Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:4 - ಕನ್ನಡ ಸತ್ಯವೇದವು J.V. (BSI)

4 ಬಹು ಯುಕ್ತಿವಂತನಾದ ಇವನು ಒಂದು ದಿವಸ ಅಮ್ನೋನನನ್ನು - ರಾಜಪುತ್ರನೇ, ನೀನು ದಿನೇ ದಿನೇ ಕ್ಷೀಣನಾಗುತ್ತಾ ಬರುವದೇಕೆ? ನನಗೆ ತಿಳಿಸುವದಿಲ್ಲವೋ ಎಂದು ಕೇಳಲು ಅವನು - ನನ್ನ ತಮ್ಮನಾದ ಅಬ್ಷಾಲೋಮನ ತಂಗಿ ತಾಮಾರಳ ಮೇಲೆ ನನಗೆ ಮೋಹವುಂಟಾಗಿದೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಬಹು ಯುಕ್ತಿವಂತನಾದ ಇವನು ಒಂದು ದಿನ ಅಮ್ನೋನನನ್ನು, “ರಾಜಪುತ್ರನೇ ನೀನು ದಿನೇ ದಿನೇ ಕ್ಷೀಣನಾಗುತ್ತಾ ಬರುವುದೇಕೆ? ನನಗೆ ತಿಳಿಸುವುದಿಲ್ಲವೋ” ಎಂದು ಕೇಳಲು ಅವನು, “ನನ್ನ ತಮ್ಮನಾದ ಅಬ್ಷಾಲೋಮನ ತಂಗಿ ತಾಮಾರಳ ಮೇಲೆ ನನಗೆ ಮೋಹ ಉಂಟಾಗಿದೆ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವನು ಒಂದು ದಿನ ಅಮ್ನೋನನನ್ನು, “ರಾಜಪುತ್ರರೇ, ನೀವು ದಿನೇದಿನೇ ಕ್ಷೀಣವಾಗುತ್ತಾ ಬರುವುದೇಕೆ? ನನಗೆ ತಿಳಿಸಬಾರದೇ?,” ಎಂದು ಕೇಳಿದನು. ಅವನು, “ನನ್ನ ತಮ್ಮನಾದ ಅಬ್ಷಾಲೋಮನ ತಂಗಿ ತಾಮಾರಳ ಮೇಲೆ ನನಗೆ ಮೋಹವುಂಟಾಗಿದೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೋನಾದಾಬನು ಅಮ್ನೋನನಿಗೆ, “ದಿನದಿಂದ ದಿನಕ್ಕೆ ನೀನು ತೆಳ್ಳಗಾಗುತ್ತಲೇ ಇರುವೆ. ನೀನು ರಾಜನ ಮಗ, ನಿನ್ನ ಬಳಿ ತಿನ್ನಲು ಬಹಳ ಇದ್ದರೂ ನೀನು ತೆಳ್ಳಗಾಗುತ್ತಿರುವುದು ಏಕೆ? ನನಗೆ ತಿಳಿಸು” ಎಂದು ಕೇಳಿದನು. ಅಮ್ನೋನನು ಯೋನಾದಾಬನಿಗೆ, “ನಾನು ತಾಮಾರಳನ್ನು ಮೋಹಿಸಿದ್ದೇನೆ. ಆದರೆ ಅವಳು ನನ್ನ ಸೋದರನಾದ ಅಬ್ಷಾಲೋಮನ ತಂಗಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೋನಾದಾಬನು ಅಮ್ನೋನನಿಗೆ, “ಅರಸನ ಮಗನಾದ ನೀನು ದಿನದಿನಕ್ಕೆ ಏಕೆ ಕ್ಷೀಣವಾಗಿ ಹೋಗುತ್ತೀ? ನನಗೆ ತಿಳಿಸುವುದಿಲ್ಲವೋ?” ಎಂದನು. ಅದಕ್ಕೆ ಅಮ್ನೋನನು ಅವನಿಗೆ, “ನಾನು ನನ್ನ ಸಹೋದರನಾಗಿರುವ ಅಬ್ಷಾಲೋಮನ ಸಹೋದರಿ ತಾಮಾರಳನ್ನು ಪ್ರೀತಿಮಾಡುತ್ತಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:4
11 ತಿಳಿವುಗಳ ಹೋಲಿಕೆ  

ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.


ಕೆಟ್ಟ ಕೆಲಸಕ್ಕೆ ಎರಡು ಕೈಗಳನ್ನು ಹಾಕಿ ಚೆನ್ನಾಗಿ ಮಾಡುತ್ತಾರೆ; ಪ್ರಭುವು [ಧನವನ್ನು] ಕೇಳುತ್ತಾನೆ, ನ್ಯಾಯಾಧಿಪತಿಯು ಲಂಚಕ್ಕೆ [ಕೈಯೊಡ್ಡುತ್ತಾನೆ], ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ; ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ; ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇಹೋಗುವರು ಎಂದು ಯೆಹೋವನು ಅನ್ನುತ್ತಾನೆ.


ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ; ತಮ್ಮ ಪಾಪವನ್ನು ಮರೆಮಾಜದೆ ಸೊದೋವಿುನವರಂತೆ ಮೆರೆಯಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.


ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಕರೆದುಕೊಂಡು ಅವಳ ಮಾನವನ್ನು ಇವನೂ ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗವಿುಸಿದದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು.


ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಇಟ್ಟುಕೊಳ್ಳಬಾರದು; ಅವರು ಒಡಹುಟ್ಟಿದವರಾದರೂ ಪರಸ್ತ್ರೀಯಲ್ಲಿ ಹುಟ್ಟಿದವರಾದರೂ ನಿಮಗೆ ಅಕ್ಕತಂಗಿಯರಲ್ಲವೇ.


ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ - ನೀನು ಇಸ್ರಾಯೇಲ್ಯರ ಅರಸನೋ; ಎದ್ದು ಊಟಮಾಡಿ ಸಂತೋಷದಿಂದಿರು; ನಾನು ನಿನಗೆ ಇಜ್ರೇಲಿನವನಾದ ನಾಬೋತನ ದ್ರಾಕ್ಷೇತೋಟವನ್ನು ಕೊಡುತ್ತೇನೆ ಎಂದು ನುಡಿದು


ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗನು.


ಆಗ ಯೋನಾದಾಬನು ಅವನಿಗೆ - ನೀನು ಅಸ್ವಸ್ಥನಾದವನಂತೆ ಹಾಸಿಗೆಯ ಮೇಲೆ ಮಲಗಿಕೋ, ನಿನ್ನ ತಂದೆಯು ನಿನ್ನನ್ನು ನೋಡುವದಕ್ಕೆ ಬಂದಾಗ ಅವನಿಗೆ - ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನಗಾಗಿ ಆಹಾರ ಸಿದ್ಧಮಾಡುವದಕ್ಕೆ ಕಳುಹಿಸು. ಆಕೆ ನನ್ನೆದುರಿನಲ್ಲಿಯೇ ಸಿದ್ಧಮಾಡಿ ಕೊಡುವದಾದರೆ ಊಟಮಾಡೇನು ಎಂದು ಹೇಳು ಅಂದನು.


ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನನ್ನು - ನೀನು ಯಾಕೆ ಊಟಮಾಡುವದಿಲ್ಲ? ನಿನಗೆ ಯಾವ ಚಿಂತೆ ಇರುತ್ತದೆ ಎಂದು ಕೇಳಲು ಅವನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು