Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:7 - ಕನ್ನಡ ಸತ್ಯವೇದವು J.V. (BSI)

7 ಆಗ ನಾತಾನನು ದಾವೀದನನ್ನು ನೋಡಿ - ಆ ಮನುಷ್ಯನು ನೀನೇ. ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ ಹೇಳುವದೇನಂದರೆ - ನಿನ್ನನ್ನು ಅಭಿಷೇಕಿಸಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದವನೂ ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನೂ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ನಾತಾನನು ದಾವೀದನನ್ನು ನೋಡಿ, “ಆ ಮನುಷ್ಯನು ನೀನೇ. ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೇಳುವುದೇನೆಂದರೆ, ‘ನಿನ್ನನ್ನು ಅಭಿಷೇಕಿಸಿ ಇಸ್ರಾಯೇಲ್ಯರಿಗೆ ಅರಸನನ್ನಾಗಿ ಮಾಡಿದವನು, ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ನಾತಾನನು ದಾವೀದನನ್ನು ದಿಟ್ಟಿಸಿ, “ಆ ಮನುಷ್ಯ ನೀನೇ. ಇಸ್ರಯೇಲರ ದೇವರಾದ ಸರ್ವೇಶ್ವರ ನಿನಗೆ ಹೇಳುವುದು ಇದು: ‘ನಿನ್ನನ್ನು ಅಭಿಷೇಕಿಸಿ ಇಸ್ರಯೇಲರ ಅರಸನನ್ನಾಗಿ ಮಾಡಿದವನು ನಾನು; ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನೂ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ನಾತಾನನು ದಾವೀದನಿಗೆ, “ನೀನೇ ಆ ಮನುಷ್ಯ! ಇಸ್ರೇಲರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನಿನ್ನನ್ನು ಇಸ್ರೇಲರ ರಾಜನನ್ನಾಗಿ ಆರಿಸಿದವನು ನಾನೇ. ಸೌಲನಿಂದ ನಿನ್ನನ್ನು ರಕ್ಷಿಸಿದವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ನಾತಾನನು ದಾವೀದನಿಗೆ, “ನೀನೇ ಆ ಮನುಷ್ಯನು! ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ, ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು;

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:7
22 ತಿಳಿವುಗಳ ಹೋಲಿಕೆ  

ಆತನು ಹೊರಗೆ ಬಂದು ಬಹು ಜನರ ಗುಂಪನ್ನು ಕಂಡು ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.


ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟು ಹೋದನು.


ಯೆಹೋವನು ದಾವೀದನನ್ನು ಎಲ್ಲಾ ಶತ್ರುಗಳ ಕೈಗೂ ಸೌಲನ ಕೈಗೂ ಸಿಕ್ಕದಂತೆ ತಪ್ಪಿಸಿದಾಗ ಅವನು ಯೆಹೋವನ ಘನಕ್ಕಾಗಿ ಈ ಪದ್ಯವನ್ನು ರಚಿಸಿ ಹೇಳಿದನು -


ಪ್ರವಾದಿಯು ಅರಸನಿಗೆ - ಸಂಹರಿಸಬೇಕೆಂದು ಹೇಳಿ ನಾನು ನಿನ್ನ ಕೈಗೆ ಒಪ್ಪಿಸಿದ ಮನುಷ್ಯನನ್ನು ನೀನು ಹೋಗಗೊಟ್ಟದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವದು; ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.


ಅದಕ್ಕೆ ಅವನು - ಅವರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ; ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ನಿನ್ನ ಮನೆಯವರೂ ಅದಕ್ಕೆ ಕಾರಣರು.


ಶತ್ರುಗಳಿಂದ ನನ್ನನ್ನು ಬಿಡುಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ; ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ.


ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನಂದರೆ - ಸೇನಾಧೀಶ್ವರನಾದ ಯೆಹೋವನು ಹೀಗನ್ನುತ್ತಾನೆ - ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ಮೇಲೆ ನಾಯಕನನ್ನಾಗಿ ನೇವಿುಸಿದೆನು.


ಅನಂತರ ದಾವೀದನು ಅರಣ್ಯದಲ್ಲಿರುವ ಆಯಾ ಆಶ್ರಯಗಿರಿಗಳಲ್ಲಿ ಇರುತ್ತಿದ್ದು ಕಡೆಗೆ ಜೀಫ್ ಅರಣ್ಯದ ಪರ್ವತ ಪ್ರಾಂತಕ್ಕೆ ಬಂದು ಅಲ್ಲಿ ವಾಸಮಾಡಿದನು. ಸೌಲನು ದಿನಂಪ್ರತಿಯೂ ಅವನನ್ನು ಹುಡುಕುತ್ತಿದ್ದರೂ ದೇವರು ಇವನ ಕೈಗೆ ಒಪ್ಪಿಸಲಿಲ್ಲ.


ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದನು. ಅವನು ಅಗುಳಿಕದಗಳಿಂದ ಭದ್ರವಾಗಿರುವ ಪಟ್ಟಣವನ್ನು ಪ್ರವೇಶಿಸಿದ್ದಾನಲ್ಲಾ; ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು ಅಂದುಕೊಂಡು


ಸೌಲನು - ದಾವೀದನಿಗೆ ಉರಲಾಗಿರುವಂತೆಯೂ ಅವನು ಫಿಲಿಷ್ಟಿಯರ ಕೈಗೆ ಸಿಕ್ಕಿಬೀಳುವಂತೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡು ಅವನಿಗೆ - ನೀನು ನನ್ನ ಅಳಿಯನಾಗುವದಕ್ಕೆ ಈಗ ಎರಡನೆಯ ಸಂದರ್ಭವುಂಟಾಯಿತು ಎಂದು ಹೇಳಿದನು.


ಸಮುವೇಲನು - ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಯೆಹೋವನು ನಿನಗೆ ಇಸ್ರಾಯೇಲ್ಯರಲ್ಲಿ ರಾಜ್ಯಾಭಿಷೇಕಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸಾದಿ.


ಆಗ ಸಮುವೇಲನು - ನೀನು ಬುದ್ಧಿಹೀನಕಾರ್ಯವನ್ನು ಮಾಡಿದೆ; ನೀನು ನಿನ್ನ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕೈಕೊಂಡಿದ್ದರೆ ಆತನು ನಿನ್ನ ರಾಜ್ಯವನ್ನು ಇಸ್ರಾಯೇಲ್ಯರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದನು.


ನನ್ನ ಬಲವಾಗಿರುವ ಯೆಹೋವನೇ, ನಿನ್ನಲ್ಲಿಯೇ ಮಮತೆಯಿಡುತ್ತೇನೆ.


ಆಗ ಸೌಲನು - ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ತಿವಿಯುವೆನೆಂದುಕೊಂಡು ಈಟಿಯನ್ನು ಎಸೆದನು. ದಾವೀದನು ಎರಡು ಸಾರಿ ತಪ್ಪಿಸಿಕೊಂಡನು.


ಆಕೆಯು - ಅರಸನು ಈ ತೀರ್ಪುಕೊಟ್ಟದ್ದರಿಂದ ತನ್ನನ್ನೇ ಅಪರಾಧಿಯೆಂದು ನಿರ್ಣಯಿಸಿದ ಹಾಗಾಯಿತು. ಅವನು ತಳ್ಳಲ್ಪಟ್ಟವನನ್ನು ಸೇರಿಸಿಕೊಳ್ಳಲೊಲ್ಲದೆ ಹೋಗುವದರಿಂದ ದೇವಪ್ರಜೆಗೆ ವಿರೋಧವಾಗಿ ಅದೇ ಆಲೋಚನೆ ಮಾಡಿದ ಹಾಗಾಯಿತು. ಅರಸನು ಹೀಗೇಕೆ ಮಾಡಬೇಕು?


ನೀನು ಹೋಗಿ ಯಾರೊಬ್ಬಾಮನಿಗೆ ಇಸ್ರಾಯೇಲ್ ದೇವರಾದ ಯೆಹೋವನ ಅಪ್ಪಣೆಯನ್ನು ತಿಳಿಸು. ಆತನು ಅವನಿಗೆ - ನಾನು ನಿನ್ನನ್ನು ಜನರ ಮಧ್ಯದಿಂದ ಉನ್ನತಸ್ಥಾನಕ್ಕೆ ತಂದೆನು; ನಿನ್ನನ್ನು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ನಾಯಕನನ್ನಾಗಿ ಮಾಡಿದೆನು.


ರಾಜಾ, ನೀನು ಬೆಳೆದು ಬಲಗೊಂಡಿದ್ದೀ, ನಿನ್ನ ಮಹಿಮೆಯು ವೃದ್ಧಿಯಾಗಿ ಆಕಾಶಕ್ಕೆ ಮುಟ್ಟಿದೆ, ನಿನ್ನ ಆಳಿಕೆಯು ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.


ನಾನು ಕೆಲಸದಲ್ಲಿದ್ದಾಗ ಅವನು ತಪ್ಪಿಸಿಕೊಂಡು ಹೋದನು ಎಂದು ಮೊರೆಯಿಟ್ಟನು. ಇಸ್ರಾಯೇಲ್ಯರ ಅರಸನು ಇವನಿಗೆ - ನಿನಗೆ ಆ ತೀರ್ಪು ಸರಿಯಾಗಿದೆ; ತೀರ್ಮಾನಿಸಿದವನು ನೀನೇ ಅಲ್ಲವೋ ಎಂದು ನುಡಿದನು.


ಆಗ ಪ್ರವಾದಿಯಾದ ಯೆರೆಮೀಯನು ಈ ಮಾತುಗಳನ್ನೆಲ್ಲಾ ಯೆರೂಸಲೇವಿುನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು