Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:32 - ಕನ್ನಡ ಸತ್ಯವೇದವು J.V. (BSI)

32 ಆಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ - ರಾಜಪುತ್ರರೆಲ್ಲರನ್ನೂ ಕೊಂದು ಹಾಕಿದ್ದಾರೆಂದು ನನ್ನ ಒಡೆಯನು ನೆನಸದಿರಲಿ. ಅಮ್ನೋನನೊಬ್ಬನೇ ಸತ್ತಿರಬೇಕು. ಅವನು ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಕೆಡಿಸಿದಾಗಿನಿಂದಲೇ ಹೀಗಾಗುವದೆಂದು ಅಬ್ಷಾಲೋಮನ ಮುಖದಿಂದ ತೋರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ, “ರಾಜಪುತ್ರರೆಲ್ಲರನ್ನೂ ಕೊಂದು ಹಾಕಿದ್ದಾರೆಂದು ನನ್ನ ಒಡೆಯನು ನೆನಸದಿರಲಿ. ಅಮ್ನೋನನೊಬ್ಬನೇ ಸತ್ತಿರಬೇಕು. ಅವನು ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಾಗಿನಿಂದ ಹೀಗಾಗುವುದೆಂದು ಅಬ್ಷಾಲೋಮನ ಮುಖದಿಂದಲೇ ತೋರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ, “ರಾಜಪುತ್ರರೆಲ್ಲರನ್ನೂ ಕೊಂದುಹಾಕಿದ್ದಾರೆಂದು ನನ್ನ ಒಡೆಯರು ನೆನೆಸದಿರಲಿ. ಅಮ್ನೋನನೊಬ್ಬನೇ ಸತ್ತಿರಬೇಕು. ಅವನು ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಕೆಡಿಸಿದಾಗಿನಿಂದಲೇ ಹೀಗಾಗುವುದೆಂದು ಅಬ್ಷಾಲೋಮನ ಮುಖದಿಂದ ತೋರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದರೆ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ, “ರಾಜನ ಗಂಡುಮಕ್ಕಳೆಲ್ಲರನ್ನೂ ಕೊಂದುಹಾಕಿದರೆಂದು ಯೋಚಿಸುವುದು ಸರಿಯಲ್ಲ. ಅಮ್ನೋನನು ಮಾತ್ರ ಸತ್ತಿರಬೇಕು. ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಅಮ್ನೋನನು ಕೆಡಿಸಿದ್ದಕ್ಕಾಗಿ ಅಬ್ಷಾಲೋಮನು ಆ ದಿನದಿಂದ ಅವನನ್ನು ಕೊಲ್ಲಲು ಸಂಚು ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದರೆ ದಾವೀದನ ಸಹೋದರನಾದ ಶಿಮೆಯನ ಮಗನಾಗಿರುವ ಯೋನಾದಾಬನು ದಾವೀದನಿಗೆ, “ಒಡೆಯನೇ, ನನ್ನ ಅರಸನ ಪುತ್ರರೆಲ್ಲರನ್ನು ಕೊಂದು ಹಾಕಿದ್ದಾರೆಂದು ನೆನಸಬೇಡ. ಅಮ್ನೋನನು ಮಾತ್ರವೇ ಸತ್ತನು. ಏಕೆಂದರೆ ಅಬ್ಷಾಲೋಮನು ತನ್ನ ಸಹೋದರಿಯಾದ ತಾಮಾರಳನ್ನು ಅಮ್ಮೋನನು ಬಲಾತ್ಕಾರ ಮಾಡಿದ ದಿನ ಮೊದಲುಗೊಂಡು ಈ ಕಾರ್ಯವನ್ನು ಮಾಡುವುದಕ್ಕೆ ತನ್ನ ಮನಸ್ಸಿನಲ್ಲಿ ನಿಶ್ಚಯಮಾಡಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:32
6 ತಿಳಿವುಗಳ ಹೋಲಿಕೆ  

ನನ್ನ ಶತ್ರುವು ಕೆಡುಕನ್ನು ಹೆರಬೇಕೆಂದು ಪ್ರಸವ ವೇದನೆಯಲ್ಲಿದ್ದಾನೆ; ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ ಶೂನ್ಯವನ್ನೇ ಹೆತ್ತನು ನೋಡಿರಿ.


ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗನು.


ತರುವಾಯ ಇಷಯನು ಶಮ್ಮ ಎಂಬವನನ್ನು ಬರಮಾಡಲು ಸಮುವೇಲನು - ಯೆಹೋವನು ಇವನನ್ನು ಆರಿಸಿಕೊಳ್ಳಲಿಲ್ಲ ಎಂದು ಹೇಳಿದನು.


ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿವಿುತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ - ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು; ಆಗ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು ಅಂದುಕೊಂಡನು.


ಆದದರಿಂದ ರಾಜಪುತ್ರರೆಲ್ಲರೂ ಸತ್ತರೆಂಬ ಸುದ್ದಿಗೆ ಅರಸನು ಲಕ್ಷ್ಯಕೊಡದಿರಲಿ; ಅಮ್ನೋನನೊಬ್ಬನೇ ಸತ್ತಿದ್ದಾನಷ್ಟೆ ಎಂದು ಹೇಳಿ ಸಂತೈಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು