Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:1 - ಕನ್ನಡ ಸತ್ಯವೇದವು J.V. (BSI)

1 ಅರಸನು ಅಬ್ಷಾಲೋಮನಿಗಾಗಿ ಹಂಬಲಿಸುತ್ತಿರುವದನ್ನು ಚೆರೂಯಳ ಮಗನಾದ ಯೋವಾಬನು ತಿಳಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅರಸನು ಅಬ್ಷಾಲೋಮನಿಗಾಗಿ ಹಂಬಲಿಸುತ್ತಿರುವುದನ್ನು ಚೆರೂಯಳ ಮಗನಾದ ಯೋವಾಬನು ತಿಳಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅರಸನು ಅಬ್ಷಾಲೋಮನಿಗಾಗಿ ಹಂಬಲಿಸುತ್ತಿರುವುದು ಚೆರೂಯಳ ಮಗನಾದ ಯೋವಾಬನಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ರಾಜನಾದ ದಾವೀದನಿಗೆ ಅಬ್ಷಾಲೋಮನ ಅಗಲಿಕೆಯಿಂದಾದ ಯಾತನೆಯು ಚೆರೂಯಳ ಮಗನಾದ ಯೋವಾಬನಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅರಸನಾದ ದಾವೀದನ ಹೃದಯವು ಅಬ್ಷಾಲೋಮನ ಕಡೆಗೆ ಇರುವುದನ್ನು ಚೆರೂಯಳ ಮಗ ಯೋವಾಬನಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:1
8 ತಿಳಿವುಗಳ ಹೋಲಿಕೆ  

ಅರಸನಾದ ದಾವೀದನು ಅಮ್ನೋನನ ಮರಣದ ವಿಷಯ ಆದರಣೆಹೊಂದಿ ತನ್ನ ಮಗನಾದ ಅಬ್ಷಾಲೋಮನನ್ನು ತಿರಿಗಿ ನೋಡುವದಕ್ಕೆ ಬಹಳ ಆತುರಪಟ್ಟನು.


ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ್, ಅಬೀಷೈ, ಅಸಾಹೇಲ್ ಎಂಬವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.


ಅನೇಕರು ನ್ಯಾಯಾಧಿಪತಿಯ ಕಟಾಕ್ಷವನ್ನು ಕೋರುವರು; ನ್ಯಾಯತೀರ್ಪು ಯೆಹೋವನಿಂದಲೇ ಆಗುವದು.


ಚೆರೂಯ ಅಬೀಗೈಲರು ಅವರ ಸಹೋದರಿಯರು. ಅಬ್ಷೈ, ಯೋವಾಬ್, ಅಸಾಹೇಲ್ ಎಂಬ ಮೂವರು ಚೆರೂಯಳ ಮಕ್ಕಳು.


ಅರಸನು ತನ್ನ ಮೋರೆಯನ್ನು ಮುಚ್ಚಿಕೊಂಡು - ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ಮಗನೇ ಎಂದು ಬಹಳವಾಗಿ ಗೋಳಾಡಿದನು.


ಅರಸನು ಮಗನಿಗೋಸ್ಕರ ಪ್ರಲಾಪಿಸುತ್ತಿದ್ದಾನೆಂಬದು ಎಲ್ಲಾ ಜನರಿಗೂ ಗೊತ್ತಾದದರಿಂದ ಅವರ ಜಯಘೋಷವು ಗೋಳಾಟವಾಯಿತು.


ಇದನ್ನು ಕೇಳಿ ಅರಸನು ಎದೆಯೊಡೆದವನಾಗಿ - ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ, ಮಗನೇ ಎಂದು ಕೂಗಿ ಅಳುತ್ತಾ ಹೆಬ್ಬಾಗಲಿನ ಮೇಲಿರುವ ಕೋಣೆಗೆ ಹೋದನು.


ತೆಕೋವದಿಂದ ಒಬ್ಬ ಬುದ್ದಿವಂತೆಯಾದ ಸ್ತ್ರೀಯನ್ನು ಕರೇಕಳುಹಿಸಿ ಆಕೆಗೆ - ನೀನು ಪ್ರಿಯರನ್ನು ಕಳಕೊಂಡು ಬಹುದಿವಸಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು