2 ಸಮುಯೇಲ 12:28 - ಕನ್ನಡ ಸತ್ಯವೇದವು J.V. (BSI)28 ನೀನು ಬೇಗನೆ ಉಳಿದ ಸೈನ್ಯವನ್ನು ಕೂಡಿಸಿಕೊಂಡು ಬಂದು ಪಟ್ಟಣಕ್ಕೆ ಮುತ್ತಿಗೆ ಹಾಕಿ ಉಳಿದ ಭಾಗವನ್ನು ಸ್ವಾಧೀನಪಡಿಸಿಕೋ; ಅದನ್ನು ನಾನೇ ಹಿಡಿದರೆ ಅದಕ್ಕೆ ನನ್ನ ಹೆಸರು ಬರುವದು ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನೀನು ಬೇಗನೆ ಉಳಿದ ಸೈನ್ಯವನ್ನು ಕೂಡಿಸಿಕೊಂಡು ಬಂದು ಪಟ್ಟಣಕ್ಕೆ ಮುತ್ತಿಗೆ ಹಾಕಿ, ಉಳಿದ ಭಾಗವನ್ನು ಸ್ವಾಧೀನಪಡಿಸಿಕೋ, ಅದನ್ನು ನಾನೇ ಹಿಡಿದರೆ ಅದಕ್ಕೆ ನನ್ನ ಹೆಸರು ಬರುವುದು” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನೀವು ಉಳಿದ ಸೈನ್ಯವನ್ನು ಬೇಗನೆ ಕೂಡಿಸಿಕೊಂಡು ಬಂದು ಪಟ್ಟಣಕ್ಕೆ ಮುತ್ತಿಗೆಹಾಕಿ ಉಳಿದ ಭಾಗವನ್ನು ಸ್ವಾಧೀನಪಡಿಸಿಕೊಳ್ಳಿ; ಅದನ್ನು ನಾನೇ ಹಿಡಿದುಕೊಂಡೆನೆಂಬ ಕೀರ್ತಿ ನನಗೆ ಬೇಡ,” ಎಂದು ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಈಗ ಇತರ ಜನರನ್ನು ಒಟ್ಟುಗೂಡಿಸಿಕೊಂಡುಬಂದು ಈ ನಗರಕ್ಕೆ ಮುತ್ತಿಗೆ ಹಾಕು. ನಾನು ಈ ನಗರವನ್ನು ವಶಪಡಿಸಿಕೊಳ್ಳುವುದಕ್ಕೆ ಮೊದಲೇ ಇದನ್ನು ವಶಪಡಿಸಿಕೋ. ಈ ನಗರವನ್ನು ನಾನು ವಶಪಡಿಸಿಕೊಂಡರೆ ಇದನ್ನು ನನ್ನ ಹೆಸರಿನಿಂದ ಕರೆಯಬೇಕಾಗುವುದು” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಈಗ ನಾನು ಪಟ್ಟಣವನ್ನು ಹಿಡಿದು, ಅದು ನನ್ನ ಹೆಸರಿಗೆ ಕೀರ್ತಿ ಬಾರದ ಹಾಗೆ ನೀನು ಜನರನ್ನು ಕೂಡಿಸಿಕೊಂಡು ಬಂದು, ಪಟ್ಟಣವನ್ನು ಮುತ್ತಿಗೆ ಹಾಕಿ ಹಿಡಿ,” ಎಂದು ಹೇಳಿ ದೂತರನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿ |