶನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ ಯೆಹೋವನಿಗೆ ಮೊರೆಯಿಡಿರಿ.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೇದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೇನಾಧೀಶ್ವರದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದಾನು.


ಇದನ್ನು ನೋಡಿ ಅವನ ಸೇವಕರು ಅವನಿಗೆ - ಇದೇನು ನೀನು ಮಾಡಿದ್ದು? ಹುಡುಗನು ಜೀವದಿಂದಿದ್ದಾಗ ಅಳುತ್ತಾ ಉಪವಾಸವಾಗಿದ್ದಿ; ಹುಡುಗನು ಸತ್ತನಂತರ ಎದ್ದು ಊಟಮಾಡಿದಿ ಅಂದರು.


ಯೆಹೋವನೇ, ನಾನು ನಂಬಿಗಸ್ತನಾಗಿಯೂ ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದದ್ದನ್ನು ನೆನಪು ಮಾಡಿಕೋ ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು