Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:30 - ಕನ್ನಡ ಸತ್ಯವೇದವು J.V. (BSI)

30 ಅವರು ಇನ್ನೂ ಮಾರ್ಗದಲ್ಲಿರುವಾಗಲೇ ದಾವೀದನಿಗೆ - ಅಬ್ಷಾಲೋಮನು ರಾಜಪುತ್ರರೆಲ್ಲರನ್ನೂ ಕೊಂದುಹಾಕಿದನು, ಒಬ್ಬನನ್ನೂ ಉಳಿಸಲಿಲ್ಲ ಎಂಬ ಸುದ್ದಿ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವರು ಇನ್ನೂ ಮಾರ್ಗದಲ್ಲಿರುವಾಗಲೇ ದಾವೀದನಿಗೆ, “ಅಬ್ಷಾಲೋಮನು ರಾಜಪುತ್ರರೆಲ್ಲರನ್ನು ಕೊಂದು ಹಾಕಿದನು ಒಬ್ಬನನ್ನೂ ಉಳಿಸಲಿಲ್ಲ” ಎಂಬ ಸುದ್ದಿ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅವರು ಇನ್ನೂ ಮಾರ್ಗದಲ್ಲಿರುವಾಗಲೇ ದಾವೀದನಿಗೆ, “ಅಬ್ಷಾಲೋಮನು ರಾಜಪುತ್ರರೆಲ್ಲರನ್ನೂ ಕೊಂದುಹಾಕಿದನು. ಒಬ್ಬನನ್ನೂ ಉಳಿಸಲಿಲ್ಲ,” ಎಂಬ ಸುದ್ದಿ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ರಾಜನ ಗಂಡುಮಕ್ಕಳು ತಮ್ಮ ಮಾರ್ಗದಲ್ಲಿ ಬರುತ್ತಿರುವಾಗಲೇ ದಾವೀದನಿಗೆ ಈ ಸುದ್ದಿಯು ತಲುಪಿತು. “ಅಬ್ಷಾಲೋಮನು ರಾಜನ ಮಕ್ಕಳೆಲ್ಲರನ್ನೂ ಕೊಂದುಹಾಕಿದನು; ಒಬ್ಬ ಮಗನನ್ನೂ ಜೀವಂತವಾಗಿ ಬಿಟ್ಟಿಲ್ಲ” ಎಂಬುದೇ ಆ ಸುದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅವರು ದಾರಿಯಲ್ಲಿರುವಾಗಲೇ ದಾವೀದನಿಗೆ, “ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಕೊಂದುಹಾಕಿದ್ದಾನೆ, ಒಬ್ಬನಾದರೂ ಉಳಿಯಲಿಲ್ಲ,” ಎಂಬ ವರ್ತಮಾನ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:30
3 ತಿಳಿವುಗಳ ಹೋಲಿಕೆ  

ಅಬ್ಷಾಲೋಮನ ಆಳುಗಳು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದರು. ರಾಜಪುತ್ರರೆಲ್ಲರೂ ತಮ್ಮತಮ್ಮ ಹೇಸರಕತ್ತೆಗಳನ್ನು ಹತ್ತಿ ಓಡಿಹೋದರು.


ಆಗ ಅರಸನು ಎದ್ದು ತನ್ನ ಬಟ್ಟೆಗಳನ್ನು ಹರಿದುಕೊಂಡು ನೆಲಕ್ಕೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮತಮ್ಮ ಬಟ್ಟೆಗಳನ್ನು ಹರಕೊಂಡು ಅವನ ಹತ್ತಿರ ನಿಂತರು.


ಆಕೆಯನ್ನು ಕಾಣುತ್ತಲೆ ಅವನು ತನ್ನ ಬಟ್ಟೆಯನ್ನು ಹರಿದುಕೊಂಡು - ಅಯ್ಯೋ ನನ್ನ ಮಗಳೇ, ಮಗಳೇ, ನೀನು ನನ್ನನ್ನು ಕುಗ್ಗಿಸೇ ಬಿಟ್ಟಿಯಲ್ಲಾ; ನನಗೆ ಮಹಾಸಂಕಟವನ್ನುಂಟುಮಾಡಿದಿ. ನಾನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾರೆನು ಎಂದು ಕೂಗಿಕೊಳ್ಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು