2 ಸಮುಯೇಲ 12:3 - ಕನ್ನಡ ಸತ್ಯವೇದವು J.V. (BSI)3 ಬಡವನಿಗೆ ಒಂದು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅವನು ಅದನ್ನು ಕೊಂಡುಕೊಂಡು ಸಾಕುತ್ತಿದ್ದನು. ಅದು ದೊಡ್ಡದಾಗುವವರೆಗೆ ಮಗಳಂತೆ ಅವನ ಸಂಗಡಲೂ ಅವನ ಮಕ್ಕಳ ಸಂಗಡಲೂ ಇದ್ದುಕೊಂಡು ಅವನೊಡನೆ ರೊಟ್ಟಿ ತಿನ್ನುತ್ತಾ ಅವನ ಪಾತ್ರೆಯಲ್ಲೇ ನೀರು ಕುಡಿಯುತ್ತಾ ಇತ್ತು; ಅವನ ಎದೆಯ ಮೇಲೆಯೇ ಒರಗಿಕೊಂಡು ನಿದ್ರೆ ಮಾಡುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಬಡವನಿಗೆ ಒಂದು ಹೆಣ್ಣು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅವನು ಅದನ್ನು ಕೊಂಡುಕೊಂಡು ಸಾಕುತ್ತಿದ್ದನು. ಅದು ಮಗಳಂತೆ ಅವನ ಸಂಗಡಲೂ, ಅವನ ಮಕ್ಕಳ ಸಂಗಡಲೂ ಬೆಳೆಯುತ್ತಾ, ಅವರೊಡನೆ ರೊಟ್ಟಿ ತಿನ್ನುತ್ತಾ, ಅವರ ಪಾತ್ರೆಯಲ್ಲೇ ನೀರು ಕುಡಿಯುತ್ತಾ ಇತ್ತು. ಅವನ ಎದೆ ಮೇಲೆಯೇ ಒರಗಿಕೊಂಡು ನಿದ್ದೆ ಮಾಡುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಬಡವನಿಗೆ ಒಂದು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅದೂ ಕೊಂಡು ತಂದದ್ದು. ಅದನ್ನು ಅಕ್ಕರೆಯಿಂದ ಸಾಕುತ್ತಿದ್ದ. ಅದು ದೊಡ್ಡದಾಗುವವರೆಗೆ ಮಗುವಿನಂತೆ ಅವನ ಸಂಗಡ ಹಾಗೂ ಅವನ ಮಕ್ಕಳ ಸಂಗಡವೆ ಬೆಳೆಯುತ್ತಿತ್ತು. ಅವನೊಡನೆ ರೊಟ್ಟಿ ತಿನ್ನುತ್ತಾ ಅವನ ಪಾತ್ರೆಯಲ್ಲೇ ನೀರು ಕುಡಿಯುತ್ತಾ ಇತ್ತು. ಅವನ ಎದೆಯ ಮೇಲೆಯೇ ಒರಗಿಕೊಂಡು ನಿದ್ರೆಮಾಡುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ಬಡವನ ಹತ್ತಿರ ಅವನೇ ತಂದ ಒಂದು ಕುರಿಮರಿಯ ಹೊರತಾಗಿ ಬೇರೇನೂ ಇರಲಿಲ್ಲ. ಆ ಕುರಿಮರಿಯನ್ನು ಬಹು ಪ್ರೀತಿಯಿಂದ ಆ ಬಡವನು ಸಾಕಿದನು. ಅವನ ಮಕ್ಕಳೊಂದಿಗೆ ಈ ಕುರಿಮರಿಯೂ ಬೆಳೆಯಿತು. ಆ ಕುರಿಮರಿಯು ಬಡವನ ಊಟವನ್ನೇ ತಿನ್ನುತ್ತಿತ್ತು. ಅವನ ಬಟ್ಟಲಿನಲ್ಲಿಯೇ ಅದು ನೀರನ್ನು ಕುಡಿಯುತ್ತಿತ್ತು. ಅವನ ಎದೆಯ ಮೇಲೆಯೇ ಆ ಕುರಿಮರಿಯು ಮಲಗುತ್ತಿತ್ತು. ಆ ಕುರಿಮರಿಯು ಬಡವನಿಗೆ ಮಗಳಂತೆಯೇ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಬಡವನಿಗೆ ತಾನು ಕೊಂಡುಕೊಂಡ ಒಂದು ಚಿಕ್ಕ ಹೆಣ್ಣು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅದು ಅವನ ಸಂಗಡ, ಅವನ ಮಕ್ಕಳ ಸಂಗಡ ಬೆಳೆದು, ಅವನ ಸ್ವಂತ ಆಹಾರ ತಿಂದು, ಅವನ ಪಾತ್ರೆಯಲ್ಲಿ ಕುಡಿದು, ಅವನ ಮಗ್ಗುಲಲ್ಲಿ ಮಲಗಿಕೊಂಡು, ಅವನಿಗೆ ಮಗಳ ಹಾಗಿತ್ತು. ಅಧ್ಯಾಯವನ್ನು ನೋಡಿ |