Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:12 - ಕನ್ನಡ ಸತ್ಯವೇದವು J.V. (BSI)

12 ಆಕೆಯು - ಅಣ್ಣನೇ, ಬೇಡ; ನನ್ನನ್ನು ಕೆಡಿಸಬೇಡ; ಇಸ್ರಾಯೇಲ್ಯರಲ್ಲಿ ಇಂಥದು ನಡೆಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಕೆಯು; “ಅಣ್ಣನೇ, ಬೇಡ, ನನ್ನನ್ನು ಅಪಮಾನಪಡಿಸಬೇಡ, ಇಸ್ರಾಯೇಲರಲ್ಲಿ ಇಂಥ ನೀಚಕಾರ್ಯವು ನಡೆಯಬಾರದು. ಇಂಥ ಅವಮಾನಕರವಾದ ಕೆಲಸವನ್ನು ಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಕೆ, “ಅಣ್ಣಾ, ಬೇಡ; ನನ್ನನ್ನು ಕೆಡಿಸಬೇಡ; ಇಸ್ರಯೇಲರಲ್ಲಿ ಇಂಥದು ನಡೆಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ತಾಮಾರಳು ಅಮ್ನೋನನಿಗೆ, “ಸೋದರನೇ ಬೇಡ! ನನ್ನನ್ನು ಬಲಾತ್ಕರಿಸದಿರು! ಇಸ್ರೇಲಿನಲ್ಲಿ ಇಂತಹ ಕಾರ್ಯ ಎಂದೆಂದಿಗೂ ನಡೆಯಬಾರದು! ಅಪಮಾನಕರವಾದ ಈ ಕಾರ್ಯವನ್ನು ಮಾಡಬೇಡ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದಕ್ಕವಳು, “ನನ್ನ ಸಹೋದರನೇ, ಬೇಡ. ನನ್ನನ್ನು ಒತ್ತಾಯ ಮಾಡಬೇಡ. ಏಕೆಂದರೆ ಇಸ್ರಾಯೇಲಿನಲ್ಲಿ ಇಂಥ ಕಾರ್ಯ ಮಾಡಕೂಡದು. ಇಂಥ ದುಷ್ಟತನದ ಕೆಲಸ ಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:12
12 ತಿಳಿವುಗಳ ಹೋಲಿಕೆ  

ಅವರು ಇಸ್ರಾಯೇಲ್ಯರಲ್ಲಿ ನಡಿಸಿದ ಇಂಥ ಕೆಟ್ಟ ಹುಚ್ಚುಗೆಲಸವು ಎಲ್ಲರಿಗೂ ಗೊತ್ತಾಗಲೆಂದು ನಾನು ಆಕೆಯ ಶವವನ್ನು ತುಂಡುಮಾಡಿ ಇಸ್ರಾಯೇಲ್ಯರ ಎಲ್ಲಾ ಪ್ರಾಂತಗಳಿಗೆ ಕಳುಹಿಸಿದೆನು.


ಆಗ ಆ ಮುದುಕನು ಹೊರಗೆ ಹೋಗಿ ಅವರಿಗೆ - ಸಹೋದರರೇ, ಇಂಥ ದುಷ್ಟತನವನ್ನು ನಡಿಸಬೇಡಿರಿ; ಅವನು ಆಶ್ರಯಕ್ಕಾಗಿ ನನ್ನ ಮನೆಗೆ ಬಂದಿದ್ದಾನೆ; ನೀವು ಇಂಥ ಹುಚ್ಚುತನವನ್ನು ಮಾಡಬೇಡಿರಿ.


ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಕರೆದುಕೊಂಡು ಅವಳ ಮಾನವನ್ನು ಇವನೂ ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗವಿುಸಿದದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು.


ಯಾಕೋಬನ ಗಂಡುಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದಾಗ ವ್ಯಥೆಪಟ್ಟು ಬಹಳ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳನ್ನು ಕೂಡಿ ಇಸ್ರಾಯೇಲ್ಯರೊಳಗೆ ಬಹಳ ಅವಮಾನಕರವಾದ ಕೆಲಸವನ್ನು ನಡಿಸಿದನು; ಅದು ಆಗಬಾರದ ಕಾರ್ಯ.


ತಂದೆಯ ಮತ್ತೊಬ್ಬ ಹೆಂಡತಿಯಲ್ಲಿ ಹುಟ್ಟಿದವಳ ಸಂಗಮಾಡಬಾರದು; ಆಕೆ ಸಹೋದರಿ.


ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಇಟ್ಟುಕೊಳ್ಳಬಾರದು; ಅವರು ಒಡಹುಟ್ಟಿದವರಾದರೂ ಪರಸ್ತ್ರೀಯಲ್ಲಿ ಹುಟ್ಟಿದವರಾದರೂ ನಿಮಗೆ ಅಕ್ಕತಂಗಿಯರಲ್ಲವೇ.


ಅಲ್ಪಬುದ್ಧಿಯುಳ್ಳ ಅನೇಕ ಯುವಕರು ಕಾಣಿಸಿದರು.


ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ ಅವಳ ತಂದೆಗೆ ಐವತ್ತು ರೂಪಾಯಿ ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗಮಾಡುವದಕ್ಕೆ ಅವನಿಗೆ ಅಧಿಕಾರವಿರುವದಿಲ್ಲ.


ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಮಾನಭಂಗ ಪಡಿಸಿದನು.


ಅವಳು ತಂದೆಯ ಮನೆಯಲ್ಲೇ ಸೂಳೆತನಮಾಡಿ ಇಸ್ರಾಯೇಲ್ಯರೊಳಗೆ ದುರಾಚಾರವನ್ನು ನಡಿಸಿದ್ದರಿಂದ ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ತರಿಸಬೇಕು; ಊರಿನವರೆಲ್ಲರು ಕಲ್ಲೆಸೆದು ಅವಳನ್ನು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡಿಸಿ ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿ ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ ಎಂಬದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು