Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:9 - ಕನ್ನಡ ಸತ್ಯವೇದವು J.V. (BSI)

9 ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ ನನ್ನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ, ನನ್ನ ದೃಷ್ಟಿಯಲ್ಲಿ ಅನೀತಿಯನ್ನು ಕೆಟ್ಟದ್ದಾಗಿರುವುದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೀಗಿರಲು, ನೀನು ಸರ್ವೇಶ್ವರನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದೇಕೆ? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀನು ಯೆಹೋವನ ಆಜ್ಞೆಯನ್ನು ಏಕೆ ಕಡೆಗಣಿಸಿದೆ? ಆತನು ತಪ್ಪೆಂದು ಹೇಳಿದ ಕಾರ್ಯವನ್ನು ಏಕೆ ಮಾಡಿದೆ? ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ನೀನು ಕೊಲ್ಲಿಸಿದೆ. ಅವನ ಪತ್ನಿಯನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಿದೆ. ಹೌದು, ನೀನು ಅಮ್ಮೋನಿಯರ ಕತ್ತಿಯಿಂದ ಊರೀಯನನ್ನು ಕೊಲ್ಲಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀನು ಯೆಹೋವ ದೇವರ ದೃಷ್ಟಿಗೆ ಈ ಕೆಟ್ಟ ಕಾರ್ಯವನ್ನು ಮಾಡುವಂತೆ ಅವರ ವಾಕ್ಯವನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಖಡ್ಗದಿಂದ ಹೊಡೆದು ಹಾಕಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯಾಗಿ ತೆಗೆದುಕೊಂಡೆ. ಇದಲ್ಲದೆ ಅವನನ್ನು ಅಮ್ಮೋನಿಯರ ಖಡ್ಗದಿಂದ ಕೊಂದು ಹಾಕಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:9
23 ತಿಳಿವುಗಳ ಹೋಲಿಕೆ  

ಆದರೆ ನೀನು ಯೆಹೋವನ ಮಾತನ್ನು ಕೇಳದೆ ಕೊಳ್ಳೆಗಾಗಿ ಎರಗಿ ಆತನಿಗೆ ದ್ರೋಹಮಾಡಿದ್ದೇಕೆ ಅಂದನು.


ಯೆಹೋವನು ಇಂತೆನ್ನುತ್ತಾನೆ - ಯೆಹೂದವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಯೆಹೂದ್ಯರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿ ಆತನ ವಿಧಿಗಳನ್ನು ಕೈಕೊಳ್ಳದೆ ಅವರ ಪಿತೃಗಳು ಹಿಂಬಾಲಿಸಿದ ಸುಳ್ಳುದೇವತೆಗಳ ಮೂಲಕ ಸನ್ಮಾರ್ಗವನ್ನು ತಪ್ಪಿದರಷ್ಟೆ;


ಅದು ನನ್ನ ಮಾತನ್ನು ಕೇಳದೆ ನನ್ನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದರೆ ನಾನು ಮನಸ್ಸನ್ನು ಬದಲಾಯಿಸಿಕೊಂಡು ಅದಕ್ಕೆ ಮಾಡಬೇಕೆಂದಿದ್ದ ಮೇಲನ್ನು ಮಾಡದೆ ಇರುವೆನು.


ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದೀ.


ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವದು; ಹಟವು ವಿುಥ್ಯಾಭಕ್ತಿಗೂ ವಿಗ್ರಹಾರಾಧನೆಗೂ ಸಮಾನವಾಗಿರುವದು. ನೀನು ಯೆಹೋವನ ಮಾತನ್ನು ತಳ್ಳಿಬಿಟ್ಟದ್ದರಿಂದ ಆತನು ನಿನ್ನನ್ನು ಅರಸುತನದಿಂದ ತಳ್ಳಿಬಿಟ್ಟಿದ್ದಾನೆ ಎಂದು ನುಡಿದನು.


ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೂಳೆಯನ್ನು ನುಂಗಿಬಿಡುವ ಹಾಗೂ ಒಣಹುಲ್ಲು ಬೆಂಕಿಯಲ್ಲಿ ಕುಗ್ಗುವಂತೆಯೂ ಅವರ ಬೇರು ಕೊಳೆತು ಅವರ ಹೂವು ದೂಳಾಗಿ ತೂರಿಹೋಗುವದು.


ಆಗ ದಾವೀದನು ಆಗಲೇ ಋತುಸ್ನಾನಮಾಡಿಕೊಂಡಿದ್ದ ಆಕೆಯನ್ನು ದೂತರ ಮುಖಾಂತರವಾಗಿ ಕರೇಕಳುಹಿಸಿದನು; ಆಕೆಯು ಬರಲು ಆಕೆಯನ್ನು ಕೂಡಿದನು.


ನಿನಗೇ ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದಲ್ಲಾ.


ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ತಗ್ಗಿನಲ್ಲಿ ಆಹುತಿಕೊಟ್ಟನು. ಕಣಿಹೇಳಿಸುವದು, ಶಕುನ ನೋಡಿಸುವದು, ಯಂತ್ರಮಂತ್ರಗಳನ್ನು ಮಾಡಿಸುವದು, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಕೆಮಾಡುವದು ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.


ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದದರಿಂದಲೂ ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡದರಿಂದಲೂ ಕತ್ತಿಯು ನಿನ್ನ ಮನೆಯನ್ನು ಬಿಟ್ಟು ಹೋಗುವದಿಲ್ಲ.


ಅದಕ್ಕೆ ಸಮುವೇಲನು - ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವದಿಲ್ಲ; ನೀನು ಯೆಹೋವನ ಮಾತನ್ನು ತಳ್ಳಿಬಿಟ್ಟದ್ದರಿಂದ ಆತನು ನಿನ್ನನ್ನು ಇಸ್ರಾಯೇಲ್ಯರ ಅರಸುತನದಿಂದ ತಳ್ಳಿಬಿಟ್ಟಿದ್ದಾನೆ ಎಂದು ಹೇಳಿ ತಿರುಗಿಕೊಂಡು ಹೊರಡಲು


ಯೆರೂಸಲೇಮನ್ನೂ ಇವನ ಸಂತಾನವನ್ನೂ ಉಳಿಸಿದನು.


ಅವನಿಗೆ - ನೀನು ಕೊಲೆ ಮಾಡಿ ಸ್ವಾಸ್ತ್ಯವನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು ಎಂಬದೇ.


ದೇವರೇ, ನನ್ನ ರಕ್ಷಣಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ಸತ್ಯಸಂಧತೆಯನ್ನು ಕೊಂಡಾಡುವದು.


ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸೇನು; ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ.


ಸರಳಮಾರ್ಗಿಯು ಯೆಹೋವನಿಗೆ ಭಯಪಡುವನು; ವಕ್ರಮಾರ್ಗಿಯು ಆತನನ್ನು ಅಸಡ್ಡೆಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು