Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:12 - ಕನ್ನಡ ಸತ್ಯವೇದವು J.V. (BSI)

12 ಆಗ ಸ್ತ್ರೀಯು - ನನ್ನ ಒಡೆಯನಿಗೆ ಇನ್ನೊಂದು ಮಾತನ್ನು ಹೇಳಿಕೊಳ್ಳುವದಕ್ಕೆ ಅಪ್ಪಣೆಯಾಗಲಿ ಅನ್ನಲು ಅರಸನು - ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಸ್ತ್ರೀಯು, “ನನ್ನ ಒಡೆಯನೇ, ಇನ್ನೊಂದು ಮಾತನ್ನು ಹೇಳಿಕೊಳ್ಳುವುದಕ್ಕೆ ಅಪ್ಪಣೆಯಾಗಲಿ” ಅನ್ನಲು ಅರಸನು, “ಹೇಳು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ಆ ಸ್ತ್ರೀ, “ನನ್ನ ಒಡೆಯರಿಗೆ ಇನ್ನೊಂದು ಮಾತನ್ನು ಹೇಳಿಕೊಳ್ಳುವುದಕ್ಕೆ ಅಪ್ಪಣೆಯಾಗಲಿ,” ಎಂದಳು. ಅರಸನು, “ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಸ್ತ್ರೀಯು, “ರಾಜನಾದ ನನ್ನ ಒಡಯನೇ, ದಯವಿಟ್ಟು ನಾನು ನಿನಗೆ ಕೆಲವು ಮಾತುಗಳನ್ನು ಹೇಳಲು ಬಿಡು” ಎಂದಳು. “ಹೇಳು” ಎಂದು ರಾಜನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಆ ಸ್ತ್ರೀಯು, “ಅರಸನಾದ ನನ್ನ ಒಡೆಯನ ಸಂಗಡ ನಿನ್ನ ದಾಸಿಯು ಒಂದು ಮಾತನ್ನು ಹೇಳುವುದಕ್ಕೆ ಅಪ್ಪಣೆ ಆಗಬೇಕು,” ಎಂದಳು. ಆಗ ಅವನು, “ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:12
10 ತಿಳಿವುಗಳ ಹೋಲಿಕೆ  

ಆಗ ಅಗ್ರಿಪ್ಪನು ಪೌಲನಿಗೆ - ನೀನು ನಿನ್ನ ಪಕ್ಷದಲ್ಲಿ ಮಾತಾಡಬಹುದು ಅನ್ನಲು ಪೌಲನು ಕೈಯೆತ್ತಿ ಪ್ರತಿವಾದ ಮಾಡಿದ್ದೇನಂದರೆ -


ಯೆಹೋವನೇ, ನೀನು ಧರ್ಮಸ್ವರೂಪನಾಗಿರುವದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು, ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆಗೆ ಏಕೆ ಸುಫಲವಾಗುತ್ತದೆ? ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವದೇಕೆ?


ಆಮೇಲೆ ಅವನ ಪಾದಗಳ ಮೇಲೆ ಬಿದ್ದು ಅವನಿಗೆ - ಸ್ವಾಮೀ, ಅಪರಾಧವು ನನ್ನ ಮೇಲಿರಲಿ; ನಿನ್ನ ದಾಸಿಯು ಮಾತಾಡುವದಕ್ಕೆ ಅಪ್ಪಣೆಯಾಗಲಿ; ಅವಳ ಮಾತನ್ನು ಲಾಲಿಸಬೇಕು.


ಆಗ ಯೆಹೂದನು ಹತ್ತರಕ್ಕೆ ಬಂದು - ನಿನ್ನ ಸೇವಕನಾದ ನಾನು ಒಂದು ಮಾತನ್ನು ಅರಿಕೆಮಾಡಿಕೊಳ್ಳುತ್ತೇನೆ, ನನ್ನ ಮೇಲೆ ಸಿಟ್ಟು ಮಾಡಬಾರದು; ನೀನು ಫರೋಹನಿಗೆ ಸಮಾನನಾಗಿದ್ದೀಯೆಂದು ನಾನು ಬಲ್ಲೆ.


ಅಬ್ರಹಾಮನು - ಸ್ವಾಮೀ, ನಿನಗೆ ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು ಎನ್ನಲು ಆತನು - ಹತ್ತು ಮಂದಿಯ ನಿವಿುತ್ತವೂ ಅದನ್ನು ಉಳಿಸುವೆನು, ನಾಶಮಾಡುವದಿಲ್ಲ ಅಂದನು.


ಅದಕ್ಕೆ ಅಬ್ರಹಾಮನು - ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಸ್ವಾವಿುಯ ಸಂಗಡ ವಾದಿಸುವದಕ್ಕೆ ಧೈರ್ಯಗೊಂಡಿದ್ದೇನೆ;


ಆಗ ಆ ಸ್ತ್ರೀಯು - ಸಮೀಪಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನನ್ನು ಪೂರ್ಣವಾಗಿ ಹಾಳುಮಾಡದಂತೆ ಅರಸನು ತಾನಾಗಿ ನೋಡಿಕೊಳ್ಳುವನೆಂಬದಾಗಿ ನನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ಪ್ರಮಾಣಮಾಡಬೇಕು ಎಂದು ಬೇಡಿಕೊಂಡಳು. ಅದಕ್ಕೆ ಅರಸನು - ಯೆಹೋವನಾಣೆ, ನಿನ್ನ ಮಗನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡುವದಿಲ್ಲ ಎಂದು ಹೇಳಿದನು.


ಆಕೆಯು - ಅರಸನು ಈ ತೀರ್ಪುಕೊಟ್ಟದ್ದರಿಂದ ತನ್ನನ್ನೇ ಅಪರಾಧಿಯೆಂದು ನಿರ್ಣಯಿಸಿದ ಹಾಗಾಯಿತು. ಅವನು ತಳ್ಳಲ್ಪಟ್ಟವನನ್ನು ಸೇರಿಸಿಕೊಳ್ಳಲೊಲ್ಲದೆ ಹೋಗುವದರಿಂದ ದೇವಪ್ರಜೆಗೆ ವಿರೋಧವಾಗಿ ಅದೇ ಆಲೋಚನೆ ಮಾಡಿದ ಹಾಗಾಯಿತು. ಅರಸನು ಹೀಗೇಕೆ ಮಾಡಬೇಕು?


ಯೋವಾಬನು ಬರಲು ಆ ಸ್ತ್ರೀಯು - ನೀನು ಯೋವಾಬನೋ ಎಂದು ಅವನನ್ನು ಕೇಳಿದಳು. ಅವನು - ಹೌದು, ನಾನೇ ಎಂದು ಉತ್ತರಕೊಟ್ಟನು. ಆಕೆಯು - ನಿನ್ನ ದಾಸಿಯ ಮಾತನ್ನು ಕೇಳು ಅನ್ನಲು ಅವನು - ಕೇಳುತ್ತೇನೆ ಅಂದನು.


ಆಮೇಲೆ ಅವನು - ನಿನಗೊಂದು ಮಾತು ಹೇಳಬೇಕೆಂದು ಬಂದಿದ್ದೇನೆ ಅನ್ನಲು ಆಕೆಯು - ಹೇಳು ಅಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು