2 ಸಮುಯೇಲ 14:11 - ಕನ್ನಡ ಸತ್ಯವೇದವು J.V. (BSI)11 ಆಗ ಆ ಸ್ತ್ರೀಯು - ಸಮೀಪಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನನ್ನು ಪೂರ್ಣವಾಗಿ ಹಾಳುಮಾಡದಂತೆ ಅರಸನು ತಾನಾಗಿ ನೋಡಿಕೊಳ್ಳುವನೆಂಬದಾಗಿ ನನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ಪ್ರಮಾಣಮಾಡಬೇಕು ಎಂದು ಬೇಡಿಕೊಂಡಳು. ಅದಕ್ಕೆ ಅರಸನು - ಯೆಹೋವನಾಣೆ, ನಿನ್ನ ಮಗನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡುವದಿಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಆ ಸ್ತ್ರೀಯು, “ಸಮೀಪ ಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನನ್ನು ಪೂರ್ಣವಾಗಿ ನಾಶಮಾಡದಂತೆ ಅರಸನು ತಾನಾಗಿ ನೋಡಿಕೊಳ್ಳುವನೆಂಬುದಾಗಿ ನನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ಪ್ರಮಾಣಮಾಡಬೇಕು” ಎಂದು ಬೇಡಿಕೊಂಡಳು. ಅದಕ್ಕೆ ಅರಸನು, “ಯೆಹೋವನಾಣೆ, ನಿನ್ನ ಮಗನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಗ ಆ ಸ್ತ್ರೀ, “ಸಮೀಪ ಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನನ್ನು ಪೂರ್ಣವಾಗಿ ಹಾಳುಮಾಡದಂತೆ ಅರಸರು ತಾವಾಗಿ ನೋಡಿಕೊಳ್ಳುವರೆಂಬುದಾಗಿ ನನ್ನ ದೇವರಾದ ಸರ್ವೇಶ್ವರನ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಬೇಕು,” ಎಂದು ಬೇಡಿಕೊಂಡಳು. ಅದಕ್ಕೆ ದಾವೀದನು, “ಸರ್ವೇಶ್ವರನಾಣೆ, ನಿನ್ನ ಮಗನ ತಲೆಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳ್ಗೊಡುವುದಿಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆ ಸ್ತ್ರೀಯು, “ಅವರು ನನಗೆ ತೊಂದರೆ ಕೊಡದಂತೆ ನೀನು ನೋಡಿಕೊಳ್ಳುವುದಾಗಿ ನಿನ್ನ ದೇವರಾದ ಯೆಹೋವನ ಮೇಲೆ ದಯವಿಟ್ಟು ಪ್ರಮಾಣ ಮಾಡು. ಆಗ ಕೊಲೆಗಾರರನ್ನು ದಂಡಿಸಲು ಇಚ್ಛಿಸುವ ಈ ಜನರು, ನನ್ನ ಮಗನನ್ನು ದಂಡಿಸುವುದಿಲ್ಲ” ಎಂದು ಹೇಳಿದಳು. ದಾವೀದನು, “ಯೆಹೋವನಾಣೆ, ನಿನ್ನ ಮಗನನ್ನು ಯಾವ ವ್ಯಕ್ತಿಯೂ ತೊಂದರೆಗೊಳಿಸುವುದಿಲ್ಲ. ನಿನ್ನ ಮಗನ ತಲೆಯ ಮೇಲಿನ ಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಕೆ, “ಹಾಗಾದರೆ ನನ್ನ ಮಗನು ಸಾಯದಂತೆ ನಾಶನಕ್ಕೆ ನಾಶನವನ್ನು ಕೂಡಿಸುವ ಸೇಡುತೀರಿಸುವವರನ್ನು ತಡೆಯಲು ಅರಸನು ತನ್ನ ದೇವರಾದ ಯೆಹೋವ ದೇವರನ್ನು ಬೇಡಿಕೊಳ್ಳಲಿ,” ಎಂದಳು. ಅದಕ್ಕೆ ದಾವೀದನು, “ಯೆಹೋವ ದೇವರ ಜೀವದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ,” ಎಂದನು. ಅಧ್ಯಾಯವನ್ನು ನೋಡಿ |
ಆಸ್ತಿಯನ್ನು ನೀನೇ ತಕ್ಕೋ ಎಂದು ಹೇಳಲು ಅಬ್ರಾಮನು ಅವನಿಗೆ - ಒಂದು ದಾರವನ್ನಾಗಲಿ ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವದನ್ನೂ ತೆಗೆದುಕೊಳ್ಳುವದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರದೇವರಾಗಿರುವ ಯೆಹೋವನ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ. ಅಬ್ರಾಮನು ನನ್ನ ಸೊತ್ತಿನಿಂದಲೇ ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.