2 ಸಮುಯೇಲ 12:4 - ಕನ್ನಡ ಸತ್ಯವೇದವು J.V. (BSI)4 ಒಂದು ದಿವಸ ಐಶ್ವರ್ಯವಂತನ ಮನೆಗೆ ಒಬ್ಬ ಪ್ರಯಾಣಿಕನು ಬಂದನು. ಆಗ ಐಶ್ವರ್ಯವಂತನು ತನ್ನ ಕುರಿದನಗಳಿಂದ ಏನೂ ತೆಗೆದುಕೊಳ್ಳಮನಸ್ಸಿಲ್ಲದೆ ಆ ಬಡವನ ಕುರಿಮರಿಯನ್ನು ಹಿಡಿದು ಅತಿಥಿಗೋಸ್ಕರ ಅದನ್ನು ಅಡಿಗೆ ಮಾಡಿಸಿದನು ಎಂಬದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಒಂದು ದಿನ ಐಶ್ವರ್ಯವಂತನ ಮನೆಗೆ ಒಬ್ಬ ಪ್ರಯಾಣಿಕನು ಬಂದನು. ಆಗ ಐಶ್ವರ್ಯವಂತನು ತನ್ನ ಕುರಿದನಗಳಿಂದ ಏನೂ ತೆಗೆದುಕೊಳ್ಳಲು ಮನಸ್ಸಿಲ್ಲದೆ, ಆ ಬಡವನ ಹೆಣ್ಣುಕುರಿಮರಿಯನ್ನು ಹಿಡಿದು ಅತಿಥಿಗೋಸ್ಕರ ಅಡಿಗೆ ಮಾಡಿಸಿದನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಒಂದು ದಿನ ಆ ಐಶ್ವರ್ಯವಂತನ ಮನೆಗೆ ಒಬ್ಬ ಪ್ರಯಾಣಿಕ ಬಂದ. ಆಗ ತನ್ನ ಕುರಿದನಗಳಿಂದ ಏನನ್ನೂ ಕೊಲ್ಲಲು ಆ ಐಶ್ವರ್ಯವಂತನಿಗೆ ಮನಸ್ಸಿಲ್ಲದೆ ಹೋಯಿತು. ಆ ಬಡವನ ಕುರಿಮರಿಯನ್ನೇ ಹಿಡಿದುಕೊಂಡು ಅತಿಥಿಗೋಸ್ಕರ ಅಡಿಗೆ ಮಾಡಿಸಿದ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಆಗ ಶ್ರೀಮಂತನ ಮನೆಗೆ ಒಬ್ಬ ಪ್ರಯಾಣಿಕನು ಬಂದನು. ಶ್ರೀಮಂತನು ಆ ಪ್ರಯಾಣಿಕನಿಗೆ ಊಟವನ್ನು ಕೊಡಲು ಇಚ್ಛಿಸಿದನು. ಆದರೆ ಶ್ರೀಮಂತನು ಆ ಪ್ರಯಾಣಿಕನಿಗೆ ಕೊಡಲು ತನ್ನ ಸ್ವಂತ ಕುರಿಗಳಿಂದಾಗಲಿ ದನಗಳಿಂದಾಗಲಿ ಯಾವುದನ್ನೇ ಆಗಲಿ ತೆಗೆದುಕೊಳ್ಳಲು ಇಚ್ಛಿಸಲಿಲ್ಲ. ಶ್ರೀಮಂತನು ಆ ಬಡವನಿಂದ ಕುರಿಮರಿಯನ್ನು ತೆಗೆದುಕೊಂಡು ಅದನ್ನು ಕೊಯ್ಯಿಸಿ ತನ್ನ ಅತಿಥಿಗಾಗಿ ಅಡಿಗೆ ಮಾಡಿಸಿದನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ಐಶ್ವರ್ಯವಂತನ ಬಳಿಗೆ ಒಬ್ಬ ಪ್ರಯಾಣಿಕನು ಬಂದಾಗ, ಐಶ್ವರ್ಯವಂತನು ಅತಿಥಿಗಾಗಿ ಅಡಿಗೆಯನ್ನು ಮಾಡಿಸುವುದಕ್ಕೆ ತನ್ನ ಕುರಿದನಗಳಲ್ಲಿ ಒಂದನ್ನೂ ತೆಗೆದುಕೊಳ್ಳಲು ಮನಸ್ಸಿಲ್ಲದೆ, ಆ ಬಡವನ ಕುರಿಯನ್ನು ತೆಗೆದುಕೊಂಡು, ತನ್ನ ಬಳಿಗೆ ಬಂದ ಮನುಷ್ಯನಿಗೋಸ್ಕರ ಅದನ್ನು ಅಡಿಗೆ ಮಾಡಿಸಿದನು,” ಎಂದನು. ಅಧ್ಯಾಯವನ್ನು ನೋಡಿ |